Advertisement
ವೆದರ್ ಮಿರರ್

ಹವಾಮಾನ ವರದಿ | 09-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ..! ಜುಲೈ 11 ರಿಂದ ಮಳೆ ಮತ್ತಷ್ಟು ಇಳಿಕೆ, ಬಿಸಿಲಿನ ಅವಧಿ ಹೆಚ್ಚಳ ಸಾಧ್ಯ

Share

ರಾಜ್ಯದಲ್ಲಿ ಮುಂಗಾರು ಚಟುವಟಿಕೆ ದುರ್ಬಲವಾಗುತ್ತಿದ್ದು, ಜುಲೈ 10ರ ಬೆಳಿಗ್ಗೆ 8 ಗಂಟೆಯವರೆಗಿನ ಮುನ್ಸೂಚನೆಯ ಪ್ರಕಾರ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಕಂಡುಬಂದಿವೆ. ಅರಬ್ಬಿ ಸಮುದ್ರದ ಮಹಾರಾಷ್ಟ್ರ ಕರಾವಳಿಯಲ್ಲಿ ಉಂಟಾಗಿದ್ದ ತಿರುವಿಕೆ ಶಿಥಿಲಗೊಂಡಿರುವ ಪರಿಣಾಮ ಗಾಳಿಯ ತೀವ್ರತೆಯೂ ಇಳಿಕೆಯಾಗಿದ್ದು, ಮುಂದಿನ ದಿನಗಳಲ್ಲಿ ಮಳೆಯ ಪ್ರಮಾಣ ಇನ್ನಷ್ಟು ಕಡಿಮೆಯಾಗುವ ಸಾಧ್ಯತೆಯಿದೆ.

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು-ಮೋಡದ ವಾತಾವರಣದ ನಡುವೆ ಅಲ್ಲಲ್ಲಿ ದಿನದ ವೇಳೆ ಎರಡರಿಂದ ಮೂರು ಬಾರಿ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ತೀರ ಪ್ರದೇಶಗಳಿಗಿಂತ ಘಟ್ಟದ ಕೆಳಭಾಗಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಿರಬಹುದು. ಆದರೆ ಜುಲೈ 11ರಿಂದ ಕರಾವಳಿಯಲ್ಲಿ ಮಳೆಯ ಪ್ರಮಾಣ ಗಮನಾರ್ಹವಾಗಿ ಕಡಿಮೆಯಾಗುವ ಸಾಧ್ಯತೆ ಇದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಮತ್ತು ಮೋಡದ ವಾತಾವರಣ ಮುಂದುವರಿಯಲಿದ್ದು, ಅಲ್ಲಲ್ಲಿ ತುಂತುರು ಹಾಗೂ ಕರಾವಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಜುಲೈ 10 ರಿಂದಲೇ ಮಲೆನಾಡಿನಲ್ಲಿ ಮಳೆ ಕಡಿಮೆಯಾಗಲಿದ್ದು, ಜುಲೈ 11ರಿಂದ ಬಿಸಿಲಿನ ಅವಧಿ ಹೆಚ್ಚಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡು :  ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಇದ್ದು, ಧಾರವಾಡ, ಹಾವೇರಿ, ಗದಗ ಹಾಗೂ ರಾಯಚೂರು ಜಿಲ್ಲೆಗಳ ಕೆಲವೆಡೆ ತುಂತುರು ಮಳೆಯಾಗಬಹುದು. ಉಳಿದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ಬಿಸಿಲು ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಜುಲೈ 11ರಿಂದ ಉತ್ತರ ಒಳನಾಡಿನಲ್ಲೂ ಬಿಸಿಲಿನ ಅವಧಿ ಹೆಚ್ಚಾಗುವ ನಿರೀಕ್ಷೆಯಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ದಕ್ಷಿಣ ಒಳನಾಡು : ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಮುಂದುವರಿಯಲಿದೆ. ಜುಲೈ 11ರಿಂದ ದಕ್ಷಿಣ ಒಳನಾಡಿನಲ್ಲೂ ಬಿಸಿಲಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ.

ಮುಂದೇನು? :  ಹವಾಮಾನ ವಿಶ್ಲೇಷಣೆಯ ಪ್ರಕಾರ, ಅರಬ್ಬಿ ಸಮುದ್ರದಲ್ಲಿದ್ದ ತಿರುವಿಕೆ ಶಿಥಿಲಗೊಂಡಿರುವುದರಿಂದ ರಾಜ್ಯದಲ್ಲಿ ಗಾಳಿಯ ವೇಗ ಕಡಿಮೆಯಾಗಿದೆ. ಮುಂದಿನ ದಿನಗಳಲ್ಲಿ ಅರಬ್ಬಿ ಸಮುದ್ರ ಅಥವಾ ಬಂಗಾಳ ಕೊಲ್ಲಿಯಲ್ಲಿ ಹೊಸ ತಿರುವಿಕೆ ಅಥವಾ ವಾಯುಭಾರ ಕುಸಿತದಂತಹ ವ್ಯವಸ್ಥೆ ರೂಪುಗೊಂಡರೆ ಮಾತ್ರ ಮುಂಗಾರು ಮತ್ತೆ ಚುರುಕಾಗುವ ಸಾಧ್ಯತೆ ಇದೆ. ಇಲ್ಲವಾದರೆ ಎಲ್‌ನಿನೋ ಪ್ರಭಾವ ಕ್ರಮೇಣ ಹೆಚ್ಚಾಗುವ ಸಾಧ್ಯತೆಯನ್ನು ತಳ್ಳಿಹಾಕಲು ಸಾಧ್ಯವಿಲ್ಲ.

ನಿಮ್ಮ ಅಭಿಪ್ರಾಯ, ಪ್ರತಿಕ್ರಿಯೆಗಳನ್ನು ಕಮೆಂಟ್‌ ಮೂಲಕ ತಿಳಿಸಿ…

Karnataka is likely to witness weaker monsoon conditions over the next two days. Rainfall will mainly be confined to isolated light showers in Coastal and Malnad districts, while sunshine is expected to increase across most regions from July 11. Fresh low-pressure systems will be crucial for reviving monsoon activity.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 30-09-2026 | ಅರಬ್ಬಿ ಸಮುದ್ರದ ಗಾಳಿ ದುರ್ಬಲ… ಕರ್ನಾಟಕದ ಮಳೆಯ ಸ್ವರೂಪ ಬದಲಾಗುತ್ತಾ?

ಅಕ್ಟೋಬರ್ 1ರಿಂದ ಅರಬ್ಬಿ ಸಮುದ್ರದ ಗಾಳಿ ದುರ್ಬಲಗೊಳ್ಳುವ ಸಾಧ್ಯತೆ ಇರುವುದರಿಂದ ಕರ್ನಾಟಕದಲ್ಲಿ ಮಳೆಯ…

9 minutes ago

ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯ ಭಯದಲ್ಲಿ ಕೇರಳದ ರಬ್ಬರ್ ರೈತರು – ತೋಟಗಾರಿಕೆಗೆ ಮುಂದೆ ಏನು?

ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…

13 hours ago

ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?

ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…

21 hours ago

ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?

ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್‌…

22 hours ago

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳೆಯರ ಓಟಕ್ಕೆ ಚಿನ್ನದ ಹೊಳಪು – 4×400 ಮೀ. ರಿಲೇಯಲ್ಲಿ ಭರ್ಜರಿ ಗೆಲುವು

ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…

23 hours ago

ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?

ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…

1 day ago