ಮಾರ್ಚ್ 17ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ, ಕಾಸರಗೋಡು ಜಿಲ್ಲೆಯಲ್ಲಿ ಬಿಸಿಲಿನ ನಡುವೆ ಮಧ್ಯಾಹ್ನ ನಂತರ ಹಾಗೂ ಸಂಜೆ ವೇಳೆಗೆ ಮೋಡದ ವಾತಾವರಣ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಗಾಳಿಯ ಪ್ರಭಾವ ಹೆಚ್ಚಾದರೆ ಮಾತ್ರ ಮಳೆಯ ಸಂಭವವಿದೆ.
ಕರಾವಳಿ ಜಿಲ್ಲೆ : ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಮಧ್ಯಾಹ್ನ ಬಳಿಕ ಹಾಗೂ ಸಂಜೆ ವೇಳೆಗೆ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಗಾಳಿಯ ಒತ್ತಡ ಹೆಚ್ಚಾದರೆ ಇತರ ಭಾಗಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ.
ಮಲೆನಾಡಿನಲ್ಲಿ : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹಲವೆಡೆ ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ತಿಳಿಸಿದೆ.
ಉತ್ತರ ಒಳನಾಡಿನಲ್ಲಿ ಗುಡುಗು-ಮಳೆ : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ, ವಿಜಯನಗರ, ಬಳ್ಳಾರಿ, ವಿಜಯಪುರ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಸಮಯದಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಉಳಿದ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನಲ್ಲಿ ಮೋಡ – 18ರಿಂದ ಮಳೆ ಸಾಧ್ಯತೆ : ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆ ಇದೆ.
ಈಗಿನ ಸ್ಥಿತಿಗತಿಗಳ ಪ್ರಕಾರ ಮಾರ್ಚ್ 18ರಿಂದ ದಕ್ಷಿಣ ಒಳನಾಡಿನ ಭಾಗಗಳಲ್ಲಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ರೈತರಿಗೆ ಸಲಹೆ:
ಸಂಜೆ ವೇಳೆಯ ಮಳೆಯ ಸಾಧ್ಯತೆ ಇದೆ. ಕೊಯ್ಲು ಮಾಡಿದ ಬೆಳೆಗಳನ್ನು ಸುರಕ್ಷಿತವಾಗಿ ಸಂಗ್ರಹಿಸಿಡುವುದು ಉತ್ತಮ.
ಗಾಳಿ-ಗುಡುಗು ಹೆಚ್ಚಾಗುವ ಸಂದರ್ಭ ತೋಟ ಹಾಗೂ ಹೊಲಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು.
ಹೊಸ ಬಿತ್ತನೆ ಅಥವಾ ಸಿಂಪಡಣೆ ಕೆಲಸಗಳನ್ನು ಹವಾಮಾನ ಸ್ಥಿತಿಯನ್ನು ನೋಡಿ ಯೋಜಿಸುವುದು ಒಳಿತು.
Weather forecasts indicate cloudy conditions across Karnataka with chances of scattered thunderstorms and evening rains in Coastal, Malnad, and North Interior districts till March 17 morning. Rain activity is likely to increase in South Interior Karnataka from March 18 onwards.
ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್‌ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…
ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…