ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

February 21, 2026
2:42 PM
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ. ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಹೆಚ್ಚು ಪರಿಣಾಮ ಸಾಧ್ಯತೆ. ಸಂಪೂರ್ಣ ವಿವರ ಇಲ್ಲಿದೆ.

22.02.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement

ಕರಾವಳಿ ಜಿಲ್ಲೆಗಳ ಸ್ಥಿತಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬೆಳಿಗ್ಗೆ ಉತ್ತಮ ಬಿಸಿಲಿನ ವಾತಾವರಣವಿದ್ದು, ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಧ್ಯಾಹ್ನ ನಂತರ ಮೋಡದ ವಾತಾವರಣ ಕಂಡುಬರುವ ಸಾಧ್ಯತೆ ಇದೆ.  ಪ್ರಸ್ತುತ ಮುನ್ಸೂಚನೆಯ ಪ್ರಕಾರ ಕರಾವಳಿ ಜಿಲ್ಲೆಗಳಲ್ಲಿ ಫೆಬ್ರವರಿ 27ರವರೆಗೆ ಮಳೆಯ ಸಂಭವವಿದ್ದರೂ, ಇದು ಬಂಗಾಳಕೊಲ್ಲಿಯಲ್ಲಿ ಉಂಟಾಗುತ್ತಿರುವ ವಾಯುಭಾರ ಕುಸಿತದ ಚಲನೆಯ ಮೇಲೆ ಅವಲಂಬಿತವಾಗಿರುತ್ತದೆ.

ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಲಕ್ಷಣ :  ಕೊಡಗು ಜಿಲ್ಲೆಯ ಕೆಲವು ಭಾಗಗಳಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಭಾಗಗಳಿಗೆ ಹೊಂದಿಕೊಂಡ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದ್ದರೆ, ಉಳಿದ ಪ್ರದೇಶಗಳಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿಯೂ ಮೋಡದ ವಾತಾವರಣದ ಜೊತೆಗೆ ತುಂತುರು ಮಳೆಯ ಸಾಧ್ಯತೆ ಇದೆ. ಮಲೆನಾಡು ಜಿಲ್ಲೆಗಳಲ್ಲಿ ಫೆಬ್ರವರಿ 25ರವರೆಗೆ ಮಳೆಯ ಲಕ್ಷಣಗಳು ಮುಂದುವರಿಯುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಸ್ಥಿತಿ :  ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ, ವಿಜಯನಗರ, ಬಳ್ಳಾರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಮೋಡದ ವಾತಾವರಣ ಕಂಡುಬರುವ ಸಾಧ್ಯತೆ ಇದೆ. ಫೆಬ್ರವರಿ 22ರಿಂದ 24ರವರೆಗೆ ಕೆಲವು ಭಾಗಗಳಲ್ಲಿ ತುಂತುರು ಮಳೆಯ ಸಂಭವವಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳು :  ಮೈಸೂರು, ಚಾಮರಾಜನಗರ ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ರಾತ್ರಿ ವೇಳೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿತ್ರದುರ್ಗ ಜಿಲ್ಲೆಯ ಕೆಲವೆಡೆ ತುಂತುರು ಮಳೆಯ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಕಂಡುಬರುವ ಸಾಧ್ಯತೆ ಇದೆ. ಈ ಪ್ರದೇಶಗಳಲ್ಲಿ ಫೆಬ್ರವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮಳೆಯ ಮಿಶ್ರ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ :  ಉತ್ತರ ಶ್ರೀಲಂಕಾ ಭಾಗದ ಬಳಿ ಬಂಗಾಳಕೊಲ್ಲಿಯಲ್ಲಿ ಉಂಟಾಗುತ್ತಿರುವ ವಾಯುಭಾರ ಕುಸಿತವು ಪೂರ್ವಾಭಿಮುಖವಾಗಿ ಚಲಿಸುವ ಲಕ್ಷಣಗಳಿವೆ. ಇದರಿಂದ ಬಂಗಾಳಕೊಲ್ಲಿಯ ಕಡೆಯಿಂದ ಬೀಸುತ್ತಿರುವ ಗಾಳಿಯ ತೀವ್ರತೆ ಕಡಿಮೆಯಾಗುವ ಸಾಧ್ಯತೆ ಇದೆ. ಇದರಿಂದಾಗಿ ಮಳೆಯ ಪ್ರಮಾಣ ಮುನ್ಸೂಚನೆಯಲ್ಲಿದ್ದಷ್ಟು ತೀವ್ರವಾಗದಿರುವ ಸಾಧ್ಯತೆಯಿದ್ದು, ಮುಂದಿನ ದಿನಗಳಲ್ಲಿ ಹವಾಮಾನ ಸ್ಥಿತಿಯನ್ನು ಕಾದುನೋಡಬೇಕಾಗಿದೆ.

Karnataka is expected to experience mixed weather conditions with sunshine and intermittent rain until February 27, 2026. Coastal and Malnad regions may receive thunderstorm-related rainfall, especially during evenings and nights. Interior districts will see cloudy conditions and light rain in some areas. The intensity of rainfall will depend on the low-pressure system developing over the Bay of Bengal near Sri Lanka, and rainfall may be less intense than initially forecast.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ
February 21, 2026
10:19 AM
by: ಮಹೇಶ್ ಪುಚ್ಚಪ್ಪಾಡಿ
ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ
February 21, 2026
10:03 AM
by: ದ ರೂರಲ್ ಮಿರರ್.ಕಾಂ
ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ
February 21, 2026
9:59 AM
by: ದ ರೂರಲ್ ಮಿರರ್.ಕಾಂ
ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!
February 20, 2026
10:26 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror