Advertisement
ವೆದರ್ ಮಿರರ್

ಹವಾಮಾನ ವರದಿ | 19-02-2026 | ಕರಾವಳಿ–ಮಲೆನಾಡಿನಲ್ಲಿ ಫೆ.21 ರಿಂದ ಮಳೆ ಸಾಧ್ಯತೆ ಹೆಚ್ಚಳ

Share

20.02.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿಯಲ್ಲಿ ಸಂಜೆ ತುಂತುರು ಮಳೆ ಸಾಧ್ಯತೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಹಗಲಿನಲ್ಲಿ ಬಿಸಿಲು ಇದ್ದರೂ, ಸಂಜೆ ವೇಳೆಗೆ ಹಗುರ ಮೋಡದ ವಾತಾವರಣ ನಿರ್ಮಾಣವಾಗಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ, ಚಾರ್ಮಾಡಿ ಸುತ್ತಮುತ್ತ ಪ್ರದೇಶಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಫೆಬ್ರವರಿ 21ರಿಂದ ಮುಂದಿನ ಒಂದು ವಾರದ ಕಾಲ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಜೊತೆಗೆ ಭಾಗಶಃ ಮೋಡದ ವಾತಾವರಣ ಮುಂದುವರಿಯಲಿದೆ.

ಮಲೆನಾಡಿನಲ್ಲಿ ಮೋಡ, ತುಂತುರು ಮಳೆಯ ಮುನ್ಸೂಚನೆ :  ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಬಿಸಿಲಿನ ಜೊತೆಗೆ ಸಂಜೆ ವೇಳೆ ಮೋಡದ ವಾತಾವರಣ ಕಂಡುಬರುವ ಸಾಧ್ಯತೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಕೂಡ ಮೋಡದ ವಾತಾವರಣ ಹೆಚ್ಚಾಗಲಿದ್ದು, ಶೃಂಗೇರಿ, ಕುದುರೆಮುಖ ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಫೆಬ್ರವರಿ 21ರಿಂದ 27ರವರೆಗೆ ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಮೋಡದ ವಾತಾವರಣ ಹೆಚ್ಚಾಗಲಿದ್ದು, ಒಂದೆರಡು ಕಡೆ ತುಂತುರು ಮಳೆಯ ಸಂಭವವಿದೆ.

ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಕೆ :  ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಫೆಬ್ರವರಿ 21ರಿಂದ ಕೆಲವೆಡೆ ಮೋಡದ ವಾತಾವರಣ ಕಂಡುಬಂದರೂ, ಮಳೆಯ ಸಾಧ್ಯತೆ ಕಡಿಮೆ.

ದಕ್ಷಿಣ ಒಳನಾಡಿನಲ್ಲಿ ಮೋಡ, ಮಳೆ ಸಾಧ್ಯತೆ :  ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಸಂಜೆ ವೇಳೆ ಮೋಡದ ವಾತಾವರಣ ಕಂಡುಬರುವ ಸಾಧ್ಯತೆ ಇದೆ. ಫೆಬ್ರವರಿ 21ರಿಂದ ಈ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.

ಮಳೆಗೆ ಕಾರಣ ಏನು? :  ಬಂಗಾಳಕೊಲ್ಲಿಯ ಶ್ರೀಲಂಕಾ ದಕ್ಷಿಣ ಕರಾವಳಿಯಲ್ಲಿ ಉಂಟಾಗಿದ್ದ ತಿರುವಿಕೆಯು ಶಿಥಿಲಗೊಳ್ಳುತ್ತಿದೆ. ಆದರೆ ಫೆಬ್ರವರಿ 21ರಂದು ಉತ್ತರ ಶ್ರೀಲಂಕಾ ಕರಾವಳಿಯಲ್ಲಿ ಮತ್ತೊಂದು ತಿರುವಿಕೆಯು ಉಂಟಾಗುವ ಸಾಧ್ಯತೆ ಇದೆ. ಇದರ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗಾಳಿಯ ಚಲನೆ ಹೆಚ್ಚಾಗಿ, ಮೋಡ ಹಾಗೂ ಮಳೆಯ ಸಾಧ್ಯತೆ ಹೆಚ್ಚಾಗಲಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Rainfall is likely to increase in Karnataka’s coastal, Malnad, and south interior districts from February 21 due to a cyclonic circulation near Sri Lanka and wind flow from the Bay of Bengal. Light showers are expected in areas like Dharmasthala, Charmadi, Sringeri, and Kudremukh, while north interior districts will mostly remain

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

5 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

5 hours ago

ರಾಜ್ಯಾದ್ಯಂತ ಆರ್ಭಟಿಸುತ್ತಿರುವ ವರುಣ – ಭದ್ರಾ-ನೇತ್ರಾವತಿ ಅಪಾಯದ ಮಟ್ಟ ಮೀರಿ ಪ್ರವಾಹ

ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…

6 hours ago

ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ರೈಲು ಸಂಚಾರಕ್ಕೆ ತಾತ್ಕಾಲಿಕ ಅಡ್ಡಿ

ಶಿರಾಡಿ ಘಾಟ್‌ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…

6 hours ago

ಮೊಬೈಲ್ ನೋಡುತ್ತಾ ಊಟ ಮಾಡಬೇಡಿ, ಶಿಸ್ತಿನ ಜೀವನವೇ ಆರೋಗ್ಯದ ರಹಸ್ಯ – ರಾಘವೇಶ್ವರ ಶ್ರೀ

ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…

17 hours ago

ಭಾರೀ ಮಳೆಯ ಎಚ್ಚರಿಕೆ | ಕರಾವಳಿ ಕರ್ನಾಟಕದಲ್ಲಿ ಅತಿ ಭಾರೀ ಮಳೆ – ಪ್ರವಾಹ- ಭೂಕುಸಿತದ ಎಚ್ಚರಿಕೆ

ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಕರ್ನಾಟಕ ಹಾಗೂ ಕೇರಳದಲ್ಲಿ ಇಂದು ಭಾರೀ ಮಳೆಯ…

21 hours ago