ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

July 29, 2026
2:00 PM
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ ಆಗಸ್ಟ್ 2ರಿಂದ ಮುಂಗಾರು ದುರ್ಬಲಗೊಂಡು ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ.

ವಾಯುಭಾರ ಕುಸಿತದ ಪರಿಣಾಮ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದ್ದು, ಆಗಸ್ಟ್ 2ರಿಂದ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳು ಕಂಡುಬರುತ್ತಿವೆ.

ಕರಾವಳಿಯಲ್ಲಿ ಮಧ್ಯಂತರ ಮಳೆ ಮುಂದುವರಿಕೆ :  ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆಯ ಮುನ್ಸೂಚನೆ ಇದೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನಲ್ಲಿ ಮಳೆಯ ಪ್ರಮಾಣ ತುಸು ಕಡಿಮೆಯಾಗುವ ಸಾಧ್ಯತೆ ಇದೆ. ಪ್ರಸ್ತುತದ ವಾಯುಭಾರ ಕುಸಿತವು ಆಗಸ್ಟ್ 1ರ ವೇಳೆಗೆ ದುರ್ಬಲಗೊಳ್ಳುವ ನಿರೀಕ್ಷೆಯಿದ್ದು, ಅದರೊಂದಿಗೆ ಆಗಸ್ಟ್ 2 ರಿಂದ ಮುಂಗಾರು ಚಟುವಟಿಕೆಯೂ ಕ್ಷೀಣಿಸುವ ಸಾಧ್ಯತೆ ಇದೆ.

ಮಲೆನಾಡಿನಲ್ಲಿ ಆಗಸ್ಟ್ 2ರಿಂದ ಮಳೆ ಇಳಿಕೆ :  ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಮಲೆನಾಡಿನ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಿರಬಹುದು.

ಶಿವಮೊಗ್ಗ ಜಿಲ್ಲೆಯಲ್ಲಿ ಬಿಟ್ಟುಬಿಟ್ಟು ಮಳೆಯಾಗುವ ನಿರೀಕ್ಷೆಯಿದ್ದು, ಆಗಸ್ಟ್ 2ರಿಂದ ಮಲೆನಾಡಿನ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.

ಉತ್ತರ ಒಳನಾಡಿನಲ್ಲಿ ಸಾಮಾನ್ಯ ಮಳೆ :  ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ನೀಡಲಾಗಿದೆ.  ಪ್ರಸ್ತುತ ಪರಿಸ್ಥಿತಿ ಮುಂದುವರಿದರೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ದಕ್ಷಿಣ ಒಳನಾಡಿನಲ್ಲಿ ಬಿಸಿಲಿನ ವಾತಾವರಣ :  ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಇಂದು ಬಿಸಿಲಿನೊಂದಿಗೆ ಅಲ್ಲಲ್ಲಿ ಮೋಡ ಕವಿದ ವಾತಾವರಣ ಕಂಡುಬರಬಹುದು. ಆಗಸ್ಟ್ 3ರಿಂದ ಕೆಲವು ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.

ಮುಂಗಾರು ಏಕೆ ದುರ್ಬಲವಾಗಲಿದೆ? :  ಪ್ರಸ್ತುತದ ವಾಯುಭಾರ ಕುಸಿತವು ಉತ್ತರ ಆಂಧ್ರ ಪ್ರದೇಶ, ತೆಲಂಗಾಣ, ಛತ್ತೀಸಗಢ ಹಾಗೂ ಮಧ್ಯಪ್ರದೇಶ ಮೂಲಕ ಚಲಿಸಿ ಜುಲೈ 31 ಅಥವಾ ಆಗಸ್ಟ್ 1ರಂದು ಗುಜರಾತ್ ತಲುಪುವ ನಿರೀಕ್ಷೆಯಿದೆ.

ಇದರೊಂದಿಗೆ ಶ್ರೀಲಂಕಾದ ದಕ್ಷಿಣಕ್ಕೆ, ಭೂಮಧ್ಯ ರೇಖೆಗಿಂತ ಕೆಳಭಾಗದ ಹಿಂದೂ ಮಹಾಸಾಗರದಲ್ಲಿ ಮತ್ತೊಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳು ಗೋಚರಿಸುತ್ತಿವೆ. ಈ ವ್ಯವಸ್ಥೆಯಿಂದ ನೈಋತ್ಯ ಮುಂಗಾರಿನ ಗಾಳಿಯ ಹರಿವು ದುರ್ಬಲವಾಗುವ ಸಾಧ್ಯತೆ ಇದ್ದು, ಆಗಸ್ಟ್ ಮೊದಲ ವಾರದಲ್ಲಿ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಸಾಧ್ಯತೆಯನ್ನು ಸೂಚಿಸುತ್ತಿವೆ.

Intermittent rain is expected to continue over Coastal, Malnad and parts of North Interior Karnataka on July 30. However, the current low-pressure system is likely to weaken by August 1, and the southwest monsoon may become weaker across Karnataka from August 2.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಭಾರತದ ಕೃಷಿ ರಫ್ತಿನಲ್ಲಿ ದೊಡ್ಡ ಬದಲಾವಣೆ – ಎಮ್ಮೆ ಮಾಂಸ ರಫ್ತು 5 ಬಿಲಿಯನ್ ಡಾಲರ್ ಗುರಿಯತ್ತ..!
August 20, 2026
9:46 PM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಭವಿಷ್ಯ ಈ ತೀರ್ಪಿನಲ್ಲಿದೆಯೇ..? ಗುಟ್ಕಾ ಬೇರೆ, ಅಡಿಕೆ ಬೇರೆ ? ಸುಪ್ರೀಂ ಕೋರ್ಟ್ ಮುಂದೆ ಇರುವ ದೊಡ್ಡ ಪ್ರಶ್ನೆಗಳು..
August 20, 2026
3:57 PM
by: ದ ರೂರಲ್ ಮಿರರ್.ಕಾಂ
ಹಬ್ಬದ ಬೇಡಿಕೆಯನ್ನೇ ಕೃಷಿ ಅವಕಾಶವನ್ನಾಗಿ ಮಾಡಿದ ಕೇರಳ : 2.52 ಲಕ್ಷ ಟನ್ ತರಕಾರಿ ಉತ್ಪಾದನೆ
August 20, 2026
3:06 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 20-08-2026 | ಕರಾವಳಿಗೆ ಇನ್ನೂ ಮಳೆ ವಿರಾಮವಿಲ್ಲ…! ಆ.23–25 ಕ್ಕೆ ಮತ್ತೆ ಮಳೆ ಹೆಚ್ಚಾಗುವ ಸೂಚನೆ
August 20, 2026
1:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror