Advertisement
ವೆದರ್ ಮಿರರ್

ಹವಾಮಾನ ವರದಿ | 02-02-2026 | ಕರಾವಳಿ–ಮಲೆನಾಡಿನಲ್ಲಿ ತುಂತುರು ಮಳೆಯ ಮುನ್ಸೂಚನೆ

Share

03.02.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ ಜಿಲ್ಲೆಗಳು : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ ಕೆಲವೆಡೆ ಮೋಡಕವಿದ ವಾತಾವರಣ ಕಂಡುಬರುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳಲ್ಲಿ ಸಂಜೆ ತುಂತುರು ಮಳೆಯ ಸಂಭವವಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವಾಮಾನ ಮುಂದುವರಿಯಲಿದೆ.  ಇನ್ನು ಉತ್ತರ ಕನ್ನಡ ಹೊರತುಪಡಿಸಿ ಉಳಿದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 2–3 ದಿನಗಳ ಕಾಲ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.

ಮಲೆನಾಡು ಪ್ರದೇಶ : ಕೊಡಗು ಜಿಲ್ಲೆಯಲ್ಲಿ ಸಂಜೆ ವೇಳೆಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದ್ದು, ಒಂದೆರಡು ಕಡೆ ಸಾಮಾನ್ಯ ಮಳೆಯೂ ಸಂಭವಿಸಬಹುದು. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲಿನ ಜೊತೆಗೆ ಮಧ್ಯಾಹ್ನ ನಂತರ ಮೋಡದ ವಾತಾವರಣ ಕಂಡುಬರುವ ಸಾಧ್ಯತೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಸಂಪರ್ಕಿತ ಪ್ರದೇಶಗಳಲ್ಲಿ ಮೋಡ ಹೆಚ್ಚಾಗಿ ಕಾಣಿಸಬಹುದು. ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ 2 ದಿನಗಳ ಕಾಲ ಇದೇ ಮೋಡದ ಪರಿಸ್ಥಿತಿ ಮುಂದುವರಿಯುವ ಲಕ್ಷಣಗಳಿವೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸಂಜೆ ವೇಳೆಗೆ ಅಲ್ಲಲ್ಲಿ ಹಗುರ ಮೋಡದ ವಾತಾವರಣ ಕಂಡುಬರುವ ಸಾಧ್ಯತೆ ಇದೆ.
ಆದರೆ ಮಳೆಯ ಸಾಧ್ಯತೆಗಳು ಇಲ್ಲದಂತೆಯೇ ಕಾಣಿಸುತ್ತಿವೆ.

ದಕ್ಷಿಣ ಒಳನಾಡು : ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ ಹಾಗೂ ಸಂಜೆ ವೇಳೆಗೆ ಕೆಲವೆಡೆ ಮೋಡದ ವಾತಾವರಣ ಇರಲಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ ಮುಂದಿನ 2 ದಿನಗಳ ಕಾಲ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.

ಮೋಡ ಹಾಗೂ ಮಳೆಯ ಕಾರಣ:  ಬಂಗಾಳಕೊಲ್ಲಿಯ ಮೇಲ್ಮೈ ಸುಳಿಗಾಳಿಯ ಪರಿಣಾಮವಾಗಿ ಆಂಧ್ರ ಕರಾವಳಿ ಮೂಲಕ ಬೀಸುತ್ತಿರುವ ಗಾಳಿಯ ಪ್ರಭಾವದಿಂದ ರಾಜ್ಯದಲ್ಲಿ ಮೋಡ ಹಾಗೂ ತುಂತುರು ಮಳೆಯ ವಾತಾವರಣ ನಿರ್ಮಾಣವಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ

ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…

8 hours ago

ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿಯ ಸಾವಯವ ಕೃಷಿಕ ಕಲ್ಲಪ್ಪ ಪಂಡಿತಪ್ಪ ನೇಗಿನಾಳ…

13 hours ago

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…

1 day ago

ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…

1 day ago

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

2 days ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

2 days ago