Advertisement
ವೆದರ್ ಮಿರರ್

ಹವಾಮಾನ ವರದಿ | 03-02-2026 | ಫೆ.5 ರಿಂದ ಕರ್ನಾಟಕದಲ್ಲಿ ಬಿಸಿಲು ಹೆಚ್ಚಳ | ಕರಾವಳಿಯಲ್ಲಿ ತುಂತುರು ಮಳೆಯ ಸಾಧ್ಯತೆ

Share

04.02.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ:

ಕರಾವಳಿ ಜಿಲ್ಲೆಗಳು :  ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಭಾಗಗಳಲ್ಲಿ ಬಿಸಿಲು ಹಾಗೂ ಮೋಡ ಮಿಶ್ರಿತ ವಾತಾವರಣ ಕಂಡುಬರಲಿದೆ.  ಮಧ್ಯಾಹ್ನ ನಂತರ ಮೋಡದ ಪ್ರಮಾಣ ಹೆಚ್ಚಾಗಬಹುದು. ಸಂಜೆ ಅಥವಾ ರಾತ್ರಿ ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳ ಕೆಲವೆಡೆ ತುಂತುರು ಹಾಗೂ ಸಣ್ಣ ಹನಿ ಮಳೆಯ ಸಾಧ್ಯತೆ ಇದೆ.  ಫೆಬ್ರವರಿ 5ರಿಂದ ಇಲ್ಲಿ ಬಿಸಿಲು ಮತ್ತಷ್ಟು ಹೆಚ್ಚಾಗಲಿದೆ.

ಮಲೆನಾಡು ಪ್ರದೇಶ : ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಜತೆಗೆ ಮಧ್ಯಾಹ್ನ ನಂತರ ಮೋಡದ ವಾತಾವರಣ ಇರಲಿದೆ.  ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಶೃಂಗೇರಿ ಸುತ್ತಮುತ್ತ ಸಂಜೆ ತುಂತುರು ಮಳೆಯ ಸೂಚನೆ ಇದೆ. ಈ ಸ್ಥಿತಿ ಫೆಬ್ರವರಿ 5ರವರೆಗೆ ಮುಂದುವರಿಯಬಹುದು.

ಉತ್ತರ ಒಳನಾಡು : ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ ಮೋಡದ ವಾತಾವರಣ ಕಾಣಬಹುದು. ಇತರ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. ಚಳಿಯ ಪ್ರಮಾಣ ಕಡಿಮೆಯಾಗಿ ಬಿಸಿಲಿನ ಪ್ರಭಾವ ಹೆಚ್ಚಾಗುತ್ತಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ದಕ್ಷಿಣ ಒಳನಾಡು : ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ–ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿಲ್ಲಿ ಹಗುರ ಮೋಡದ ವಾತಾವರಣ ಇರಲಿದೆ. ಮಳೆಯ ಸಾಧ್ಯತೆ ಇಲ್ಲ. ಫೆಬ್ರವರಿ 5ರಿಂದ ಬಿಸಿಲು ಹೆಚ್ಚಾಗುವ ಸೂಚನೆ ಇದೆ.

ವಾತಾವರಣದ ಪ್ರಮುಖ ಕಾರಣ : ಬಂಗಾಳಕೊಲ್ಲಿಯಿಂದ ಬೀಸುತ್ತಿರುವ ಗಾಳಿಯು ಅರಬ್ಬಿ ಸಮುದ್ರ ಪ್ರವೇಶಿಸಿ ಮತ್ತೆ ಭೂಮಿ ಕಡೆಗೆ ತಿರುಗುತ್ತಿರುವುದರಿಂದ ತೇವಾಂಶ ಹೆಚ್ಚಾಗಿ ಕರಾವಳಿ ಜಿಲ್ಲೆಗಳಲ್ಲಿಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಇನ್ನು ಉತ್ತರ ಭಾರತದ ಮೇಲ್ಭಾಗಗಳಲ್ಲಿ ಹಿಮಪಾತ ಹಾಗೂ ಮಳೆ ಮುಂದುವರಿಯುವ ಲಕ್ಷಣಗಳಿವೆ.

ರೈತರಿಗೆ ಸಣ್ಣ ಸಲಹೆ : ಕರಾವಳಿಯಲ್ಲಿ ತುಂತುರು ಮಳೆ ಸಾಧ್ಯತೆ ಇರುವುದರಿಂದ ಅಡಿಕೆ/ ಕರಿಮೆಣಸು ಒಣಗಿಸುವ ಕೆಲಸದಲ್ಲಿ ಎಚ್ಚರಿಕೆ ಇರಲಿ.  ಫೆಬ್ರವರಿ 5ರಿಂದ ಬಿಸಿಲು ಹೆಚ್ಚಾಗುವ ಕಾರಣ ನೀರಾವರಿ ಯೋಜನೆಗೆ ಸರಿಯಾಗಿ ವ್ಯವಸ್ಥೆ ಮಾಡಿಕೊಳ್ಳಿ .ಬೆಳಗಿನ ಚಳಿ ಕಡಿಮೆಯಾಗುತ್ತಿರುವುದರಿಂದ ಬೆಳೆಗಳಲ್ಲಿ ಕೀಟಗಳ ಚಟುವಟಿಕೆ ಗಮನಿಸಿ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…

5 hours ago

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…

23 hours ago

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…

1 day ago

ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!

ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…

2 days ago

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

3 days ago