ಹವಾಮಾನ ವರದಿ | 02.07.2026 | ಕರ್ನಾಟಕದಲ್ಲಿ ಇನ್ನೂ ಕೆಲವು ದಿನ ಸಾಧಾರಣ ಮಳೆ: ಕರಾವಳಿಯಲ್ಲಿ ಜುಲೈ 5ರಿಂದ ಮಳೆ ಹೆಚ್ಚಳ ಸಾಧ್ಯತೆ, ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು 12ರ ಬಳಿಕ ಅವಕಾಶ

July 2, 2026
3:43 PM

ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ ಕೆಲವು ದಿನಗಳು ಬಿಟ್ಟು ಬಿಟ್ಟು ಸಾಧಾರಣ ಮಳೆ ಹಾಗೂ ಮೋಡ ಕವಿದ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಅಲ್ಲಲ್ಲಿ ತುಂತುರು ಅಥವಾ ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ.

ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಈಗಿನ ಮುನ್ಸೂಚನೆಯಂತೆ ಜುಲೈ 11ರವರೆಗೆ ಈ ಮಳೆಯ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ.

ಅಡಿಕೆ ಬೆಳೆಗಾರರಿಗೆ ತೋಟಗಳಲ್ಲಿ ಔಷಧಿ ಸಿಂಪಡಿಸಲು ಅನುಕೂಲಕರ ಹವಾಮಾನ ಜುಲೈ 12ರಿಂದ ದೊರೆಯುವ ಸಾಧ್ಯತೆ ಇದೆ. ಆದ್ದರಿಂದ ರೈತರು ಅಗತ್ಯ ಸಿದ್ಧತೆಗಳನ್ನು ಈಗಿನಿಂದಲೇ ಮಾಡಿಕೊಳ್ಳುವುದು ಒಳಿತು.

ಮಲೆನಾಡು: ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಬಿಟ್ಟು ಬಿಟ್ಟು ಸಾಧಾರಣ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಅಥವಾ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.

ಮಲೆನಾಡಿನಲ್ಲಿ ಜುಲೈ 10ರವರೆಗೆ ಸಾಧಾರಣ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ನಂತರ ಮಳೆಯ ತೀವ್ರತೆ ಸ್ವಲ್ಪ ಕಡಿಮೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡು: ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಬಳ್ಳಾರಿ, ರಾಯಚೂರು, ಕೊಪ್ಪಳ, ಕಲಬುರ್ಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ 10 ದಿನಗಳವರೆಗೆ ಉತ್ತರ ಒಳನಾಡಿನಲ್ಲಿ ವ್ಯಾಪಕ ಜೋರು ಮಳೆಯ ಲಕ್ಷಣಗಳು ಕಂಡುಬರುವುದಿಲ್ಲ. ಆದರೆ ಇನ್ನೂ 3ರಿಂದ 4 ದಿನಗಳವರೆಗೆ ಅಲ್ಲಲ್ಲಿ ಸಾಧಾರಣ ಮಳೆ ಮುಂದುವರಿಯಬಹುದು.

ದಕ್ಷಿಣ ಒಳನಾಡು : ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.

ಜುಲೈ 6ರವರೆಗೆ ಇದೇ ರೀತಿಯ ವಾತಾವರಣ ಮುಂದುವರಿಯಲಿದ್ದು, ನಂತರ ಬಿಸಿಲು ಹಾಗೂ ಮೋಡದ ವಾತಾವರಣ ಹೆಚ್ಚಾಗುವ ನಿರೀಕ್ಷೆ ಇದೆ.

ಮಳೆ ಏಕೆ ಹೆಚ್ಚಾಗಬಹುದು?

ಬಂಗಾಳಕೊಲ್ಲಿಯಲ್ಲಿ ಪಶ್ಚಿಮ ಬಂಗಾಳ ಕರಾವಳಿಯ ಸಮೀಪ ಮಧ್ಯಮ ಸ್ತರದ ಗಾಳಿಯ ತಿರುಗುವಿಕೆ (Cyclonic Circulation) ಸಕ್ರಿಯವಾಗಿದೆ. ಇದು ಮುಂದಿನ ಎರಡು ದಿನಗಳಲ್ಲಿ ಮಧ್ಯಭಾರತದ ಮೂಲಕ ರಾಜಸ್ಥಾನದತ್ತ ಚಲಿಸುವ ನಿರೀಕ್ಷೆಯಿದೆ.

ಇದೇ ವೇಳೆ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಮತ್ತೊಂದು ಗಾಳಿಯ ತಿರುಗುವಿಕೆ ರೂಪುಗೊಳ್ಳುವ ಸಾಧ್ಯತೆ ಇದೆ. ಇದರ ಪ್ರಭಾವದಿಂದ ಕರ್ನಾಟಕ ಕರಾವಳಿ ಜಿಲ್ಲೆಗಳಲ್ಲಿ ಜುಲೈ 5ರಿಂದ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆ ಇದೆ.


Most parts of Karnataka are expected to receive light to moderate intermittent rainfall over the next few days. Coastal districts may witness a slight increase in rainfall from July 5 due to cyclonic circulations over the Bay of Bengal, while arecanut growers may get a favourable window for fungicide spraying from around July 12 if weather conditions improve.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ
August 30, 2026
10:38 PM
by: ದ ರೂರಲ್ ಮಿರರ್.ಕಾಂ
ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ
August 30, 2026
10:18 PM
by: ದ ರೂರಲ್ ಮಿರರ್.ಕಾಂ
ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ
August 30, 2026
10:09 PM
by: ದ ರೂರಲ್ ಮಿರರ್.ಕಾಂ
ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?
August 30, 2026
11:59 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror