ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಮುಂದುವರಿದಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮುಂದಿನ ಎರಡು ದಿನ ಮಳೆಯ ತೀವ್ರತೆ ಸ್ವಲ್ಪ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ ಜುಲೈ 4 ರಿಂದ ಮತ್ತೆ ಮಳೆ ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿವೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಕಾಸರಗೋಡು ಭಾಗಗಳಲ್ಲಿ ಬುಧವಾರ ಉತ್ತಮ ಮಳೆಯಾಗಿದ್ದು, ಗುರುವಾರವೂ ಬಿಟ್ಟುಬಿಟ್ಟು ಉತ್ತಮ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಆದರೆ ಜುಲೈ 2 ಮತ್ತು 3 ರಂದು ಮಳೆಯ ತೀವ್ರತೆ ಸ್ವಲ್ಪ ಇಳಿಕೆಯಾಗಲಿದ್ದು, ಜುಲೈ 4 ರಿಂದ 10 ರವರೆಗೆ ಮತ್ತೆ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ.
ಮಲೆನಾಡಿನಲ್ಲಿ ಕೊಡಗು ಜಿಲ್ಲೆಯ ಕರಾವಳಿ ಭಾಗಗಳಿಗೆ ಹೊಂದಿಕೊಂಡ ಪ್ರದೇಶಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಸಾಮಾನ್ಯ ಮಳೆಯಾಗಲಿದ್ದು, ಕರಾವಳಿಗೆ ಹೊಂದಿಕೊಂಡ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ತುಸು ಹೆಚ್ಚಿರಬಹುದು. ಹಾಸನ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಜುಲೈ 2 ಮತ್ತು 3ರಂದು ಮಳೆ ಸ್ವಲ್ಪ ಕಡಿಮೆಯಾಗುವ ಸಾಧ್ಯತೆ ಇದ್ದು, ಜುಲೈ 4ರಿಂದ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗುವ ನಿರೀಕ್ಷೆ ವ್ಯಕ್ತವಾಗಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕಲಬುರ್ಗಿ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣದೊಂದಿಗೆ ತುಂತುರು ಮಳೆಯ ಮುನ್ಸೂಚನೆ ನೀಡಲಾಗಿದೆ. ಜುಲೈ 2ರಿಂದ ಈ ಭಾಗದಲ್ಲಿ ಮಳೆಯ ಪ್ರಮಾಣ ಮತ್ತಷ್ಟು ಕಡಿಮೆಯಾಗುವ ಲಕ್ಷಣಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಫಾಲೋಮಾಡಲು ಇಲ್ಲಿ ಕ್ಲಿಕ್ ಮಾಡಿ
ದಕ್ಷಿಣ ಒಳನಾಡಿನ ದಾವಣಗೆರೆ, ವಿಜಯನಗರ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಸಾಧ್ಯತೆ ಇದ್ದು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಹಾಗೂ ಅಲ್ಲಲ್ಲಿ ತುಂತುರು ಮಳೆಯ ನಿರೀಕ್ಷೆಯಿದೆ. ಈ ಭಾಗದಲ್ಲಿ ಭಾರೀ ಮಳೆಯ ಸಾಧ್ಯತೆ ಸದ್ಯಕ್ಕೆ ಕಾಣುತ್ತಿಲ್ಲ.
ಸದ್ಯದ ಹವಾಮಾನ ವೀಕ್ಷಣೆಯ ಪ್ರಕಾರ, ಸೋಮಾಲಿಯನ್ ಜೆಟ್ ವೇವ್ಸ್ ಪ್ರಭಾವದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು, ಜುಲೈ 10ರವರೆಗೆ ಸಾಮಾನ್ಯ ಮುಂಗಾರು ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ. ಬಳಿಕ ಮುಂಗಾರು ಚಟುವಟಿಕೆ ದುರ್ಬಲಗೊಳ್ಳುವ ಲಕ್ಷಣಗಳು ಗೋಚರಿಸುತ್ತಿವೆ.
ನಿಮ್ಮ ಅಭಿಪ್ರಾಯ, ಪ್ರತಿಕ್ರಿಯೆಗಳನ್ನು ಕಮೆಂಟ್ ಮೂಲಕ ತಿಳಿಸಿ…ಅಭಿಪ್ರಾಯ-ಪ್ರತಿಕ್ರಿಯೆನಿಮ್ಮ ಅಭಿಪ್ರಾಯ, ಪ್ರತಿಕ್ರಿಯೆಗಳನ್ನು ಕಮೆಂಟ್ ಮೂಲಕ ತಿಳಿಸಿ...
Karnataka is likely to witness a brief lull in monsoon activity on July 2 and 3, especially over Coastal Karnataka and Malnad, before rainfall intensifies again from July 4. The southwest monsoon is expected to remain active until around July 10 due to the influence of the Somali Jet, after which signs of weakening are likely.

