Advertisement
ವೆದರ್ ಮಿರರ್

ಹವಾಮಾನ ವರದಿ | 14-01-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಸಾಧ್ಯತೆ | ಜ.15ರಿಂದ ಮಳೆಯ ತೀವ್ರತೆ ಇಳಿಕೆ

Share

15.01.2026 ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

ಕರಾವಳಿ ಜಿಲ್ಲೆಗಳು :  ಕಾಸರಗೋಡು, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಭಾಗಶಃ ಮೋಡದ ವಾತಾವರಣ ಇರಲಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆ ಇದ್ದು, ಮಧ್ಯಾಹ್ನ ನಂತರ ಸುಳ್ಯ ಹಾಗೂ ಕಡಬ ತಾಲೂಕುಗಳ ಕೆಲವೆಡೆ ಮಳೆಯ ಮುನ್ಸೂಚನೆ ಇದೆ.  ಪ್ರಸ್ತುತ ಸ್ಥಿತಿಗತಿಗಳ ಪ್ರಕಾರ, ಜನವರಿ 15ರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ, ಬಿಸಿಲು ಹಾಗೂ ಅಲ್ಲಲ್ಲಿ ಹಗುರ ಮೋಡದ ವಾತಾವರಣ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.

ಮಲೆನಾಡು ಪ್ರದೇಶ : ಕೊಡಗು ಜಿಲ್ಲೆಯಲ್ಲಿ ಮಧ್ಯಾಹ್ನ ನಂತರ ಗುಡುಗು ಸಹಿತ ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ.  ಹಾಸನ ಜಿಲ್ಲೆಯ ಸಕ್ಲೇಶಪುರ ಸುತ್ತಮುತ್ತ ತುಂತುರು ಮಳೆಯ ನಿರೀಕ್ಷೆ ಇದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಬಾಳೆಹೊನ್ನೂರು, ಶೃಂಗೇರಿ, ಕುದುರೆಮುಖ ಹಾಗೂ ಶಿವಮೊಗ್ಗ ಜಿಲ್ಲೆಯ ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಮಧ್ಯಾಹ್ನ ನಂತರ ತುಂತುರು ಮಳೆಯ ಮುನ್ಸೂಚನೆ ಇದೆ.  ಶಿವಮೊಗ್ಗ ಜಿಲ್ಲೆಯ ಉಳಿದ ಭಾಗಗಳಲ್ಲಿ ಭಾಗಶಃ ಮೋಡದ ವಾತಾವರಣ ಇರಬಹುದು.  ಜನವರಿ 15ರಿಂದ ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ, ಬಿಸಿಲಿನ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಭಾಗಶಃ ಮೋಡದ ವಾತಾವರಣ ಕಂಡುಬರುವ ಸಾಧ್ಯತೆ ಇದೆ. ಈ ವಾತಾವರಣ ಮುಂದಿನ ದಿನಗಳಲ್ಲೂ ಮುಂದುವರಿಯುವ ನಿರೀಕ್ಷೆಯಿದೆ.

ದಕ್ಷಿಣ ಒಳನಾಡು : ಮೈಸೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಜೆ ವೇಳೆಗೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಉಳಿದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾಗಶಃ ಮೋಡದ ವಾತಾವರಣ ಇರಲಿದೆ. ಜನವರಿ 15ರಿಂದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರ ಮೋಡದ ವಾತಾವರಣ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.

ವಿಶೇಷ ಸೂಚನೆ :  ದಕ್ಷಿಣ ಭಾರತದ ಮೇಲೆ ಪ್ರಭಾವ ಬೀರುತ್ತಿರುವ ಉಷ್ಣ ಮಾರುತ ಪರಿಚಲನೆ (Anti-Cyclonic Circulation) ಉತ್ತರ ಭಾರತದ ಕಡೆ ಚಲಿಸುವ ಲಕ್ಷಣಗಳು ಗೋಚರಿಸುತ್ತಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ

ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…

7 hours ago

ಅಡಿಕೆ ಕ್ಷೇತ್ರಕ್ಕೆ ಬೇಕಿದೆ ಹೊಸ ರಾಷ್ಟ್ರೀಯ ಸಮನ್ವಯ ಮಾದರಿ

ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…

8 hours ago

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?

ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…

18 hours ago

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ

ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…

24 hours ago

ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ

ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…

1 day ago

ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು

ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…

1 day ago