ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

July 28, 2026
12:32 PM
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ ಸಾಧ್ಯತೆ ಇದೆ. ಜುಲೈ 31ರ ಬಳಿಕ ಹೊಸ ಹವಾಮಾನ ವ್ಯವಸ್ಥೆ ರೂಪುಗೊಳ್ಳದಿದ್ದರೆ ಆಗಸ್ಟ್ ಮೊದಲ ವಾರದಲ್ಲಿ ಮುಂಗಾರು ದುರ್ಬಲಗೊಳ್ಳಬಹುದು.

29.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

ಕರಾವಳಿ:  ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಕೆಲವೆಡೆ ಗುಡುಗು ಸಹಿತ ಮಳೆಯೂ ಸುರಿಯಬಹುದು.
ಪ್ರಸ್ತುತ ಪರಿಸ್ಥಿತಿ ಮುಂದುವರಿದರೆ ಕರಾವಳಿ ಭಾಗದಲ್ಲಿ ಮುಂದಿನ 10 ದಿನಗಳವರೆಗೆ ಮಧ್ಯಂತರ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಮಲೆನಾಡು:  ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆ ಹಾಗೂ ಕರಾವಳಿ ಭಾಗಕ್ಕೆ ಹೊಂದಿಕೊಂಡಿರುವ ಮಲೆನಾಡಿನ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ತುಸು ಹೆಚ್ಚಿರಬಹುದು.
ಆಗಸ್ಟ್ 3ರವರೆಗೆ ಮಲೆನಾಡಿನಲ್ಲಿ ಸಾಮಾನ್ಯ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.

ಉತ್ತರ ಒಳನಾಡು: ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯಾಗುವ ನಿರೀಕ್ಷೆ ಇದೆ. ಕಲಬುರ್ಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಬಹುದು.
ಮುಂದಿನ 10 ದಿನಗಳವರೆಗೆ ಉತ್ತರ ಒಳನಾಡಿನ ಹಲವೆಡೆ ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.

ದಕ್ಷಿಣ ಒಳನಾಡು: ಇಂದು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಅಲ್ಲಲ್ಲಿ ಮೋಡ ಕವಿದ ವಾತಾವರಣ ಕಂಡುಬರಬಹುದು. ಆದರೆ ಆಗಸ್ಟ್ 2ರಿಂದ ಮತ್ತೆ ಕೆಲವು ಭಾಗಗಳಲ್ಲಿ ಮಳೆ ಆರಂಭವಾಗುವ ಲಕ್ಷಣಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ಮಳೆ ಏಕೆ ಮುಂದುವರಿಯುತ್ತಿದೆ? : ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿ ಭಾಗದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮದಿಂದ ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯ ಚಟುವಟಿಕೆ ಮುಂದುವರಿಯುತ್ತಿದೆ. ಪ್ರಸ್ತುತ ಈ ವ್ಯವಸ್ಥೆಯು ಜಾರ್ಖಂಡ್ ಹಾಗೂ ಮಧ್ಯಪ್ರದೇಶ ಮೂಲಕ ಚಲಿಸಿ ಜುಲೈ 31ರ ವೇಳೆಗೆ ಗುಜರಾತ್ ತಲುಪುವ ನಿರೀಕ್ಷೆಯಿದೆ.

ಈ ವ್ಯವಸ್ಥೆ ಪಶ್ಚಿಮದತ್ತ ಸಾಗಿದ ಬಳಿಕ ಹೊಸ ಹವಾಮಾನ ವ್ಯವಸ್ಥೆ ರೂಪುಗೊಳ್ಳದಿದ್ದರೆ, ಆಗಸ್ಟ್ ಮೊದಲ ವಾರದಲ್ಲಿ ಮುಂಗಾರು ಚಟುವಟಿಕೆ ದುರ್ಬಲಗೊಳ್ಳುವ ಸಾಧ್ಯತೆ ಇದೆ.

ರೈತರ ಸಲಹೆ: ಕರಾವಳಿ ಮತ್ತು ಮಲೆನಾಡಿನಲ್ಲಿ ಮಧ್ಯಂತರ ಮಳೆಯು ಮುಂದುವರಿಯುವ ಹಿನ್ನೆಲೆಯಲ್ಲಿ ಅಡಿಕೆ, ತೆಂಗು, ಕಾಳುಮೆಣಸು ಹಾಗೂ ಇತರ ತೋಟಗಾರಿಕಾ ಬೆಳೆಗಳಲ್ಲಿ ನೀರು ನಿಲ್ಲದಂತೆ ಒಳಚರಂಡಿ ವ್ಯವಸ್ಥೆಯನ್ನು ನಿರ್ವಹಿಸಿ. ಮಳೆ ವಿರಾಮದ ಅವಧಿಯನ್ನು ಗಮನಿಸಿ ಮಾತ್ರ ಸಿಂಪಡಣೆ ಹಾಗೂ ಗೊಬ್ಬರದ ಕೆಲಸಗಳನ್ನು ಕೈಗೊಳ್ಳುವುದು ಸೂಕ್ತ.

Intermittent rainfall is likely to continue across Karnataka’s coastal, Malnad and parts of North Interior districts due to the existing low-pressure system over the Bay of Bengal. However, as the system moves towards Gujarat by July 31, the southwest monsoon may weaken during the first week of August if no fresh weather system develops.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 17 – 08 -2026 | ಕರ್ನಾಟಕದಲ್ಲಿ ಮುಂದಿನ ದಿನಗಳ ಹವಾಮಾನ ಹೇಗಿರಲಿದೆ?
August 17, 2026
3:10 PM
by: ಸಾಯಿಶೇಖರ್ ಕರಿಕಳ
₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?
August 17, 2026
7:29 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ
August 16, 2026
12:00 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ
August 16, 2026
7:30 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror