ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

July 15, 2026
2:10 PM
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಆರಂಭವಾಗುವ ಸಾಧ್ಯತೆ ಇದೆ. ಎಲ್‌ನಿನೋ ಮತ್ತು ಶುಷ್ಕ ಗಾಳಿಯ ಪರಿಣಾಮ ರಾಜ್ಯದಲ್ಲಿ ಮಳೆ ಕೊರತೆ ಮುಂದುವರಿದಿದ್ದು, ಉತ್ತರ ಒಳನಾಡಿನಲ್ಲಿ ಇನ್ನೂ 10 ದಿನ ಮಳೆಯ ಸಾಧ್ಯತೆ ಕಡಿಮೆ.

16.07.2026ರ ಬೆಳಿಗ್ಗೆ 8 ಗಂಟೆಯವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ, ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲಿನ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ ಮಲೆನಾಡಿನ ಕೆಲವು ಪ್ರದೇಶಗಳಲ್ಲಿ ಮಾತ್ರ ಜುಲೈ 16ರಿಂದ ಅಲ್ಲಲ್ಲಿ ಸಾಮಾನ್ಯ ಮಳೆ ಆರಂಭವಾಗುವ ಲಕ್ಷಣಗಳು ಕಂಡುಬಂದಿವೆ.

ಕರಾವಳಿ ಜಿಲ್ಲೆಗಳು :  ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರಿ ಬಿಸಿಲಿನ ಜೊತೆಗೆ ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಘಟ್ಟದ ಕೆಳಭಾಗದ ಪ್ರದೇಶಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲು-ಮೋಡ ಮಿಶ್ರ ವಾತಾವರಣವಿದ್ದು, ಕರಾವಳಿ ತೀರ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯಾಗಬಹುದು. ಜುಲೈ 16ರಿಂದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಆರಂಭವಾಗುವ ಸಾಧ್ಯತೆಗಳಿವೆ.

ಮಲೆನಾಡು ಜಿಲ್ಲೆಗಳು :  ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲಿನ ಜೊತೆಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಜುಲೈ 16ರಿಂದ ಅಲ್ಲಲ್ಲಿ ತುಂತುರು ಹಾಗೂ ಕೆಲವೆಡೆ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ಉತ್ತರ ಒಳನಾಡು :  ವಿಜಯಪುರ ಜಿಲ್ಲೆಯ ಇಂಡಿ ಭಾಗ ಹಾಗೂ ಮಹಾರಾಷ್ಟ್ರದ ಸೋಲಾಪುರ ಸುತ್ತಮುತ್ತ ಮಾತ್ರ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡ ಕವಿದ ವಾತಾವರಣ ಮುಂದುವರಿಯಲಿದೆ.

ಮುಂದಿನ 10 ದಿನಗಳವರೆಗೆ ಉತ್ತರ ಒಳನಾಡಿನಲ್ಲಿ ವ್ಯಾಪಕ ಮಳೆಯ ಲಕ್ಷಣಗಳು ಕಾಣುತ್ತಿಲ್ಲ. ಆದರೆ ಅನಿರೀಕ್ಷಿತವಾಗಿ ಒಂದೆರಡು ಕಡೆ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡು : ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಸಣ್ಣ ಪ್ರಮಾಣದ ಮೋಡ ಕವಿದ ವಾತಾವರಣ ಇರಲಿದೆ. ಜುಲೈ 18 ಮತ್ತು 19ರಂದು ಅಲ್ಲಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ.

ಮಳೆ ಕೊರತೆಗೆ ಕಾರಣವೇನು? : ರಾಜ್ಯದಲ್ಲಿ ಎಲ್‌ನಿನೋ ಪ್ರಭಾವ ಮುಂದುವರಿದಿರುವುದರಿಂದ ಮುಂಗಾರು ದುರ್ಬಲಗೊಂಡಿದೆ. ಇದರ ಜೊತೆಗೆ ಮಧ್ಯಮ ಸ್ತರದಲ್ಲಿ ಭೂಮಿಯ ಉತ್ತರ ಭಾಗದಿಂದ ಭಾರತದತ್ತ ಬೀಸುತ್ತಿರುವ ಶುಷ್ಕ ಗಾಳಿಯ ಪರಿಣಾಮ ರಾಜ್ಯದ ಬಹುತೇಕ ಭಾಗಗಳಲ್ಲಿ ಹಗಲಿನ ತಾಪಮಾನ ಏರಿಕೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ಚಟುವಟಿಕೆಗಳು ಉಂಟಾದರೆ ಮಾತ್ರ ಮುಂಗಾರು ಸ್ವಲ್ಪ ಮಟ್ಟಿಗೆ ಚುರುಕಾಗಬಹುದು.

Most parts of Karnataka will continue to experience hot and partly cloudy weather until July 16. Light to moderate rainfall is likely to begin over isolated parts of Coastal Karnataka and the Malnad region from July 16, while North Interior Karnataka is expected to remain largely dry for the next 10 days. El Niño and persistent dry winds are weakening the southwest monsoon across the state.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ
August 13, 2026
6:35 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror