Advertisement
ವೆದರ್ ಮಿರರ್

ಹವಾಮಾನ ವರದಿ | 30-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಉತ್ತಮ ಮಳೆ

Share

ಮಧ್ಯಪ್ರದೇಶದಲ್ಲಿ ಸಕ್ರಿಯವಾಗಿರುವ ವಾಯುಭಾರ ಕುಸಿತದ ಪರಿಣಾಮವಾಗಿ ರಾಜ್ಯದ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಜುಲೈ 31ರ ಬೆಳಿಗ್ಗೆವರೆಗೆ ಉತ್ತಮ ಮಳೆಯ ಸಾಧ್ಯತೆ ಇದೆ. ಆದರೆ ಈ ವ್ಯವಸ್ಥೆಯು ಮುಂದಿನ ಎರಡು ದಿನಗಳಲ್ಲಿ ಗುಜರಾತ್‌ ಅಥವಾ ರಾಜಸ್ಥಾನದತ್ತ ಸಾಗುತ್ತಾ ಶಿಥಿಲಗೊಳ್ಳುವ ಲಕ್ಷಣಗಳಿದ್ದು, ಆಗಸ್ಟ್‌ 2ರಿಂದ ರಾಜ್ಯದಲ್ಲಿ ಮುಂಗಾರು ಚಟುವಟಿಕೆ ದುರ್ಬಲಗೊಳ್ಳುವ ಸಾಧ್ಯತೆ ಇದೆ.

ಕರಾವಳಿಯಲ್ಲಿ ಮಧ್ಯಾಹ್ನದ ಬಳಿಕ ಮಳೆ ಹೆಚ್ಚಳ ಸಾಧ್ಯ :  ಕಾಸರಗೋಡು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಬೆಳಗಿನ ವೇಳೆಗೆ ಸಣ್ಣ ಪ್ರಮಾಣದ ಬಿಸಿಲು, ಮೋಡ ಕವಿದ ವಾತಾವರಣ ಹಾಗೂ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಕಳೆದ ಎರಡು ದಿನಗಳಿಂದ ಕರಾವಳಿ ತೀರ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ, ಇಂದು ಮಧ್ಯಾಹ್ನದ ಬಳಿಕ ಅಥವಾ ಸಂಜೆ ವೇಳೆಗೆ ಮಳೆ ಸ್ವಲ್ಪ ಹೆಚ್ಚಾಗುವ ಸಾಧ್ಯತೆ ಇದೆ.

ಪ್ರಸ್ತುತ ಮುನ್ಸೂಚನೆಯಂತೆ ಆಗಸ್ಟ್‌ 2ರಿಂದ ಕರಾವಳಿ ಭಾಗದಲ್ಲಿ ಮಳೆಯ ಪ್ರಮಾಣ ಕ್ರಮೇಣ ಕಡಿಮೆಯಾಗುವ ಸಾಧ್ಯತೆ ಇದೆ.

ಮಲೆನಾಡಿನಲ್ಲಿ ಉತ್ತಮ ಮಳೆ ಮುಂದುವರಿಕೆ :  ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯಾಗಬಹುದು. ಶಿವಮೊಗ್ಗ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ನೀಡಲಾಗಿದೆ.

ಮಲೆನಾಡಿನಲ್ಲಿ ಸುರಿಯುತ್ತಿರುವ ಮಳೆಯು ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿದ್ದು, ಅದು ದುರ್ಬಲಗೊಂಡಂತೆ ಮಳೆಯ ತೀವ್ರತೆಯೂ ಇಳಿಕೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನಲ್ಲಿ ಕೆಲ ಜಿಲ್ಲೆಗಳಿಗೆ ಉತ್ತಮ ಮಳೆ :  ಕಲಬುರ್ಗಿ, ಬೀದರ್, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ ಹಾಗೂ ಬಾಗಲಕೋಟೆ ಜಿಲ್ಲೆಗಳ ಕೆಲವೆಡೆ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಹಾಗೂ ಅಲ್ಲಲ್ಲಿ ತುಂತುರು ಮಳೆಯ ನಿರೀಕ್ಷೆ ಇದೆ.

ದಕ್ಷಿಣ ಒಳನಾಡಿನಲ್ಲಿ ಮಳೆ ಕಡಿಮೆ : ದಕ್ಷಿಣ ಒಳನಾಡಿನ ಜಿಲ್ಲೆಗಳ ಮೇಲೆ ವಾಯುಭಾರ ಕುಸಿತದ ಪ್ರಭಾವ ಕಡಿಮೆ ಇರುವುದರಿಂದ ಬಹುತೇಕ ಕಡೆ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಆಗಸ್ಟ್‌ 3ರಿಂದ ಅಲ್ಲಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ.

ಮುಂಗಾರು ದುರ್ಬಲವಾಗುವ ಲಕ್ಷಣ :  ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತವು ಮುಂದಿನ ಎರಡು ದಿನಗಳಲ್ಲಿ ಗುಜರಾತ್‌ ಅಥವಾ ರಾಜಸ್ಥಾನದತ್ತ ಸಾಗುತ್ತಾ ಶಿಥಿಲಗೊಳ್ಳುವ ಸಾಧ್ಯತೆ ಇದೆ. ಇದರೊಂದಿಗೆ ರಾಜ್ಯದಲ್ಲಿ ಮುಂಗಾರು ಚಟುವಟಿಕೆಯೂ ದುರ್ಬಲಗೊಂಡು ಮಳೆಯ ಪ್ರಮಾಣ ಆಗಸ್ಟ್‌ ಮೊದಲ ವಾರದಲ್ಲಿ ಇಳಿಕೆಯಾಗುವ ಸಾಧ್ಯತೆ ಇದೆ.

Karnataka is expected to receive moderate to good rainfall until the morning of July 31, with coastal, Malnad, and parts of North Interior districts likely to witness showers due to a low-pressure system over Madhya Pradesh. The system is expected to weaken after moving towards Gujarat or Rajasthan within two days, leading to a gradual reduction in rainfall across Karnataka from August 2 onwards.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯ ಭಯದಲ್ಲಿ ಕೇರಳದ ರಬ್ಬರ್ ರೈತರು – ತೋಟಗಾರಿಕೆಗೆ ಮುಂದೆ ಏನು?

ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…

6 hours ago

ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?

ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…

14 hours ago

ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?

ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್‌…

15 hours ago

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳೆಯರ ಓಟಕ್ಕೆ ಚಿನ್ನದ ಹೊಳಪು – 4×400 ಮೀ. ರಿಲೇಯಲ್ಲಿ ಭರ್ಜರಿ ಗೆಲುವು

ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…

16 hours ago

ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?

ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…

1 day ago

ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ

ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…

1 day ago