Advertisement
ಸುದ್ದಿಗಳು

ಹವಾಮಾನ ವರದಿ | 01-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ ಸ್ವಲ್ಪ ಇಳಿಕೆ – ಜುಲೈ 4ರಿಂದ ಮತ್ತೆ ಚುರುಕು!

Share

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಮುಂದುವರಿದಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮುಂದಿನ ಎರಡು ದಿನ ಮಳೆಯ ತೀವ್ರತೆ ಸ್ವಲ್ಪ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ ಜುಲೈ 4 ರಿಂದ ಮತ್ತೆ ಮಳೆ ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿವೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಕಾಸರಗೋಡು ಭಾಗಗಳಲ್ಲಿ ಬುಧವಾರ ಉತ್ತಮ ಮಳೆಯಾಗಿದ್ದು, ಗುರುವಾರವೂ ಬಿಟ್ಟುಬಿಟ್ಟು ಉತ್ತಮ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಆದರೆ ಜುಲೈ 2 ಮತ್ತು 3 ರಂದು ಮಳೆಯ ತೀವ್ರತೆ ಸ್ವಲ್ಪ ಇಳಿಕೆಯಾಗಲಿದ್ದು, ಜುಲೈ 4 ರಿಂದ 10 ರವರೆಗೆ ಮತ್ತೆ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ.

ಮಲೆನಾಡಿನಲ್ಲಿ ಕೊಡಗು ಜಿಲ್ಲೆಯ ಕರಾವಳಿ ಭಾಗಗಳಿಗೆ ಹೊಂದಿಕೊಂಡ ಪ್ರದೇಶಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಸಾಮಾನ್ಯ ಮಳೆಯಾಗಲಿದ್ದು, ಕರಾವಳಿಗೆ ಹೊಂದಿಕೊಂಡ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ತುಸು ಹೆಚ್ಚಿರಬಹುದು. ಹಾಸನ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಜುಲೈ 2 ಮತ್ತು 3ರಂದು ಮಳೆ ಸ್ವಲ್ಪ ಕಡಿಮೆಯಾಗುವ ಸಾಧ್ಯತೆ ಇದ್ದು, ಜುಲೈ 4ರಿಂದ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗುವ ನಿರೀಕ್ಷೆ ವ್ಯಕ್ತವಾಗಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕಲಬುರ್ಗಿ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣದೊಂದಿಗೆ ತುಂತುರು ಮಳೆಯ ಮುನ್ಸೂಚನೆ ನೀಡಲಾಗಿದೆ. ಜುಲೈ 2ರಿಂದ ಈ ಭಾಗದಲ್ಲಿ ಮಳೆಯ ಪ್ರಮಾಣ ಮತ್ತಷ್ಟು ಕಡಿಮೆಯಾಗುವ ಲಕ್ಷಣಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ದಕ್ಷಿಣ ಒಳನಾಡಿನ ದಾವಣಗೆರೆ, ವಿಜಯನಗರ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಸಾಧ್ಯತೆ ಇದ್ದು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಹಾಗೂ ಅಲ್ಲಲ್ಲಿ ತುಂತುರು ಮಳೆಯ ನಿರೀಕ್ಷೆಯಿದೆ. ಈ ಭಾಗದಲ್ಲಿ ಭಾರೀ ಮಳೆಯ ಸಾಧ್ಯತೆ ಸದ್ಯಕ್ಕೆ ಕಾಣುತ್ತಿಲ್ಲ.

ಸದ್ಯದ ಹವಾಮಾನ ವೀಕ್ಷಣೆಯ ಪ್ರಕಾರ, ಸೋಮಾಲಿಯನ್ ಜೆಟ್‌ ವೇವ್ಸ್ ಪ್ರಭಾವದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು, ಜುಲೈ 10ರವರೆಗೆ ಸಾಮಾನ್ಯ ಮುಂಗಾರು ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ. ಬಳಿಕ ಮುಂಗಾರು ಚಟುವಟಿಕೆ ದುರ್ಬಲಗೊಳ್ಳುವ ಲಕ್ಷಣಗಳು ಗೋಚರಿಸುತ್ತಿವೆ.

ನಿಮ್ಮ ಅಭಿಪ್ರಾಯ, ಪ್ರತಿಕ್ರಿಯೆಗಳನ್ನು ಕಮೆಂಟ್‌ ಮೂಲಕ ತಿಳಿಸಿ…ಅಭಿಪ್ರಾಯ-ಪ್ರತಿಕ್ರಿಯೆನಿಮ್ಮ ಅಭಿಪ್ರಾಯ, ಪ್ರತಿಕ್ರಿಯೆಗಳನ್ನು ಕಮೆಂಟ್‌ ಮೂಲಕ ತಿಳಿಸಿ...

Karnataka is likely to witness a brief lull in monsoon activity on July 2 and 3, especially over Coastal Karnataka and Malnad, before rainfall intensifies again from July 4. The southwest monsoon is expected to remain active until around July 10 due to the influence of the Somali Jet, after which signs of weakening are likely.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

34 minutes ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

56 minutes ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

16 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago