Advertisement
ವೆದರ್ ಮಿರರ್

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

Share

ಜುಲೈ 27ರ ಬೆಳಿಗ್ಗೆ 8 ಗಂಟೆಯವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ, ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳುತ್ತಿರುವ ವಾಯುಭಾರ ಕುಸಿತದ ಪರಿಣಾಮದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ ಲಕ್ಷಣಗಳು ಗೋಚರಿಸುತ್ತಿವೆ. ವಿಶೇಷವಾಗಿ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯದಿಂದ ಉತ್ತಮ ಮಳೆಯ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

ಕರಾವಳಿಯಲ್ಲಿ ಮಧ್ಯಾಹ್ನದ ಬಳಿಕ ಉತ್ತಮ ಮಳೆ :  ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬೆಳಿಗ್ಗೆ ಅಲ್ಲಲ್ಲಿ ಸಾಮಾನ್ಯ ಮಳೆಯಾಗಲಿದ್ದು, ಮಧ್ಯಾಹ್ನ ಹಾಗೂ ಸಂಜೆ ಬಳಿಕ ಬಿಟ್ಟು ಬಿಟ್ಟು ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ಮಳೆಯ ಪ್ರಮಾಣ ಹೆಚ್ಚುವ ಸಾಧ್ಯತೆ ಇರುವುದರಿಂದ ರೈತರು ಸಿಕ್ಕ ಅವಕಾಶದಲ್ಲಿ ತೋಟಗಳಿಗೆ ಅಗತ್ಯ ಔಷಧಿ ಸಿಂಪಡಿಸುವುದು ಸೂಕ್ತ.

ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ :  ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಬಿಟ್ಟು ಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಮಲೆನಾಡಿನ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಿರಬಹುದು. ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮದಿಂದ ಮುಂದಿನ 10 ದಿನಗಳವರೆಗೆ ಈ ಭಾಗದಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ಉತ್ತರ ಒಳನಾಡಿನಲ್ಲಿ ಸಂಜೆ ಮಳೆ : ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಮಧ್ಯಾಹ್ನ ಹಾಗೂ ಸಂಜೆ ವೇಳೆಯಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಬಹುದು. ವಾಯುಭಾರ ಕುಸಿತದ ಪರಿಣಾಮದಿಂದ ಅಲ್ಲಲ್ಲಿ ಮಳೆ ಮುಂದುವರಿಯುವ ನಿರೀಕ್ಷೆಯಿದೆ.

ದಕ್ಷಿಣ ಒಳನಾಡಿನಲ್ಲಿ ಜೋರು ಮಳೆ ಸಾಧ್ಯತೆ ಕಡಿಮೆ :  ತುಮಕೂರು ಹಾಗೂ ಬೆಂಗಳೂರು ಉತ್ತರ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದ್ದು, ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡ ಕವಿದ ವಾತಾವರಣದ ನಡುವೆ ಕೆಲವೆಡೆ ಅನಿರೀಕ್ಷಿತ ಮಳೆಯಾಗಬಹುದು. ಮುಂದಿನ 10 ದಿನಗಳವರೆಗೆ ಈ ಭಾಗದಲ್ಲಿ ವ್ಯಾಪಕ ಜೋರು ಮಳೆಯ ಸಾಧ್ಯತೆ ಕಡಿಮೆಯಿದ್ದು, ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದೆ.

ವಾಯುಭಾರ ಕುಸಿತದ ಚಲನೆ :  ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತವು ಜುಲೈ 27ರಂದು ಪಶ್ಚಿಮ ಬಂಗಾಳ, ಜಾರ್ಖಂಡ್, ಉತ್ತರ ಪ್ರದೇಶ ಹಾಗೂ ಮಧ್ಯಪ್ರದೇಶದ ಮೂಲಕ ಚಲಿಸುವ ಸಾಧ್ಯತೆ ಇದೆ. ಎಲ್ ನಿನೋ ಪರಿಣಾಮದಿಂದ ಈ ಬಾರಿ ಮುಂಗಾರು ದುರ್ಬಲವಾಗಿದ್ದರೂ, ಇಂತಹ ವಾಯುಭಾರ ಕುಸಿತಗಳು ರಾಜ್ಯದ ಹಲವು ಭಾಗಗಳಿಗೆ ಮಳೆಯ ಬಲ ನೀಡುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

A low-pressure area likely to form over the West Bengal coast is expected to strengthen monsoon activity across Karnataka. Coastal and Malnad regions may receive normal to good rainfall over the next 10 days, while North Interior Karnataka is likely to get scattered evening showers. South Interior Karnataka is expected to witness only isolated light rain with no widespread heavy rainfall.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯ ಭಯದಲ್ಲಿ ಕೇರಳದ ರಬ್ಬರ್ ರೈತರು – ತೋಟಗಾರಿಕೆಗೆ ಮುಂದೆ ಏನು?

ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…

7 hours ago

ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?

ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…

15 hours ago

ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?

ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್‌…

16 hours ago

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳೆಯರ ಓಟಕ್ಕೆ ಚಿನ್ನದ ಹೊಳಪು – 4×400 ಮೀ. ರಿಲೇಯಲ್ಲಿ ಭರ್ಜರಿ ಗೆಲುವು

ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…

17 hours ago

ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?

ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…

1 day ago

ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ

ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…

1 day ago