Advertisement
ಸುದ್ದಿಗಳು

ಹವಾಮಾನ ವರದಿ | 24-02-2026 | ತುಂತುರು ಮಳೆ, ಮೋಡದ ವಾತಾವರಣ ಮುಂದುವರಿಕೆ | ಮಾರ್ಚ್ ಮೊದಲ ವಾರದಿಂದ ಬಿಸಿಲು ಹೆಚ್ಚಳ ಸಾಧ್ಯತೆ

Share

25.02.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ ಜಿಲ್ಲೆಗಳಲ್ಲಿ ಮೋಡ–ತುಂತುರು ಮಳೆ ಸಾಧ್ಯತೆ : ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೆಖೆಯೊಂದಿಗೆ ಮೋಡದ ವಾತಾವರಣ ಮುಂದುವರಿಯಲಿದೆ. ಕಾಸರಗೋಡು–ದಕ್ಷಿಣ ಕನ್ನಡ ಗಡಿ ಭಾಗ, ಸುಳ್ಯ ಹಾಗೂ ಸುಬ್ರಹ್ಮಣ್ಯ ಸುತ್ತಮುತ್ತ ರಾತ್ರಿ ಹಾಗೂ ಮುಂಜಾನೆ ತುಂತುರು ಮಳೆಯ ಸಾಧ್ಯತೆ ಇದೆ.

ಫೆಬ್ರವರಿ 27ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಆದರೆ ಮಾರ್ಚ್ 1ರಿಂದ ಮಳೆ ಕಡಿಮೆಯಾಗಿದ್ದು, ಮುಂದಿನ ಕೆಲವು ದಿನಗಳ ಕಾಲ ಬಿಸಿಲು ಹಾಗೂ ಮೋಡದ ವಾತಾವರಣ ಮುಂದುವರಿಯಲಿದೆ.

ಮಲೆನಾಡಿನಲ್ಲಿ ರಾತ್ರಿ ತುಂತುರು ಮಳೆ : ಕೊಡಗು ಜಿಲ್ಲೆಯ ಕೆಲವೆಡೆ ರಾತ್ರಿ ಹಾಗೂ ಮುಂಜಾನೆ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಹಾಸನದ ಸಕ್ಲೇಶ್ಪುರ, ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಶೃಂಗೇರಿ ಹಾಗೂ ಕುದುರೆಮುಖ ಭಾಗಗಳಲ್ಲಿ ರಾತ್ರಿ ತುಂತುರು ಮಳೆಯಾಗಬಹುದು.

ಶಿವಮೊಗ್ಗ ಜಿಲ್ಲೆಯಲ್ಲಿಯೂ ಮೋಡದ ವಾತಾವರಣ ಮುಂದುವರಿಯಲಿದೆ. ಫೆಬ್ರವರಿ 27ರಂದು ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಭಾಗಗಳಿಗೆ ಹೊಂದಿಕೊಂಡ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಉತ್ತರ ಒಳನಾಡಿನಲ್ಲಿ ಮೋಡ–ಬಿಸಿಲಿನ ಮಿಶ್ರ ವಾತಾವರಣ : ದಾವಣಗೆರೆ ಜಿಲ್ಲೆಯ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. ಉಳಿದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಮುಂದುವರಿಯಲಿದೆ. ಫೆಬ್ರುವರಿ 28ರವರೆಗೆ ಇದೇ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ.

ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ : ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯಾಗಬಹುದು. ಚಿತ್ರದುರ್ಗ ಹಾಗೂ ತುಮಕೂರಿನ ಪಾವಗಢ ಭಾಗಗಳಲ್ಲಿ ತಡ ರಾತ್ರಿ ತುಂತುರು ಮಳೆಯ ಮುನ್ಸೂಚನೆ ಇದೆ.

ಉಳಿದ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಹಾಗೂ ಬಿಸಿಲು ಮುಂದುವರಿಯಲಿದೆ. ಫೆಬ್ರುವರಿ 28ರವರೆಗೆ ಇದೇ ಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ.

ಮಾರ್ಚ್ ಮೊದಲ ವಾರದಿಂದ ಬಿಸಿಲು ಹೆಚ್ಚಳ: ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತವು ಅಂಡಮಾನ್ ಸಮೀಪ ತಲುಪಿದ್ದು, ಫೆಬ್ರುವರಿ 26ರಂದು ಶಿಥಿಲಗೊಳ್ಳುವ ಸಾಧ್ಯತೆ ಇದೆ. ಇದರಿಂದ ರಾಜ್ಯದಲ್ಲಿ ಮಾರ್ಚ್ ಮೊದಲ ವಾರದಿಂದ ಬಿಸಿಲಿನ ಪ್ರಮಾಣ ಹಾಗೂ ತಾಪಮಾನ ಹೆಚ್ಚಾಗುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ಮೋಡದ ವಾತಾವರಣ ಇದ್ದರೂ, ಬಿಸಿಲಿನ ಅವಧಿ ಹೆಚ್ಚಾಗುವ ಲಕ್ಷಣಗಳು ಕಂಡುಬರುತ್ತಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Light drizzle and cloudy weather are expected across coastal and Malnad regions of Karnataka until February 25, 2026, with isolated thunderstorms possible around February 27. Rainfall will decrease from March 1, and temperatures are likely to rise significantly during the first week of March, with mostly sunny and warm conditions across the state.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್

ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…

1 day ago

ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ

ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…

1 day ago

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

2 days ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

2 days ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

2 days ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

2 days ago