Advertisement
ವೆದರ್ ಮಿರರ್

ಹವಾಮಾನ ವರದಿ | 12-01-2026 | ಜನವರಿ ಮಧ್ಯಭಾಗದಲ್ಲಿ ಹವಾಮಾನ ಬದಲಾವಣೆ | ಕರಾವಳಿ–ಮಲೆನಾಡಿಗೆ ಮಳೆ ಸನ್ನಿವೇಶ

Share

13.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಧ್ಯಾಹ್ನ ನಂತರ, ಸಂಜೆ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಸಂಜೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜನವರಿ 14 ರ ತನಕ ಈ ವಾತಾವರಣ ಮುಂದುವರಿಯುವ ಮುನ್ಸೂಚನೆ ಇದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಸಂಜೆ, ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.  ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಈ ವಾತಾವರಣವು ಜನವರಿ 14ರ ತನಕ ಇರಬಹುದು.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಮೋ ಡದ ವಾತಾವರಣದ ಮುನ್ಸೂಚನೆ ಇದ್ದು, ಮಧ್ಯಾಹ್ನ ನಂತರ, ಸಂಜೆ ಹಾವೇರಿ, ಬೆಳಗಾವಿ, ಧಾರವಾಡ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜನವರಿ 15ರಿಂದ ಒಣ ಹವೆ ಮುಂದುವರಿಯಲಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ದಕ್ಷಿಣ ಒಳನಾಡು : ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಸಂಜೆ, ರಾತ್ರಿ ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜನವರಿ 15 ರಿಂದ ಬಿಸಿಲು ಹಾಗೂ ಒಣ ಹವೆ ಮುಂದುವರಿಯುವ ಲಕ್ಷಣಗಳಿವೆ.

ಬಂಗಾಳಕೊಲ್ಲಿಯಲ್ಲಿ ಮಧ್ಯಮ ಸ್ಥರದ  ಗಾಳಿಯ ಉಷ್ಣ ಮಾರುತ ಪರಿಚಲನೆ (anti cyclonic circulation) ಇರುವುದರಿಂದ ಮತ್ತು ಜನವರಿ 16 ರ ನಂತರ ಈ ತಿರುಗುವಿಕೆಯು ಮುಂದುವರಿದು ಅರಬ್ಬಿ ಸಮುದ್ರದ ಕಡೆಯಿಂದ ಗುಜರಾತ್ ಮೂಲಕ ಉತ್ತರ ಭಾರತದ ಕಡೆ ಸಾಗುವುದರಿಂದ, ಉತ್ತರ ಭಾರತದ ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ರಾಜ್ಯಗಳಲ್ಲಿ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ

ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…

7 hours ago

ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿಯ ಸಾವಯವ ಕೃಷಿಕ ಕಲ್ಲಪ್ಪ ಪಂಡಿತಪ್ಪ ನೇಗಿನಾಳ…

12 hours ago

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…

1 day ago

ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…

1 day ago

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

2 days ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

2 days ago