Advertisement
ವೆದರ್ ಮಿರರ್

ಹವಾಮಾನ ವರದಿ| 23-02-2026 | ಕರಾವಳಿ–ಮಲೆನಾಡಿನಲ್ಲಿ ತುಂತುರು ಮಳೆ ಸಾಧ್ಯತೆ | ಫೆ.27ರವರೆಗೆ ಉಷ್ಣತೆ ಏರಿಕೆ ಲಕ್ಷಣ

Share

24.02.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ ಜಿಲ್ಲೆಗಳು : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಸುಬ್ರಹ್ಮಣ್ಯ ಮತ್ತು ಸುತ್ತಮುತ್ತ ಭಾಗಗಳಲ್ಲಿ ಸಂಜೆ ಹಾಗೂ ರಾತ್ರಿ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. ಆದರೆ ಉಳಿದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಮತ್ತು ಸೆಖೆಯ ವಾತಾವರಣ ಮುಂದುವರಿಯಲಿದೆ.

ಮಲೆನಾಡು ಜಿಲ್ಲೆಗಳು :  ಕೊಡಗು ಜಿಲ್ಲೆಯ ಕೆಲ ಭಾಗಗಳಲ್ಲಿ ಸಂಜೆ ಹಾಗೂ ರಾತ್ರಿ ತುಂತುರು ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಮಾನ್ಯವಾಗಿ ಬಿಸಿಲಿನೊಂದಿಗೆ ಅಲ್ಲಲ್ಲಿ ಮೋಡದ ವಾತಾವರಣ ಕಂಡುಬರುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಉತ್ತರ ಒಳನಾಡು :   ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮಧ್ಯಂತರ ಮೋಡದ ವಾತಾವರಣ ಮುಂದುವರಿಯಲಿದೆ. ಮಳೆಯ ಸಾಧ್ಯತೆ ಅತಿ ಕಡಿಮೆ.

ದಕ್ಷಿಣ ಒಳನಾಡು :  ಮೈಸೂರಿನ ಸುತ್ತಮುತ್ತ ಪ್ರದೇಶಗಳಲ್ಲಿ ಸಂಜೆ ಹಾಗೂ ರಾತ್ರಿ ತುಂತುರು ಮಳೆಯ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಮತ್ತು ಮೋಡದ ವಾತಾವರಣ ಇರಲಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಮುಂದಿನ ದಿನಗಳು ಹೇಗೆ..? :  ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಪೂರ್ವದತ್ತ ಚಲಿಸುತ್ತಿದ್ದು, ಇನ್ನೆರಡು ದಿನಗಳಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇದರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದ್ದು, ಕ್ರಮೇಣ ಉಷ್ಣತೆ ಹೆಚ್ಚಾಗುವ ಲಕ್ಷಣಗಳಿವೆ. ಈ ರೀತಿಯ ವಾತಾವರಣವು ಫೆಬ್ರವರಿ 27ರವರೆಗೆ ಮುಂದುವರಿಯುವ ಸಾಧ್ಯತೆ ಇದೆ.

Light drizzle is expected in parts of Coastal Karnataka (Sullia, Subrahmanya) and Kodagu, while most districts in Karnataka will experience sunny and warm conditions. The low-pressure system over the Bay of Bengal is weakening, which may reduce rainfall chances and lead to a gradual rise in temperatures across the state until February 27, 2026.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್

ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…

12 hours ago

ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ

ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…

12 hours ago

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

1 day ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

1 day ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

1 day ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

1 day ago