ಹವಾಮಾನ ವರದಿ | 16-03-2026 | ಹವಾಮಾನದಲ್ಲಿ ಏಕಾಏಕಿ ಬದಲಾವಣೆ – ರಾಜ್ಯದ ಹಲವೆಡೆ ಸಂಜೆ ಮಳೆ ಸಾಧ್ಯತೆ

March 16, 2026
3:26 PM
ರಾಜ್ಯದ ವಿವಿಧ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಮಾರ್ಚ್‌ 18ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ನಿರೀಕ್ಷೆಯಿದೆ.

ಮಾರ್ಚ್‌ 17ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ, ಕಾಸರಗೋಡು ಜಿಲ್ಲೆಯಲ್ಲಿ ಬಿಸಿಲಿನ ನಡುವೆ ಮಧ್ಯಾಹ್ನ ನಂತರ ಹಾಗೂ ಸಂಜೆ ವೇಳೆಗೆ ಮೋಡದ ವಾತಾವರಣ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಗಾಳಿಯ ಪ್ರಭಾವ ಹೆಚ್ಚಾದರೆ ಮಾತ್ರ ಮಳೆಯ ಸಂಭವವಿದೆ.

ಕರಾವಳಿ ಜಿಲ್ಲೆ : ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಮಧ್ಯಾಹ್ನ ಬಳಿಕ ಹಾಗೂ ಸಂಜೆ ವೇಳೆಗೆ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಗಾಳಿಯ ಒತ್ತಡ ಹೆಚ್ಚಾದರೆ ಇತರ ಭಾಗಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ.

ಮಲೆನಾಡಿನಲ್ಲಿ :  ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹಲವೆಡೆ ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ತಿಳಿಸಿದೆ.

ಉತ್ತರ ಒಳನಾಡಿನಲ್ಲಿ ಗುಡುಗು-ಮಳೆ : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ, ವಿಜಯನಗರ, ಬಳ್ಳಾರಿ, ವಿಜಯಪುರ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಸಮಯದಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಉಳಿದ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನಲ್ಲಿ ಮೋಡ – 18ರಿಂದ ಮಳೆ ಸಾಧ್ಯತೆ :  ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆ ಇದೆ.
ಈಗಿನ ಸ್ಥಿತಿಗತಿಗಳ ಪ್ರಕಾರ ಮಾರ್ಚ್‌ 18ರಿಂದ ದಕ್ಷಿಣ ಒಳನಾಡಿನ ಭಾಗಗಳಲ್ಲಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ರೈತರಿಗೆ ಸಲಹೆ:

  • ಸಂಜೆ ವೇಳೆಯ ಮಳೆಯ ಸಾಧ್ಯತೆ ಇದೆ. ಕೊಯ್ಲು ಮಾಡಿದ ಬೆಳೆಗಳನ್ನು ಸುರಕ್ಷಿತವಾಗಿ ಸಂಗ್ರಹಿಸಿಡುವುದು ಉತ್ತಮ.

  • ಗಾಳಿ-ಗುಡುಗು ಹೆಚ್ಚಾಗುವ ಸಂದರ್ಭ ತೋಟ ಹಾಗೂ ಹೊಲಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು.

  • ಹೊಸ ಬಿತ್ತನೆ ಅಥವಾ ಸಿಂಪಡಣೆ ಕೆಲಸಗಳನ್ನು ಹವಾಮಾನ ಸ್ಥಿತಿಯನ್ನು ನೋಡಿ ಯೋಜಿಸುವುದು ಒಳಿತು.

Weather forecasts indicate cloudy conditions across Karnataka with chances of scattered thunderstorms and evening rains in Coastal, Malnad, and North Interior districts till March 17 morning. Rain activity is likely to increase in South Interior Karnataka from March 18 onwards.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಸುಬ್ರಾಯ ಚೊಕ್ಕಾಡಿ ಅವರಿಗೆ ‘ಮೋಹನ ಮುರಳಿ ಕವಿಸಮ್ಮಾನ’ ಪ್ರದಾನ
November 21, 2026
8:36 PM
by: ದ ರೂರಲ್ ಮಿರರ್.ಕಾಂ
ಕಲ್ಮಡ್ಕದಲ್ಲೂ ಶುರುವಾಯಿತು ಸ್ವಚ್ಛತಾ ಆಂದೋಲನ – ಯುವಶಕ್ತಿಗೆ ಗ್ರಾಮಸ್ಥರ ಸಾಥ್!
November 21, 2026
8:19 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22.11.2026 | ನವೆಂಬರ್ 23ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ | ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಿಗೆ ಹಿಂಗಾರು ಮಳೆ ಮುನ್ಸೂಚನೆ
November 21, 2026
1:59 PM
by: ಸಾಯಿಶೇಖರ್ ಕರಿಕಳ
Free notebook distribution for Karnataka government school students
ಎಲ್‌ಕೆಜಿಯಿಂದ 12ನೇ ತರಗತಿವರೆಗೆ ಉಚಿತ ನೋಟ್‌ಬುಕ್ – ಮುಂದಿನ ಶೈಕ್ಷಣಿಕ ವರ್ಷದಿಂದ ಜಾರಿ
November 21, 2026
11:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror