11.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಸ್ವಲ್ಪ ಮಟ್ಟಿಗೆ ಚಳಿ ಕಡಿಮೆ ಇರಬಹುದು. ಈಗಿನಂತೆ ಕರಾವಳಿಯ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಜನವರಿ 11 ಹಾಗೂ 12ರಂದು ಅಲ್ಲಲ್ಲಿ ವಾಯುಭಾರ ಕುಸಿತದ ಪರಿಣಾಮದಿಂದ ತುಂತುರು ಮಳೆಯ ಮುನ್ಸೂಚನೆ ಇದೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಗಳಿವೆ. ಶಿವಮೊಗ್ಗ ಜಿಲ್ಲೆಯಲ್ಲಿ ಒಂದೆರಡು ಮೋಡದ ವಾತಾವರಣ ಇರಬಹುದು.
ಈಗಿನಂತೆ ಮಲೆನಾಡು ಜಿಲ್ಲೆಗಳಲ್ಲಿ ಜನವರಿ 11 ಹಾಗೂ 12ರಂದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಉತ್ತರ ಒಳನಾಡು : ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಬಳ್ಳಾರಿ ಜಿಲ್ಲೆಯ ಆಂದ್ರಾ ಗಡಿಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. ಉಳಿದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ಮುಂದಿನ 2 ದಿವಸಗಳ ಕಾಲ ಉತ್ತರ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡು : ಮೈಸೂರು ಜಿಲ್ಲೆಯಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ( ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಈ ವಾತಾವರಣವು ಜನವರಿ 12 ರ ತನಕ ಮುಂದುವರಿಯುವ ಸಾಧ್ಯತೆಗಳಿವೆ.
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಶ್ರೀಲಂಕಾ ಹಾಗೂ ತಮಿಳುನಾಡು ಮಧ್ಯ ತಲುಪಿದ್ದು, ಅಲ್ಲೇ ಶಿಥಿಲಗೊಳ್ಳುವ ಲಕ್ಷಣಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್‌ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…