Advertisement
ವೆದರ್ ಮಿರರ್

ಹವಾಮಾನ ವರದಿ | 10-07-2026 | ಕರ್ನಾಟಕದಲ್ಲಿ ಮುಂಗಾರಿಗೆ ತಾತ್ಕಾಲಿಕ ವಿರಾಮ..! ಕರಾವಳಿಯಲ್ಲಿ ಅಲ್ಲಲ್ಲಿ ಸಾಧಾರಣ ಮಳೆ, ಒಳನಾಡಿನಲ್ಲಿ ಬಿಸಿಲು ಹೆಚ್ಚಳ

Share

11 ಜುಲೈ 2026ರ ಬೆಳಿಗ್ಗೆ 8 ಗಂಟೆಯವರೆಗಿನ ಹವಾಮಾನ ಮುನ್ಸೂಚನೆಯಂತೆ, ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂಗಾರು ಚುರುಕು ತಾತ್ಕಾಲಿಕವಾಗಿ ಕುಂಠಿತಗೊಂಡಿದ್ದು, ಕರಾವಳಿ ಮತ್ತು ಮಲೆನಾಡಿನ ಕೆಲವು ಪ್ರದೇಶಗಳನ್ನು ಹೊರತುಪಡಿಸಿದರೆ ಉಳಿದ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು-ಮೋಡದ ವಾತಾವರಣ ಮುಂದುವರಿಯಲಿದೆ.

ಕರಾವಳಿ ಜಿಲ್ಲೆಗಳು : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ತೀರ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ತುಸು ಕಡಿಮೆಯಾಗಬಹುದು. ಉತ್ತರ ಕನ್ನಡ ಜಿಲ್ಲೆಯ ಕೆಲವೆಡೆ ತುಂತುರು ಮಳೆಯ ಮುನ್ಸೂಚನೆ ಇದೆ.

ಪ್ರಸ್ತುತ ಮುನ್ಸೂಚನೆಯಂತೆ ಜುಲೈ 11ರಂದು ಕರಾವಳಿಯಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಕಂಡುಬರಲಿದ್ದು, ಕಾಸರಗೋಡು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದೆರಡು ಕಡೆ ಸಾಧಾರಣ ಮಳೆಯಾಗಬಹುದು. ಜುಲೈ 12ರಿಂದ ಮೋಡ-ಬಿಸಿಲಿನ ವಾತಾವರಣ ಹೆಚ್ಚಾಗುವ ಲಕ್ಷಣಗಳಿವೆ. ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆ  ಗಳಲ್ಲಿ ಬಿಸಿಲಿನ ಅವಧಿ ಹೆಚ್ಚಾಗುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ಮಲೆನಾಡು ಜಿಲ್ಲೆಗಳು : ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿಗೆ ಹೊಂದಿಕೊಂಡಿರುವ ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಜಿಲ್ಲೆಯ ಕೆಲವೆಡೆ ಮೋಡ ಹಾಗೂ ತುಂತುರು ಮಳೆಯ ನಿರೀಕ್ಷೆಯಿದೆ.

ಜುಲೈ 11ರಿಂದ ಮಲೆನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಮತ್ತು ಮೋಡ ಮಿಶ್ರಿತ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.

ಉತ್ತರ ಒಳನಾಡು : ಬಳ್ಳಾರಿ ಜಿಲ್ಲೆಯ ಒಂದೆರಡು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳ ಕೆಲವೆಡೆ ತುಂತುರು ಮಳೆಯ ನಿರೀಕ್ಷೆಯಿದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಮುಂದುವರಿಯಲಿದೆ.

ಮುಂದಿನ ಸುಮಾರು 10 ದಿನಗಳವರೆಗೆ ಉತ್ತರ ಒಳನಾಡಿನಲ್ಲಿ ವ್ಯಾಪಕ ಮಳೆಯ ಸಾಧ್ಯತೆ ಕಡಿಮೆಯಿರುವ ಲಕ್ಷಣಗಳು ಗೋಚರಿಸುತ್ತಿವೆ.

ದಕ್ಷಿಣ ಒಳನಾಡು : ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮಧ್ಯಾಹ್ನದ ನಂತರ ಮೋಡ ಕವಿದು ಅಲ್ಲಲ್ಲಿ ಸಾಧಾರಣ ಮಳೆಯಾಗಬಹುದು.

ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಮುಂದುವರಿಯಲಿದೆ. ಪ್ರಸ್ತುತ ಮುನ್ಸೂಚನೆಯಂತೆ ಜುಲೈ 11ರಿಂದ ಮುಂದಿನ 10 ದಿನಗಳವರೆಗೆ ದಕ್ಷಿಣ ಒಳನಾಡಿನಲ್ಲಿಯೂ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

 ರೈತರಿಗೆ ಸಲಹೆ : ಅಡಿಕೆ, ಕಾಫಿ, ಮೆಣಸು ಹಾಗೂ ತೆಂಗಿನ ತೋಟಗಳಲ್ಲಿ ಮಳೆ ವಿರಾಮವನ್ನು ಬಳಸಿಕೊಂಡು ರೋಗ-ಕೀಟಗಳ ಮೇಲ್ವಿಚಾರಣೆ ನಡೆಸಿ. ಅಗತ್ಯವಿದ್ದರೆ ತೋಟಗಳ ಸ್ವಚ್ಛತೆ, ನೀರು ಹರಿವಿನ ಕಾಲುವೆಗಳ ನಿರ್ವಹಣೆ ಹಾಗೂ ಪೋಷಕಾಂಶ ನಿರ್ವಹಣೆಯ ಕೆಲಸಗಳನ್ನು ಕೈಗೊಳ್ಳಬಹುದು. ಮಧ್ಯಾಹ್ನದ ಬಿಸಿಲಿನ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಹೊಸದಾಗಿ ನೆಟ್ಟ ಸಸಿಗಳಿಗೆ ಅಗತ್ಯವಿದ್ದರೆ ನೀರಾವರಿ ಹಾಗೂ ಮಲ್ಚಿಂಗ್ ವ್ಯವಸ್ಥೆ ಮಾಡುವುದು ಉತ್ತಮ.

Rainfall activity is expected to remain subdued across Karnataka on July 11. Light, scattered rain is likely over coastal districts and parts of Malnad, while most north and south interior districts will experience sunny to partly cloudy conditions with limited rainfall over the next 10 days.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಚಿನ್ನದ ಬೇಟೆ – ಒಂದೇ ದಿನ 4 ಚಿನ್ನ; ಪದಕಗಳ ಸಂಖ್ಯೆ 60ಕ್ಕೆ ಏರಿಕೆ

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಒಂದೇ ದಿನ 4 ಚಿನ್ನ ಸೇರಿದಂತೆ 7 ಪದಕ…

5 hours ago

ಅಡಿಕೆ ವಹಿವಾಟಿನ ಮೇಲೆ ಹೆಚ್ಚಿದ ಕಣ್ಗಾವಲು..!, ಗಮನ ಸೆಳೆದ ಪ್ರತ್ಯೇಕ ಮೂರು ಘಟನೆಗಳು

ಅಸ್ಸಾಂನಲ್ಲಿ 5.74 ಟನ್ ಅಡಿಕೆ ವಶ, ಕೇರಳದಲ್ಲಿ 380 ಚೀಲ ಅಡಿಕೆ ಬಿಡುಗಡೆಗೆ…

7 hours ago

ಹಿಂಗಾರು ಬೆಳೆಗಳಿಗೆ ಕೇಂದ್ರದಿಂದ ಬೆಂಬಲ ಬೆಲೆ ಹೆಚ್ಚಳ

ರಬಿ(ಹಿಂಗಾರು) ಬೆಳೆಗಳಿಗೆ ಕೇಂದ್ರ ಸರ್ಕಾರ MSP ಹೆಚ್ಚಿಸಿದೆ. ಗೋಧಿ MSP ₹2,610ಕ್ಕೆ, ಕಡಲೆ…

7 hours ago

ಹವಾಮಾನ ವರದಿ | 30-09-2026 | ಅರಬ್ಬಿ ಸಮುದ್ರದ ಗಾಳಿ ದುರ್ಬಲ… ಕರ್ನಾಟಕದ ಮಳೆಯ ಸ್ವರೂಪ ಬದಲಾಗುತ್ತಾ?

ಅಕ್ಟೋಬರ್ 1ರಿಂದ ಅರಬ್ಬಿ ಸಮುದ್ರದ ಗಾಳಿ ದುರ್ಬಲಗೊಳ್ಳುವ ಸಾಧ್ಯತೆ ಇರುವುದರಿಂದ ಕರ್ನಾಟಕದಲ್ಲಿ ಮಳೆಯ…

8 hours ago

ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯ ಭಯದಲ್ಲಿ ಕೇರಳದ ರಬ್ಬರ್ ರೈತರು – ತೋಟಗಾರಿಕೆಗೆ ಮುಂದೆ ಏನು?

ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…

21 hours ago

ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?

ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…

1 day ago