Advertisement
ವೆದರ್ ಮಿರರ್

ಹವಾಮಾನ ವರದಿ | 18-02-2026 | ಕರ್ನಾಟಕದಲ್ಲಿ ಬಿಸಿಲಿನ ನಡುವೆ ತುಂತುರು ಮಳೆ ಸಾಧ್ಯತೆ

Share

19.02.2026 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ ಜಿಲ್ಲೆಗಳು : ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಉಷ್ಣಾಂಶದೊಂದಿಗೆ ಮೋಡದ ವಾತಾವರಣ ಕಂಡುಬರುವ ಸಾಧ್ಯತೆ ಇದೆ. ಪುತ್ತೂರು, ಸುಳ್ಯ ತಾಲೂಕಿನ ಕೇರಳ ಗಡಿ ಭಾಗಗಳಲ್ಲಿ ಮಧ್ಯಾಹ್ನ ನಂತರ ಹಾಗೂ ಸುಳ್ಯ, ಸುಬ್ರಹ್ಯಣ್ಯ ಸುತ್ತಮುತ್ತ ಸಂಜೆ ತುಂತುರು ಮಳೆಯ ಸಾಧ್ಯತೆಗಳಿವೆ. ಉಡುಪಿ ಜಿಲ್ಲೆಯ ಕೆಲವೆಡೆ ಸಣ್ಣ ಪ್ರಮಾಣದ ಹನಿ ಮಳೆಯಾಗುವ ಸಾಧ್ಯತೆ ಇದೆ. ಫೆಬ್ರುವರಿ 20 ರಿಂದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ನೀಡಲಾಗಿದೆ.

ಮಲೆನಾಡು ಜಿಲ್ಲೆಗಳು: ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಧ್ಯಾಹ್ನ ನಂತರ ಮೋಡದ ವಾತಾವರಣ ಇರಲಿದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. ಫೆಬ್ರುವರಿ 20 ರಿಂದ ಮಲೆನಾಡು ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯಾಗುವ ಲಕ್ಷಣಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಉತ್ತರ ಒಳನಾಡು ಜಿಲ್ಲೆಗಳು:  ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆಯೊಂದಿಗೆ ಹಗುರ ಮೋಡದ ವಾತಾವರಣ ಇರಲಿದೆ. ಮಳೆಯ ಸಾಧ್ಯತೆ ಕಡಿಮೆ ಇದ್ದು, ಮುಂದಿನ ದಿನಗಳಲ್ಲಿ ಹಗಲಿನ ತಾಪಮಾನ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡು ಜಿಲ್ಲೆಗಳು: ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಮತ್ತು ಅಧಿಕ ತಾಪಮಾನ ಕಂಡುಬರುವ ಸಾಧ್ಯತೆ ಇದೆ. ಫೆಬ್ರುವರಿ 19ರಿಂದ ಮೋಡದ ವಾತಾವರಣ ಕಂಡುಬರುವ ಸಾಧ್ಯತೆ ಇದ್ದು, ಫೆಬ್ರುವರಿ 20ರಿಂದ ಕೆಲವೆಡೆ ಮಳೆಯಾಗುವ ಲಕ್ಷಣಗಳಿವೆ.

ವಾಯುಭಾರ ಕುಸಿತದ ಪರಿಣಾಮ : ಶ್ರೀಲಂಕಾ ದಕ್ಷಿಣ ಕರಾವಳಿಯ ಬಳಿ ಇರುವ ವಾಯುಭಾರ ಕುಸಿತ ಪಶ್ಚಿಮ ದಿಕ್ಕಿಗೆ ಚಲಿಸುವ ಲಕ್ಷಣಗಳಿವೆ. ಫೆಬ್ರುವರಿ 20 ಮತ್ತು 21ರಂದು ಉತ್ತರ ಶ್ರೀಲಂಕಾ ಕರಾವಳಿಯಲ್ಲಿ ಮತ್ತೊಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದೆ. ಇದರ ಪರಿಣಾಮವಾಗಿ ಕರ್ನಾಟಕದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Weather forecast indicates hot conditions with cloudy skies and chances of drizzle in coastal, Malnad, and south interior Karnataka from February 20. The changes are influenced by low-pressure systems near Sri Lanka, which may bring scattered rainfall across several districts.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್

ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…

4 hours ago

ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ

ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…

4 hours ago

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

18 hours ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

19 hours ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

20 hours ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

20 hours ago