15.01.2026 ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ
ಕರಾವಳಿ ಜಿಲ್ಲೆಗಳು : ಕಾಸರಗೋಡು, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಭಾಗಶಃ ಮೋಡದ ವಾತಾವರಣ ಇರಲಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆ ಇದ್ದು, ಮಧ್ಯಾಹ್ನ ನಂತರ ಸುಳ್ಯ ಹಾಗೂ ಕಡಬ ತಾಲೂಕುಗಳ ಕೆಲವೆಡೆ ಮಳೆಯ ಮುನ್ಸೂಚನೆ ಇದೆ. ಪ್ರಸ್ತುತ ಸ್ಥಿತಿಗತಿಗಳ ಪ್ರಕಾರ, ಜನವರಿ 15ರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ, ಬಿಸಿಲು ಹಾಗೂ ಅಲ್ಲಲ್ಲಿ ಹಗುರ ಮೋಡದ ವಾತಾವರಣ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.
ಮಲೆನಾಡು ಪ್ರದೇಶ : ಕೊಡಗು ಜಿಲ್ಲೆಯಲ್ಲಿ ಮಧ್ಯಾಹ್ನ ನಂತರ ಗುಡುಗು ಸಹಿತ ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ. ಹಾಸನ ಜಿಲ್ಲೆಯ ಸಕ್ಲೇಶಪುರ ಸುತ್ತಮುತ್ತ ತುಂತುರು ಮಳೆಯ ನಿರೀಕ್ಷೆ ಇದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಬಾಳೆಹೊನ್ನೂರು, ಶೃಂಗೇರಿ, ಕುದುರೆಮುಖ ಹಾಗೂ ಶಿವಮೊಗ್ಗ ಜಿಲ್ಲೆಯ ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಮಧ್ಯಾಹ್ನ ನಂತರ ತುಂತುರು ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಉಳಿದ ಭಾಗಗಳಲ್ಲಿ ಭಾಗಶಃ ಮೋಡದ ವಾತಾವರಣ ಇರಬಹುದು. ಜನವರಿ 15ರಿಂದ ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ, ಬಿಸಿಲಿನ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಭಾಗಶಃ ಮೋಡದ ವಾತಾವರಣ ಕಂಡುಬರುವ ಸಾಧ್ಯತೆ ಇದೆ. ಈ ವಾತಾವರಣ ಮುಂದಿನ ದಿನಗಳಲ್ಲೂ ಮುಂದುವರಿಯುವ ನಿರೀಕ್ಷೆಯಿದೆ.
ದಕ್ಷಿಣ ಒಳನಾಡು : ಮೈಸೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಜೆ ವೇಳೆಗೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಉಳಿದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾಗಶಃ ಮೋಡದ ವಾತಾವರಣ ಇರಲಿದೆ. ಜನವರಿ 15ರಿಂದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರ ಮೋಡದ ವಾತಾವರಣ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.
ವಿಶೇಷ ಸೂಚನೆ : ದಕ್ಷಿಣ ಭಾರತದ ಮೇಲೆ ಪ್ರಭಾವ ಬೀರುತ್ತಿರುವ ಉಷ್ಣ ಮಾರುತ ಪರಿಚಲನೆ (Anti-Cyclonic Circulation) ಉತ್ತರ ಭಾರತದ ಕಡೆ ಚಲಿಸುವ ಲಕ್ಷಣಗಳು ಗೋಚರಿಸುತ್ತಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ



