ಹವಾಮಾನ ವರದಿ | 08-01-2026 | ಜ.11 ರಂದು ತುಂತುರು ಮಳೆ ಇರಬಹುದು…! ಎಲ್ಲೆಲ್ಲಿ ಮಳೆಯಾಗಬಹುದು…?

January 8, 2026
3:04 PM
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಚಳಿ ಹಾಗೂ ಒಣ ಹವೆ ಮುಂದುವರಿಯಲಿದ್ದು, ಜನವರಿ 10–11ರಂದು ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ತೀವ್ರ ಚಳಿ ಮತ್ತು ಒಣ ಹವೆ ಮುಂದುವರಿಯಲಿದ್ದು, ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಶ್ರೀಲಂಕಾ ಬಳಿ ದುರ್ಬಲಗೊಂಡು ಮಳೆಯ ಪರಿಣಾಮ ಕಡಿಮೆಯಾಗಲಿದೆ.

09.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಚಳಿ ಹಾಗೂ ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ಜನವರಿ 10 ರಿಂದ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, 11ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 12ರಂದು ಮೋಡ ಇರಲಿದ್ದು 13ರಿಂದ ಮತ್ತೆ ಒಣ ಹವೆ ಮುಂದುವರಿಯಲಿದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಚಳಿ ಹಾಗೂ ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ಜನವರಿ 10ರಂದು ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, 11ರಂದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ 11ರಂದು ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 13ರಿಂದ ಮತ್ತೆ ಒಣ ಹವೆ ಮುಂದುವರಿಯಲಿದೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಧಿಕ ಛಳಿ ಹಾಗೂ ಒಣ ಹವೆ ಮುಂದುವರಿಯಲಿದೆ. ಜನವರಿ 11ರಂದು ದಾವಣಗೆರೆ, ವಿಜಯನಗರ, ಬಳ್ಳಾರಿ, ಕೊಪ್ಪಳ, ವಿಜಯಪುರ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. 12 ಅಥವಾ 13ರಿಂದ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಹಾಗೂ ರಾತ್ರಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ಜನವರಿ 9ರಿಂದ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಜನವರಿ 10 ಹಾಗೂ 11ರಂದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 12 ಹಾಗೂ 13ರಂದು ಸ್ವಲ್ಪ ಮೋಡ ಇದ್ದರೂ ಮಳೆಯ ಸಾಧ್ಯತೆ ಕಡಿಮೆ ಇರಬಹುದು.

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಜನವರಿ 11ರಂದು ಶ್ರೀಲಂಕಾದ ಆಗ್ನೇಯ ಕರಾವಳಿಗೆ ತಲಪುತ್ತಿದ್ದಂತೆಯೇ ದುರ್ಬಲಗೊಳ್ಳುವ ಲಕ್ಷಣಗೊಂಡು ಶಿಥಿಲಗೊಳ್ಳುವ ಲಕ್ಷಣಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ
March 31, 2026
6:47 AM
by: ಮಿರರ್‌ ಡೆಸ್ಕ್
“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ
March 31, 2026
6:31 AM
by: ದ ರೂರಲ್ ಮಿರರ್.ಕಾಂ
‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ
March 31, 2026
6:09 AM
by: ದ ರೂರಲ್ ಮಿರರ್.ಕಾಂ
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ
March 30, 2026
10:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror