Advertisement
ಸುದ್ದಿಗಳು

ಹವಾಮಾನ ವರದಿ | 25-02-2026 | ಕರಾವಳಿ ಮತ್ತು ಮಲೆನಾಡಿನಲ್ಲಿ ತುಂತುರು ಮಳೆ ಸಾಧ್ಯತೆ | ಫೆ.27 ರಿಂದ ಬಿಸಿಲು ಹೆಚ್ಚಳದ ಸೂಚನೆ

Share

26.02.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಫೆಬ್ರವರಿ 26ರ ಬೆಳಿಗ್ಗೆ 8 ಗಂಟೆಯವರೆಗೆ ಬಿಸಿಲು ಮತ್ತು ಸೆಖೆಯ ಜೊತೆಗೆ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ವಿಶೇಷವಾಗಿ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಗಡಿ ಭಾಗಗಳಲ್ಲಿ ಮಧ್ಯಾಹ್ನ ಅಥವಾ ಸಂಜೆ ವೇಳೆಯಲ್ಲಿ ಸಾಮಾನ್ಯ ಮಳೆಯ ಸಂಭವವಿದೆ.

Advertisement

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಧರ್ಮಸ್ಥಳ ಹಾಗೂ ಉಡುಪಿ ಜಿಲ್ಲೆಯ ಕಾರ್ಕಳ, ಹೆಬ್ರಿ ಸುತ್ತಮುತ್ತ ಪ್ರದೇಶಗಳಲ್ಲಿ ಸಂಜೆ ವೇಳೆಗೆ ತುಂತುರು ಮಳೆಯ ಸಾಧ್ಯತೆ ಇದೆ. ಆದರೆ ಒಟ್ಟಾರೆ ಕರಾವಳಿ ಭಾಗದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುತ್ತಿದ್ದು, ಫೆಬ್ರವರಿ 28ರವರೆಗೆ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. ಮಾರ್ಚ್ 3 ಅಥವಾ 4ರಿಂದ ಮತ್ತೆ ಮೋಡದ ಪ್ರಮಾಣ ಹೆಚ್ಚಾಗುವ ಸಾಧ್ಯತೆಯೂ ಇದೆ.

ಮಲೆನಾಡಿನಲ್ಲಿ ಮೋಡದ ವಾತಾವರಣ, ಕೆಲವು ಕಡೆ ತುಂತುರು ಮಳೆ :  ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲೂ ಮೋಡದ ವಾತಾವರಣ ಕಂಡುಬರುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಮಲೆನಾಡಿನ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ನೀಡಲಾಗಿದೆ.

Advertisement

ಶಿವಮೊಗ್ಗ ಜಿಲ್ಲೆಯಲ್ಲೂ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಆದರೆ ಮುಂದಿನ ಎರಡು ದಿನಗಳಲ್ಲಿ ಮಲೆನಾಡು ಜಿಲ್ಲೆಗಳಲ್ಲೂ ಬಿಸಿಲಿನ ವಾತಾವರಣ ಹೆಚ್ಚಾಗುವ ನಿರೀಕ್ಷೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಉತ್ತರ ಒಳನಾಡಿನಲ್ಲಿ ತುಂತುರು ಮಳೆ, ನಂತರ ಬಿಸಿಲು :  ಬಾಗಲಕೋಟೆ, ಕೊಪ್ಪಳ, ಯಾದಗಿರಿ, ವಿಜಯಪುರ, ರಾಯಚೂರು ಹಾಗೂ ಗುಲ್ಬರ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಕಂಡುಬರುವ ಸಾಧ್ಯತೆ ಇದೆ. ಮಧ್ಯಾಹ್ನ ನಂತರ ಅಥವಾ ಸಂಜೆ ವೇಳೆಯಲ್ಲಿ ತುಂತುರು ಮಳೆಯ ಸಂಭವವಿದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಮತ್ತು ಮೋಡದ ವಾತಾವರಣ ಮಿಶ್ರಿತವಾಗಿರಬಹುದು. ಫೆಬ್ರವರಿ 27ರಿಂದ ಉತ್ತರ ಒಳನಾಡಿನ ಹಲವೆಡೆ ಬಿಸಿಲಿನ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ.

Advertisement

ದಕ್ಷಿಣ ಒಳನಾಡಿನಲ್ಲಿ ಮಳೆಯ ಸಾಧ್ಯತೆ ಕಡಿಮೆ: ಮೈಸೂರು ಜಿಲ್ಲೆಯ ಕೆಲವೆಡೆ ಮಾತ್ರ ತುಂತುರು ಮಳೆಯ ಸಾಧ್ಯತೆ ಇದ್ದು, ಉಳಿದ ಜಿಲ್ಲೆಗಳಲ್ಲಿ ಬಿಸಿಲು ಮತ್ತು ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಮುಂದಿನ ಎರಡು ದಿನಗಳಲ್ಲಿ ದಕ್ಷಿಣ ಒಳನಾಡು ಜಿಲ್ಲೆಗಳಲ್ಲೂ ಬಿಸಿಲಿನ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ.

ರೈತರಿಗೆ ಸೂಚನೆ :  ಈಗಿನ ಹವಾಮಾನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ರೈತರು ಕೃಷಿ ಚಟುವಟಿಕೆಗಳನ್ನು ಯೋಜಿಸುವುದು ಸೂಕ್ತ. ತುಂತುರು ಮಳೆಯ ಸಾಧ್ಯತೆ ಇರುವ ಪ್ರದೇಶಗಳಲ್ಲಿ  ಸಿಂಪಡಣೆ ಮತ್ತು ಕೊಯ್ಲು ಕಾರ್ಯಗಳನ್ನು ಹವಾಮಾನವನ್ನು ಪರಿಶೀಲಿಸಿ ಕೈಗೊಳ್ಳುವುದು ಒಳಿತು.

Advertisement

Karnataka is expected to experience mixed weather conditions until the morning of February 26, 2026. Coastal and Malnad districts may see cloudy skies and light drizzle in some areas, especially during afternoons and evenings. However, rainfall chances are decreasing, and sunny conditions are likely to increase across most regions from February 27 onward. Some cloudiness may return in early March.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

22 hours ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

22 hours ago

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

2 days ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

2 days ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

2 days ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

3 days ago