Advertisement
ವೆದರ್ ಮಿರರ್

ಕರಾವಳಿ–ಹವಾಮಾನ ವರದಿ | 18-07-2026 | ಮಲೆನಾಡಿನಲ್ಲಿ ಇನ್ನೂ 10 ದಿನ ಮಳೆ ಮುಂದುವರಿಕೆ…! ಉತ್ತರ ಒಳನಾಡಿನಲ್ಲಿ ಜುಲೈ 19 ರಿಂದ ಮಳೆ ಇಳಿಮುಖ

Share

ರಾಜ್ಯದ ವಿವಿಧ ಭಾಗಗಳಲ್ಲಿ ಮುಂಗಾರು ಚಟುವಟಿಕೆ ಮುಂದುವರಿದಿದ್ದರೂ, ಸೂಪರ್ ಎಲ್ ನಿನೋ ಪರಿಣಾಮದಿಂದ ಮುಂಗಾರು ಗಾಳಿಗಳ ದುರ್ಬಲತೆ ಇನ್ನೂ ಗೋಚರಿಸುತ್ತಿದೆ. ಇದರ ನಡುವೆಯೂ ಪಶ್ಚಿಮ ಬಂಗಾಳದ ವಾಯುಭಾರ ಕುಸಿತದ ಪ್ರಭಾವದಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಮಳೆಯಾಗುತ್ತಿದೆ.

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬೆಳಿಗ್ಗೆ ಬಿಸಿಲಿನ ಜೊತೆಗೆ ಮೋಡ ಕವಿದ ವಾತಾವರಣವಿರಲಿದ್ದು, ಮಧ್ಯಾಹ್ನದ ಬಳಿಕ ಬಿಟ್ಟು ಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂಜಾನೆಯಿಂದಲೇ ಮಧ್ಯಂತರ ಮಳೆಯ ಮುನ್ಸೂಚನೆ ಇದೆ.

ನಿನ್ನೆ ಕರಾವಳಿ ಜಿಲ್ಲೆಗಳ ಹಲವೆಡೆ ಮಧ್ಯಾಹ್ನದ ಬಳಿಕ ಉತ್ತಮ ಮಳೆಯಾಗಿತ್ತು. ಸದ್ಯದ ಮುನ್ಸೂಚನೆಯಂತೆ ಮುಂದಿನ 10 ದಿನಗಳವರೆಗೆ ಕರಾವಳಿ ಭಾಗದಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ಸಾಮಾನ್ಯ ಮಳೆಯಾಗಲಿದೆ. ಕರಾವಳಿಗೆ ಹೊಂದಿಕೊಂಡಿರುವ ಘಟ್ಟ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಿರಬಹುದು.

ಪ್ರಸ್ತುತ ಪರಿಸ್ಥಿತಿಯಂತೆ ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಇದೇ ರೀತಿಯ ಮಳೆಯ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ.

ಉತ್ತರ ಒಳನಾಡು : ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ, ರಾಯಚೂರು ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಅಥವಾ ತುಂತುರು ಮಳೆಯಾಗಬಹುದು.

ಆದರೆ ಜುಲೈ 19ರಿಂದ ಉತ್ತರ ಒಳನಾಡಿನಲ್ಲಿ ಮಳೆಯ ಪ್ರಮಾಣ ಕ್ರಮೇಣ ಕಡಿಮೆಯಾಗುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ದಕ್ಷಿಣ ಒಳನಾಡು :  ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಅಥವಾ ತುಂತುರು ಮಳೆಯ ಮುನ್ಸೂಚನೆ ನೀಡಲಾಗಿದೆ.

ಸದ್ಯದ ಅಂದಾಜಿನಂತೆ ದಕ್ಷಿಣ ಒಳನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.

ರೈತರಿಗೆ ಸಲಹೆ :  ಮಧ್ಯಂತರ ಮಳೆಯ ಸಾಧ್ಯತೆ ಇರುವುದರಿಂದ ಅಡಿಕೆ, ತೆಂಗು, ಕಾಳುಮೆಣಸು ಹಾಗೂ ತೋಟಗಾರಿಕಾ ಬೆಳೆಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳುವುದು ಸೂಕ್ತ. ಮಳೆಯ ನಡುವಿನ ವಿರಾಮವನ್ನು ಗೊಬ್ಬರ ಹಾಗೂ ತೋಟ ನಿರ್ವಹಣಾ ಕಾರ್ಯಗಳಿಗೆ ಬಳಸಿಕೊಳ್ಳಬಹುದು.

Karnataka is expected to witness scattered rainfall until the morning of 19 July 2026. Coastal and Malnad districts are likely to continue receiving intermittent rain for the next ten days, while rainfall is expected to decrease over North Interior Karnataka from July 19 onward. South Interior Karnataka may continue to receive light to moderate showers. The weakened southwest monsoon due to the Super El Niño is being partially supported by a low-pressure influence over West Bengal, resulting in scattered rainfall across the state.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಅನ್ನವೇ ಜೀವನ, ಅನ್ನವೇ ಮೃತ್ಯು

ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…

9 hours ago

ಕೃಷಿ ಕ್ಷೇತ್ರಕ್ಕೆ ಎಥೆನಾಲ್‌ ದೊಡ್ಡ ಅವಕಾಶ

ಎಥೆನಾಲ್‌ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…

9 hours ago

ಮಾನವ–ವನ್ಯಜೀವಿ ಸಂಘರ್ಷ ತಡೆಗೆ ರಾಷ್ಟ್ರೀಯ ಕಾರ್ಯತಂತ್ರ – ಕರ್ನಾಟಕದ AI ಮಾದರಿಗೆ ಕೇಂದ್ರದ ಮೆಚ್ಚುಗೆ

ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…

9 hours ago

ಅಕ್ರಮ ಅಡಿಕೆ ಆಮದು ತಡೆಗೆ ಕೇಂದ್ರದ ಭರವಸೆ – ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಭೇಟಿಯಾದ ಕ್ಯಾಂಪ್ಕೊ ನಿಯೋಗ

ಅಕ್ರಮ ಅಡಿಕೆ ಆಮದು, ಜಿಎಸ್‌ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…

9 hours ago

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌…

18 hours ago

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

22 hours ago