ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

July 21, 2026
4:32 PM
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಭಾರೀ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು-ಮೋಡದ ವಾತಾವರಣ ಇರಲಿದೆ.

2026ರ ಜುಲೈ 22ರ ಬೆಳಿಗ್ಗೆ 8 ಗಂಟೆಯವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ, ಕರ್ನಾಟಕದ ಬಹುತೇಕ ಭಾಗಗಳಲ್ಲಿ ಬಿಸಿಲು, ಮೋಡ ಹಾಗೂ ಬಿಟ್ಟು ಬಿಟ್ಟು ಸಾಧಾರಣ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಭಾರೀ ಮಳೆಯ ಲಕ್ಷಣಗಳು ಸದ್ಯಕ್ಕೆ ಕಾಣುತ್ತಿಲ್ಲ.

Advertisement

ಕರಾವಳಿ ಜಿಲ್ಲೆಗಳು : ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು-ಮೋಡದ ವಾತಾವರಣದೊಂದಿಗೆ ಬಿಟ್ಟು ಬಿಟ್ಟು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾತ್ರ ಮಳೆಯ ಪ್ರಮಾಣ ಉಳಿದ ಕರಾವಳಿ ಜಿಲ್ಲೆಗಳಿಗಿಂತ ಸ್ವಲ್ಪ ಹೆಚ್ಚಿರಬಹುದು.

Advertisement

ಪ್ರಸ್ತುತ ಪರಿಸ್ಥಿತಿಯಲ್ಲಿ ಕರಾವಳಿ ಭಾಗದಲ್ಲಿ ಮಳೆಯ ತೀವ್ರತೆ ಇಳಿಮುಖವಾಗುವ ಲಕ್ಷಣಗಳು ಕಂಡುಬರುತ್ತಿದ್ದು, ದೀರ್ಘಾವಧಿಯ ಭಾರೀ ಮಳೆಯ ಸಾಧ್ಯತೆ ಇಲ್ಲ. ಆದರೆ ಮುಂದಿನ ಸುಮಾರು 10 ದಿನಗಳವರೆಗೆ ಸಾಧಾರಣ ಮಳೆ ಮುಂದುವರಿಯುವ ನಿರೀಕ್ಷೆಯಿದೆ.

ಮಲೆನಾಡು ಜಿಲ್ಲೆಗಳು : ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಿರಬಹುದು. ಆದಾಗ್ಯೂ, ಮಲೆನಾಡು ಭಾಗದಲ್ಲೂ ಜೋರು ಮಳೆಯ ಸಾಧ್ಯತೆಗಳು ಗಣನೀಯವಾಗಿ ಕಡಿಮೆಯಾಗಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

Advertisement

ಮುಂದಿನ 10 ದಿನಗಳವರೆಗೆ ಮಲೆನಾಡಿನಲ್ಲಿ ಬಿಟ್ಟು ಬಿಟ್ಟು ಸಾಧಾರಣ ಮಳೆಯ ವಾತಾವರಣ ಮುಂದುವರಿಯುವ ನಿರೀಕ್ಷೆಯಿದೆ.

ಉತ್ತರ ಒಳನಾಡು :  ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಸಾಧ್ಯತೆ ಇದೆ. ಉಳಿದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಮುಂದುವರಿಯಲಿದೆ.

Advertisement

ಜುಲೈ 24ರಿಂದ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆಗಳಿವೆ.

ದಕ್ಷಿಣ ಒಳನಾಡು : ತುಮಕೂರು ಜಿಲ್ಲೆಯ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಉಳಿದ ಜಿಲ್ಲೆಗಳಲ್ಲಿ ಮೋಡ ಮತ್ತು ಬಿಸಿಲಿನ ವಾತಾವರಣ ಮುಂದುವರಿಯಲಿದೆ. ಮುಂದಿನ ಎರಡು ದಿನಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದರೂ, ನಂತರ ಮಳೆಯ ಪ್ರಮಾಣ ಮತ್ತಷ್ಟು ಕಡಿಮೆಯಾಗುವ ಸೂಚನೆಗಳು ಕಂಡುಬಂದಿವೆ.

Advertisement

ಸದ್ಯ ಅರಬ್ಬಿ ಸಮುದ್ರ ಅಥವಾ ಬಂಗಾಳಕೊಲ್ಲಿಯಲ್ಲಿ ಯಾವುದೇ ಮಹತ್ವದ ಹವಾಮಾನ ವ್ಯವಸ್ಥೆಗಳು ರೂಪುಗೊಂಡಿಲ್ಲ. ಆದರೆ ಸೋಮಾಲಿ ಜೆಟ್ ವೇವ್ಸ್ ಪ್ರಭಾವದಿಂದ ಉತ್ತರ ಭಾರತದ ಬಹುತೇಕ ರಾಜ್ಯಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.

Karnataka is likely to witness sunny to partly cloudy weather with intermittent light rain on July 22. Coastal and Malnad regions may continue receiving scattered rainfall for the next 10 days, but heavy rain is unlikely. North Interior Karnataka could see rainfall increase after July 24, while South Interior districts are expected to remain mostly dry after the next two days.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ
July 20, 2026
10:59 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್
July 20, 2026
10:18 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ
July 19, 2026
10:17 PM
by: ದ ರೂರಲ್ ಮಿರರ್.ಕಾಂ
ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ
July 19, 2026
9:41 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror