ಹವಾಮಾನ ವರದಿ | 10-01-2026 | ತುಂತುರು ಮಳೆ ಇದೆ..! ಎಲ್ಲೆಲ್ಲಿ ಮಳೆ ಇದೆ…?

January 10, 2026
8:02 PM
ಜನವರಿ 11 ಮತ್ತು 12ರಂದು ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮೋಡದ ವಾತಾವರಣದೊಂದಿಗೆ ತುಂತುರು ಮಳೆಯ ಸಾಧ್ಯತೆ ಇದೆ. ಚಳಿ ತೀವ್ರತೆ ಸ್ವಲ್ಪ ಕಡಿಮೆಯಾಗುವ ನಿರೀಕ್ಷೆ.

11.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಸ್ವಲ್ಪ ಮಟ್ಟಿಗೆ ಚಳಿ ಕಡಿಮೆ ಇರಬಹುದು. ಈಗಿನಂತೆ ಕರಾವಳಿಯ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಜನವರಿ 11 ಹಾಗೂ 12ರಂದು ಅಲ್ಲಲ್ಲಿ ವಾಯುಭಾರ ಕುಸಿತದ ಪರಿಣಾಮದಿಂದ ತುಂತುರು ಮಳೆಯ ಮುನ್ಸೂಚನೆ ಇದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಗಳಿವೆ. ಶಿವಮೊಗ್ಗ ಜಿಲ್ಲೆಯಲ್ಲಿ ಒಂದೆರಡು ಮೋಡದ ವಾತಾವರಣ ಇರಬಹುದು.
ಈಗಿನಂತೆ ಮಲೆನಾಡು ಜಿಲ್ಲೆಗಳಲ್ಲಿ ಜನವರಿ 11 ಹಾಗೂ 12ರಂದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಉತ್ತರ ಒಳನಾಡು : ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಬಳ್ಳಾರಿ ಜಿಲ್ಲೆಯ ಆಂದ್ರಾ ಗಡಿಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. ಉಳಿದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.  ಈಗಿನಂತೆ ಮುಂದಿನ 2 ದಿವಸಗಳ ಕಾಲ ಉತ್ತರ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ದಕ್ಷಿಣ ಒಳನಾಡು : ಮೈಸೂರು ಜಿಲ್ಲೆಯಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ( ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಈ ವಾತಾವರಣವು ಜನವರಿ 12 ರ ತನಕ ಮುಂದುವರಿಯುವ ಸಾಧ್ಯತೆಗಳಿವೆ.

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಶ್ರೀಲಂಕಾ ಹಾಗೂ ತಮಿಳುನಾಡು ಮಧ್ಯ ತಲುಪಿದ್ದು, ಅಲ್ಲೇ ಶಿಥಿಲಗೊಳ್ಳುವ ಲಕ್ಷಣಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ
October 7, 2026
11:35 PM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಅಡಿಕೆ ಕ್ಷೇತ್ರಕ್ಕೆ ಬೇಕಿದೆ ಹೊಸ ರಾಷ್ಟ್ರೀಯ ಸಮನ್ವಯ ಮಾದರಿ
October 7, 2026
11:22 PM
by: ಅರುಣ್‌ ಕುಮಾರ್ ಕಾಂಚೋಡು
ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?
October 7, 2026
12:40 PM
by: ಸಾಯಿಶೇಖರ್ ಕರಿಕಳ
ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ
October 7, 2026
7:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror