Advertisement
ವೆದರ್ ಮಿರರ್

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

Share

ಆಗಸ್ಟ್‌ 8, 2026ರ ಬೆಳಿಗ್ಗೆ 8 ಗಂಟೆಯವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ, ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕ್ರಮೇಣ ಕಡಿಮೆಯಾಗುವ ಲಕ್ಷಣಗಳು ಕಂಡುಬಂದಿವೆ. ಕರಾವಳಿಯಲ್ಲಿ ಆಗಸ್ಟ್‌ 9ರಿಂದ ಅಡಿಕೆ ಸೇರಿದಂತೆ ವಿವಿಧ ತೋಟಗಾರಿಕಾ ಬೆಳೆಗಳಿಗೆ ಔಷಧಿ ಸಿಂಪಡಿಸಲು ಸಣ್ಣ ಮಟ್ಟಿನ ಅವಕಾಶಗಳು ಸಿಗುವ ಸಾಧ್ಯತೆ ಇದೆ.

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸಹ ಮಧ್ಯಂತರ ಮಳೆಯಾಗುವ ಸಾಧ್ಯತೆಯಿದ್ದರೂ ಮಳೆಯ ಪ್ರಮಾಣ ಉಳಿದ ಕರಾವಳಿ ಜಿಲ್ಲೆಗಳಿಗಿಂತ ಕಡಿಮೆ ಇರಬಹುದು.

ಪ್ರಸ್ತುತ ಲೆಕ್ಕಾಚಾರದ ಪ್ರಕಾರ, ಆಗಸ್ಟ್‌ 8 ರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಇಳಿಕೆಯಾಗಲಿದ್ದು, ಮಳೆಯ ನಡುವಿನ ಬಿಡುವಿನ ಅವಧಿ ಹೆಚ್ಚಾಗುವ ನಿರೀಕ್ಷೆಯಿದೆ. ಇದರಿಂದ ಆಗಸ್ಟ್‌ 9ರಿಂದ ತೋಟಗಳಿಗೆ ಔಷಧಿ ಸಿಂಪಡಿಸಲು ಅನುಕೂಲಕರ ಸಮಯ ದೊರೆಯುವ ಸಾಧ್ಯತೆ ಇದೆ.

ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಬಿಟ್ಟು ಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಮಲೆನಾಡು ಪ್ರದೇಶಗಳಲ್ಲಿ ಕೆಲವೆಡೆ ಮಳೆಯ ಪ್ರಮಾಣ ತುಸು ಹೆಚ್ಚಿರಬಹುದು. ಆದರೆ ಆಗಸ್ಟ್‌ 8ರಿಂದ ಮಲೆನಾಡಿನಲ್ಲಿಯೂ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಸಾಧ್ಯತೆಗಳಿವೆ.

ಉತ್ತರ ಒಳನಾಡು : ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಗದಗ, ಬಾಗಲಕೋಟೆ, ವಿಜಯಪುರ, ಬಳ್ಳಾರಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯಾಗಬಹುದು.

ಪ್ರಸ್ತುತ ಅಂದಾಜಿನಂತೆ ಆಗಸ್ಟ್‌ 14ರವರೆಗೆ ಉತ್ತರ ಒಳನಾಡಿನ ವಿವಿಧ ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಸಾಧ್ಯತೆ ಮುಂದುವರಿಯಲಿದೆ.

ದಕ್ಷಿಣ ಒಳನಾಡು: ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ತುಮಕೂರು (ಪಾವಗಡ ಸೇರಿದಂತೆ) ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯಾಗಬಹುದು. ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಕೆಲವೆಡೆ ತುಂತುರು ಮಳೆಯ ಸಾಧ್ಯತೆ ಇದೆ.

ಮುಂಗಾರು ಪರಿಸ್ಥಿತಿ :  ದಕ್ಷಿಣ ಜಪಾನ್ ಸಮುದ್ರ ಭಾಗದಲ್ಲಿ ಉಂಟಾಗಿರುವ ಬೃಹತ್ ಚಂಡಮಾರುತವು ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯ ಮಾರುತಗಳನ್ನು ತನ್ನತ್ತ ಸೆಳೆಯುತ್ತಿರುವ ಪರಿಣಾಮ ಮುಂಗಾರು ಚುರುಕುಗೊಂಡಿದೆ. ಈ ಚಂಡಮಾರುತವು ಸುಮಾರು ಆಗಸ್ಟ್‌ 13ರ ಬಳಿಕ ದುರ್ಬಲಗೊಳ್ಳಲಿದ್ದು, ಅದರ ನಂತರ ರಾಜ್ಯದಲ್ಲಿ ಮುಂಗಾರಿನ ತೀವ್ರತೆ ಸಹ ಕಡಿಮೆಯಾಗುವ ಸಾಧ್ಯತೆ ಇದೆ.

ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

Rainfall is expected to gradually decrease across Karnataka’s coastal and Malnad regions from August 8. Coastal districts may get short dry spells from August 9, creating a favorable window for spraying plant protection chemicals in arecanut and other plantation crops. The southwest monsoon is currently active due to a strong typhoon over the seas near southern Japan, but monsoon intensity may weaken after August 13.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

6 hours ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

13 hours ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

21 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

23 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

1 day ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

1 day ago