ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

July 22, 2026
3:55 PM

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

ಕರಾವಳಿ: ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ವಿಶೇಷವಾಗಿ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಹೆಚ್ಚಾಗಿದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಇತರ ಭಾಗಗಳಿಗಿಂತ ಸ್ವಲ್ಪ ಹೆಚ್ಚಿರಬಹುದು.

ಉತ್ತರ ಒಳನಾಡಡು :  ಬಹುತೇಕ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಮುಂದುವರಿಯಲಿದೆ. ಬೆಳಗಾವಿ, ಧಾರವಾಡ, ಕಲಬುರ್ಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡು : ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಇರಬಹುದು.

ಮಧ್ಯಪ್ರದೇಶ, ಉತ್ತರ ಪ್ರದೇಶ ಹಾಗೂ ಛತ್ತೀಸಗಡ ರಾಜ್ಯಗಳ ಮೇಲೆ ಉಂಟಾಗಿರುವ ವಾಯುಭಾರ ಕುಸಿತಕ್ಕೆ ಸಂಬಂಧಿಸಿದ ತಿರುವಿಕೆ (Cyclonic Circulation) ಪರಿಣಾಮದಿಂದ ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಮಳೆಯ ಚಟುವಟಿಕೆ ಮುಂದುವರಿದಿದೆ.

ಪ್ರಸ್ತುತ ಎಲ್ ನಿನೋ ಪ್ರಭಾವ ಇದ್ದರೂ, ಈ ತಿರುವಿಕೆಯ ಪರಿಣಾಮದಿಂದ ಕರ್ನಾಟಕ ಮಾತ್ರವಲ್ಲದೆ ದೇಶದ ಬಹುತೇಕ ರಾಜ್ಯಗಳಲ್ಲಿ ಮಳೆಯಾಗುತ್ತಿದ್ದು, ಮುಂಗಾರು ಚಟುವಟಿಕೆಗೆ ಇದು ಪೂರಕವಾಗಿದೆ.

🌱 ರೈತರಿಗೆ ಸಲಹೆ: ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ಅಡಿಕೆ, ಮೆಣಸು ಹಾಗೂ ಇತರ ತೋಟಗಾರಿಕಾ ಬೆಳೆಗಳಲ್ಲಿ ನೀರು ನಿಲ್ಲದಂತೆ ಒಳಚರಂಡಿ ವ್ಯವಸ್ಥೆ ಕಾಪಾಡಿಕೊಳ್ಳಿ. ಔಷಧ ಸಿಂಪಡಣೆ ಮಾಡುವವರು ಮಳೆ ವಿರಾಮದ ಸಮಯವನ್ನು ಆಯ್ಕೆ ಮಾಡುವುದು ಸೂಕ್ತ.

Karnataka is likely to witness continued rainfall activity till 8 AM on July 23, 2026. Coastal districts, especially Udupi and Uttara Kannada, are expected to receive good rainfall, while scattered showers are forecast across Malnad and parts of North and South Interior Karnataka. A cyclonic circulation associated with a low-pressure system over Madhya Pradesh, Uttar Pradesh and Chhattisgarh is supporting rainfall despite the prevailing El Niño conditions.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ
September 20, 2026
3:13 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ
September 20, 2026
10:43 AM
by: ದ ರೂರಲ್ ಮಿರರ್.ಕಾಂ
ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ
September 19, 2026
12:06 PM
by: ದ ರೂರಲ್ ಮಿರರ್.ಕಾಂ
ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು
September 19, 2026
11:28 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror