ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

August 4, 2026
2:07 PM
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ ಪ್ರಬಲ ಚಂಡಮಾರುತದಿಂದ ಅರಬ್ಬಿ ಸಮುದ್ರದ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳು ಕಂಡುಬಂದಿವೆ.

ರಾಜ್ಯದ ಕರಾವಳಿ ಭಾಗದಲ್ಲಿ ಸೋಮವಾರ ರಾತ್ರಿ ಅನಿರೀಕ್ಷಿತವಾಗಿ ಉತ್ತಮ ಮಳೆಯಾಗಿದ್ದು, ಮುಂದಿನ ಕೆಲವು ದಿನಗಳವರೆಗೆ ಕರಾವಳಿ ಹಾಗೂ ಮಲೆನಾಡಿನ ಬಹುತೇಕ ಭಾಗಗಳಲ್ಲಿ ಬಿಟ್ಟುಬಿಟ್ಟು ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆ ಇದೆ.

Advertisement

ಕರಾವಳಿ ಜಿಲ್ಲೆಗಳಲ್ಲಿ, ಕಾಸರಗೋಡು ಜಿಲ್ಲೆಯಲ್ಲಿ ಮಧ್ಯಾಹ್ನದ ಬಳಿಕ ಮಳೆ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದ್ದು, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಉತ್ತಮ ಮಳೆಯ ಮುನ್ಸೂಚನೆ ಇದೆ.

ಪ್ರಸ್ತುತ ಹವಾಮಾನ ಪರಿಸ್ಥಿತಿಯಂತೆ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12 ರವರೆಗೆ ಮಧ್ಯಂತರ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.

ಮಲೆನಾಡಿನ ಕೊಡಗು ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದ್ದು, ಹಾಸನ ಜಿಲ್ಲೆಯ ಸಕಲೇಶಪುರ ಭಾಗ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಮಲೆನಾಡಿನಲ್ಲಿ ಆಗಸ್ಟ್‌ 10ರವರೆಗೆ ಇದೇ ರೀತಿಯ ವಾತಾವರಣ ಮುಂದುವರಿಯುವ ನಿರೀಕ್ಷೆಯಿದೆ.

ಉತ್ತರ ಒಳನಾಡಿನಲ್ಲಿ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ರಾಯಚೂರು, ಬಳ್ಳಾರಿ, ಯಾದಗಿರಿ, ಬೀದರ್ ಹಾಗೂ ಕಲಬುರ್ಗಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ತುಂತುರು ಮಳೆಯಾಗಬಹುದು. ಉತ್ತರ ಒಳನಾಡಿನಲ್ಲಿ ಆಗಸ್ಟ್‌ 9ರವರೆಗೆ ಮಧ್ಯಂತರ ಮಳೆಯ ಮುನ್ಸೂಚನೆ ಇದೆ.

ದಕ್ಷಿಣ ಒಳನಾಡಿನಲ್ಲಿ ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಡ ಸೇರಿ), ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯೂ ಇದೆ. ದಕ್ಷಿಣ ಒಳನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಮಧ್ಯಂತರ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಮುಂಗಾರು ದುರ್ಬಲವಾಗುವ ಸಾಧ್ಯತೆ : ಫೆಸಿಫಿಕ್ ಮಹಾಸಾಗರದ ಜಪಾನ್‌ನ ಆಗ್ನೇಯ ಭಾಗದಲ್ಲಿ ಅತ್ಯಂತ ಪ್ರಬಲ ಚಂಡಮಾರುತ ರೂಪುಗೊಂಡಿರುವ ಪರಿಣಾಮ, ಆಸ್ಟ್ರೇಲಿಯಾ ಭಾಗದಿಂದ ಅರಬ್ಬಿ ಸಮುದ್ರದ ಕಡೆಗೆ ಬೀಸುವ ತೇವಭರಿತ ಮಾರುತಗಳು ಬಂಗಾಳ ಕೊಲ್ಲಿಯ ಮೂಲಕ ತೈವಾನ್ ಹಾಗೂ ಫಿಲಿಪ್ಪೀನ್ಸ್ ಕಡೆಗೆ ಸೆಳೆಯಲ್ಪಡುತ್ತಿವೆ. ಇದರ ಪರಿಣಾಮವಾಗಿ ಅರಬ್ಬಿ ಸಮುದ್ರದ ಮೇಲಿನ ಮುಂಗಾರು ಪ್ರಭಾವ ದಿನ ಕಳೆದಂತೆ ದುರ್ಬಲಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ವಿಶ್ಲೇಷಣೆ ಸೂಚಿಸಿದೆ.

ಈ ಚಂಡಮಾರುತದಿಂದ ಜಪಾನ್‌ನ ದಕ್ಷಿಣ ಕರಾವಳಿ, ದಕ್ಷಿಣ ಕೊರಿಯಾ, ಚೀನಾ ಹಾಗೂ ತೈವಾನ್ ದೇಶಗಳಲ್ಲಿ ಭಾರಿ ಮಳೆ, ಬಿರುಗಾಳಿ ಹಾಗೂ ಅನಾಹುತ ಸಂಭವಿಸುವ ಸಾಧ್ಯತೆಯೂ ಇದೆ.

ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

Intermittent rainfall is expected to continue across Karnataka’s coastal and Malnad regions over the next few days, with coastal rains likely to persist until August 12. Meanwhile, a powerful typhoon near Japan could weaken the Arabian Sea monsoon by diverting moisture towards East Asia.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ
August 4, 2026
7:45 AM
by: ದ ರೂರಲ್ ಮಿರರ್.ಕಾಂ
ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
10:48 PM
by: ದ ರೂರಲ್ ಮಿರರ್.ಕಾಂ
ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ
August 3, 2026
10:24 PM
by: ದ ರೂರಲ್ ಮಿರರ್.ಕಾಂ
ಜಾಗತಿಕ ತಾಪಮಾನ ಏರಿಕೆ ಎಚ್ಚರಿಕೆ – 1 ಡಿಗ್ರಿ ತಾಪಮಾನ ಹೆಚ್ಚಾದರೆ ಭಾರತದ ಭತ್ತದ ಇಳುವರಿ 6.6% ಕುಸಿಯುವ ಸಾಧ್ಯತೆ
August 3, 2026
9:25 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror