ಹವಾಮಾನ ವರದಿ | 19-07-2026 | ಜುಲೈ 20 ರಿಂದ ಮಳೆ ಇಳಿಮುಖ…! ಕರಾವಳಿ–ಮಲೆನಾಡಿನಲ್ಲಿ ಮಾತ್ರ ಅಲ್ಲಲ್ಲಿ ಮಳೆ ಮುಂದುವರಿಕೆ

July 19, 2026
1:15 PM
ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ ಒಳನಾಡಿನಲ್ಲಿ ಜುಲೈ 23ರವರೆಗೆ ಮಳೆ ವಿರಾಮವಿದ್ದು, 24ರಿಂದ ಮತ್ತೆ ಮಳೆಯ ಸಾಧ್ಯತೆ ಇದೆ.

ರಾಜ್ಯದಲ್ಲಿ ಮುಂಗಾರು ಚಟುವಟಿಕೆ ನಿಧಾನವಾಗಿ ದುರ್ಬಲಗೊಳ್ಳುತ್ತಿರುವ ಲಕ್ಷಣಗಳು ಕಂಡುಬರುತ್ತಿದ್ದು, ಜುಲೈ 20 ರಿಂದ ಕರಾವಳಿ ಮತ್ತು ಮಲೆನಾಡು ಸೇರಿದಂತೆ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ ಕೆಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಬಿಟ್ಟು ಬಿಟ್ಟು ಮಳೆಯಾಗುವ ನಿರೀಕ್ಷೆಯಿದೆ.

ಕರಾವಳಿ : ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ಬಿಟ್ಟು ಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಪ್ರಸ್ತುತ ಮುನ್ಸೂಚನೆಯಂತೆ ಜುಲೈ 20ರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗಲಿದೆ. ಆದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಇತರ ಕರಾವಳಿ ಜಿಲ್ಲೆಗಳಿಗಿಂತ ಮಳೆ ಸ್ವಲ್ಪ ಹೆಚ್ಚಿರಬಹುದು.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮಧ್ಯಂತರ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಘಟ್ಟ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ತುಸು ಹೆಚ್ಚಿರಬಹುದು. ಆದರೆ ಜುಲೈ 20ರಿಂದ ಮಲೆನಾಡಿನಲ್ಲೂ ಮಳೆ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ.

ಉತ್ತರ ಒಳನಾಡು :  ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ, ರಾಯಚೂರು, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಒಂದೆರಡು ಕಡೆ ತುಂತುರು ಮಳೆಯಾಗಬಹುದು.

ಸದ್ಯದ ಅಂದಾಜಿನಂತೆ ಜುಲೈ 20ರಿಂದ 23ರವರೆಗೆ ಉತ್ತರ ಒಳನಾಡಿನಲ್ಲಿ ಮಳೆಯ ಸಾಧ್ಯತೆಗಳು ಅತ್ಯಂತ ಕಡಿಮೆ ಇದ್ದು, ಜುಲೈ 24ರಿಂದ ಮತ್ತೆ ಅಲ್ಲಲ್ಲಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ದಕ್ಷಿಣ ಒಳನಾಡು : ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಚಾಮರಾಜನಗರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯಾಗಬಹುದು. ಉಳಿದ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಹಾಗೂ ತುಂತುರು ಮಳೆಯ ಸಾಧ್ಯತೆ ಇದೆ. ಪ್ರಸ್ತುತ ಮುನ್ಸೂಚನೆಯಂತೆ ದಕ್ಷಿಣ ಒಳನಾಡಿನಲ್ಲಿ ಜುಲೈ 22ರವರೆಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ.

ರೈತರಿಗೆ ಸಲಹೆ :  ಮಳೆ ಕಡಿಮೆಯಾಗುವ ಲಕ್ಷಣಗಳಿರುವುದರಿಂದ ರೈತರು ತೋಟ ಮತ್ತು ಹೊಲಗಳಲ್ಲಿ ಗೊಬ್ಬರ ಹಾಕುವುದು, ಕಳೆ ನಿಯಂತ್ರಣ, ಮಣ್ಣು ಏರಿಸುವುದು ಸೇರಿದಂತೆ ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳಲು ಅನುಕೂಲಕರ ಸಮಯವಾಗಿದೆ. ಆದರೆ ಸ್ಥಳೀಯ ಮಳೆಯ ಮುನ್ಸೂಚನೆಯನ್ನು ಗಮನಿಸಿ ಕೃಷಿ ಚಟುವಟಿಕೆಗಳನ್ನು ಯೋಜಿಸುವುದು ಒಳಿತು.

Rainfall activity across Karnataka is expected to weaken from July 20, 2026. Coastal and Malnad districts may continue to receive intermittent showers, though rainfall intensity is likely to reduce. North Interior Karnataka is expected to remain largely dry between July 20 and July 23, with rain likely to return from July 24. South Interior Karnataka may continue to receive scattered showers until July 22.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ
August 9, 2026
12:36 PM
by: ಸಾಯಿಶೇಖರ್ ಕರಿಕಳ
ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ
August 9, 2026
6:28 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದ 69.60 ಲಕ್ಷ ಹೆಕ್ಟೇರ್ ಭೂಮಿ ಹಾನಿ – ಕೃಷಿ ಉತ್ಪಾದಕತೆಗೆ ದೊಡ್ಡ ಸವಾಲು
August 9, 2026
6:11 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ರಾಷ್ಟ್ರೀಯ ಕಿರಿಯರ ಚೆಸ್ ಚಾಂಪಿಯನ್‌ಶಿಪ್‌ಗೆ ತೆರೆ – ಮಣಿ ಸರ್ಬರ್‌ತೋ ಚಾಂಪಿಯನ್
August 8, 2026
8:40 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror