Advertisement
ವೆದರ್ ಮಿರರ್

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

Share

ಜುಲೈ 28 ರ ಬೆಳಿಗ್ಗೆ 8 ಗಂಟೆಯವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ, ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ ಮುಂದುವರಿಯಲಿದ್ದು, ಕಳೆದ ಕೆಲ ದಿನಗಳ ಭಾರಿ ಮಳೆಯ ಹೋಲಿಕೆಯಲ್ಲಿ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳು ಕಂಡುಬಂದಿವೆ.

ಕರಾವಳಿ ಭಾಗದ ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಮಳೆಯಾಗಲಿದ್ದು, ಮಳೆಯ ನಡುವಿನ ಬಿಡುವಿನ ಅವಧಿ ಸ್ವಲ್ಪ ಹೆಚ್ಚಾಗುವ ಸಾಧ್ಯತೆ ಇದೆ. ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆಯೇ ಮುಂದುವರಿಯಲಿದ್ದು, ದಿನದ ಒಟ್ಟು ಮಳೆಯ ಪ್ರಮಾಣ ಸುಮಾರು 20 ರಿಂದ 30 ಮಿ.ಮೀ. ವ್ಯಾಪ್ತಿಯಲ್ಲಿರಬಹುದು ಎಂದು ಅಂದಾಜಿಸಲಾಗಿದೆ. ಈ ಅವಧಿಯಲ್ಲಿ ಭಾರಿ ಮಳೆಯ ಸಾಧ್ಯತೆಗಳು ಕಡಿಮೆಯಾಗಿವೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಕೆಲವೆಡೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗಬಹುದು. ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದರೂ, ದಿನ ಕಳೆದಂತೆ ಮಳೆಯ ಪ್ರಮಾಣ ಕ್ರಮೇಣ ಇಳಿಮುಖವಾಗುವ ಸಾಧ್ಯತೆ ಇದೆ. ಆದರೆ ಬಂಗಾಳಕೊಲ್ಲಿಯಲ್ಲಿ ಹೊಸ ವಾಯುಭಾರ ಕುಸಿತ ಪ್ರಬಲಗೊಂಡರೆ ಮಳೆಯ ಪ್ರಮಾಣ ಮತ್ತೆ ಏರಿಕೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಕಲಬುರ್ಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳ ಕೆಲವೆಡೆ ಸಾಮಾನ್ಯ ಮಳೆಯಾಗುವ ನಿರೀಕ್ಷೆಯಿದೆ. ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದ್ದು, ಉಳಿದ ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಮುಂದಿನ ಒಂದು ವಾರದಲ್ಲೂ ಉತ್ತರ ಒಳನಾಡಿನಲ್ಲಿ ಇದೇ ಮಾದರಿಯ ಹವಾಮಾನ ಮುಂದುವರಿಯುವ ಲಕ್ಷಣಗಳಿವೆ.

ದಕ್ಷಿಣ ಒಳನಾಡಿನ ಬೆಂಗಳೂರು, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಮತ್ತು ಮೋಡ ಕವಿದ ವಾತಾವರಣ ಹೆಚ್ಚಾಗಲಿದೆ. ಜುಲೈ 28ರಿಂದ ಆಗಸ್ಟ್ 1ರವರೆಗೆ ಹೆಚ್ಚಿನ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಿದ್ದು, ಆಗಸ್ಟ್ 2 ರಿಂದ ಮತ್ತೆ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ಸದ್ಯದ ಹವಾಮಾನ ಪ್ರಕಾರ, ಪಶ್ಚಿಮ ಬಂಗಾಳ ಭಾಗದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಜಾರ್ಖಂಡ್ ಹಾಗೂ ಮಧ್ಯಪ್ರದೇಶ ಮಾರ್ಗವಾಗಿ ಸಾಗುವ ಸಾಧ್ಯತೆ ಇದೆ. ಇದರ ಬೆಳವಣಿಗೆಯನ್ನು ಅವಲಂಬಿಸಿ ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಯಲ್ಲಿ ಬದಲಾವಣೆ ಉಂಟಾಗಬಹುದು. ಸದ್ಯ ಮುಂಗಾರು ದುರ್ಬಲವಾಗಿದ್ದರೂ, ಈ ವಾಯುಭಾರ ಕುಸಿತದ ಪ್ರಭಾವದಿಂದ ಅಲ್ಪ ಮಟ್ಟಿನ ಚೇತರಿಕೆ ಕಂಡುಬರುತ್ತಿದೆ.

Karnataka is likely to witness intermittent light to moderate rainfall over the next 10 days, especially across Coastal and Malnad regions. Heavy rainfall is expected to reduce along the coast, while South Interior Karnataka may see rainfall activity increase again from August 2 depending on the development of a low-pressure system over the Bay of Bengal.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 07-11-2026 | ನ.14ರಿಂದ ಮತ್ತೆ ಮಳೆ ? ಅರಬ್ಬಿ ಸಮುದ್ರದಲ್ಲಿ ಹೊಸ ಬೆಳವಣಿಗೆ

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ನವೆಂಬರ್ 9ರಿಂದ ಒಣಹವೆ, ಬಿಸಿಲು ಹಾಗೂ ರಾತ್ರಿ…

5 hours ago

ದೀಪಾವಳಿ ಪಟಾಕಿ ಅವಘಡ: ಮಕ್ಕಳ ಕಣ್ಣು, ಮುಖದ ರಕ್ಷಣೆಗೆ ಪೋಷಕರು ಎಚ್ಚರ ವಹಿಸಿ

ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿಸುವುದರಿಂದ ಮಕ್ಕಳ ಕಣ್ಣು ಮತ್ತು ಮುಖಕ್ಕೆ ಗಂಭೀರ ಗಾಯಗಳಾಗುವ…

10 hours ago

ಸಾಗುವಳಿ ಪತ್ರಕ್ಕಾಗಿ ರೈತರಿಗೆ ಎನ್‌ಒಸಿ – ಜಂಟಿ ಸರ್ವೆ ಬಳಿಕ ಕ್ರಮ, 4 ತಿಂಗಳಲ್ಲಿ ಸರ್ವೆ ಪೂರ್ಣಗೊಳಿಸುವ ಭರವಸೆ

ಸಾಗುವಳಿ ಚೀಟಿ ಪಡೆಯಲು ರೈತರಿಗೆ ಅರಣ್ಯ ಇಲಾಖೆಯಿಂದ ಎನ್‌ಒಸಿ ನೀಡುವ ಕುರಿತು ಜಂಟಿ…

10 hours ago

ಪೆಟ್ರೋಲ್‌ನಲ್ಲಿ ಶೇ.20ಕ್ಕಿಂತ ಹೆಚ್ಚು ಎಥೆನಾಲ್ ಮಿಶ್ರಣ ಪತ್ತೆ

ರಾಜ್ಯದ ವಿವಿಧ ಭಾಗಗಳಿಂದ ಸಂಗ್ರಹಿಸಿದ 63 ಪೆಟ್ರೋಲ್ ಮಾದರಿಗಳ ಪರೀಕ್ಷೆಯಲ್ಲಿ ನಿಗದಿತ ಶೇ.20ಕ್ಕಿಂತ…

11 hours ago

ನ್ಯಾನೊ ರಸಗೊಬ್ಬರ ಬಳಕೆಯಿಂದ ಮಣ್ಣು, ಅಂತರ್ಜಲ ರಕ್ಷಣೆ

ಸಾಂಪ್ರದಾಯಿಕ ರಸಗೊಬ್ಬರಗಳ ಅಸಮರ್ಪಕ ಬಳಕೆಯಿಂದ ಮಣ್ಣಿನ ಫಲವತ್ತತೆ ಮತ್ತು ಅಂತರ್ಜಲದ ಗುಣಮಟ್ಟದ ಮೇಲೆ…

1 day ago

ಬರಪೀಡಿತ ರೈತರಿಗೆ ತಲಾ ₹5 ಸಾವಿರ ಪರಿಹಾರ – ಯಾದಗಿರಿಯ 1.06 ಲಕ್ಷ ರೈತರಿಗೆ ಮೊದಲ ಕಂತು ಬಿಡುಗಡೆ

ಬರಪೀಡಿತ ರೈತರಿಗೆ ತಲಾ ₹5,000 ಪರಿಹಾರ ನೀಡಲು ನಿರ್ಧರಿಸಿರುವ ರಾಜ್ಯ ಸರ್ಕಾರ, ಯಾದಗಿರಿ…

1 day ago