ಹವಾಮಾನ ವರದಿ | 03-07-2026 | ಕರ್ನಾಟಕದಲ್ಲಿ ಜುಲೈ 10ರವರೆಗೆ ಮಳೆ ಮುಂದುವರಿಕೆ; ಕರಾವಳಿ-ಮಲೆನಾಡಿನ ಅಡಿಕೆ, ಕಾಫಿ ಬೆಳೆಗಾರರಿಗೆ ಜುಲೈ 11ರಿಂದ ಔಷಧಿ ಸಿಂಪಡಿಸಲು ಅವಕಾಶ!

July 3, 2026
11:38 AM

 ರಾಜ್ಯದಲ್ಲಿ ಮುಂಗಾರು ಚಟುವಟಿಕೆ ಮುಂದುವರಿದಿದ್ದು, ಜು. 4ರ ಬೆಳಿಗ್ಗೆ 8 ಗಂಟೆಯವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು ಭಾಗಗಳಲ್ಲಿ ಬಿಟ್ಟು ಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುತ್ತಿದ್ದು, ಮೋಡ ಹಾಗೂ ಬಿಸಿಲಿನ ವಾತಾವರಣ ಕಂಡುಬರಲಿದೆ.

ಕರಾವಳಿಯಲ್ಲಿ ಜುಲೈ 10ರವರೆಗೆ ಮಳೆ

ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಉಡುಪಿ ಸುತ್ತಮುತ್ತಲಿನ ಕರಾವಳಿ ಪ್ರದೇಶಗಳಲ್ಲಿ ಮಳೆಯ ತೀವ್ರತೆ ಸ್ವಲ್ಪ ಹೆಚ್ಚಿರಬಹುದು. ಈಗಿನ ಮುನ್ಸೂಚನೆಯಂತೆ ಜು. 10ರವರೆಗೆ ಮಳೆಯ ವಾತಾವರಣ ಮುಂದುವರಿಯಲಿದ್ದು, ನಂತರ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.

ಇದರಿಂದ ಜು. 11ರಿಂದ ಅಡಿಕೆ ತೋಟಗಳಲ್ಲಿ ಶಿಲೀಂಧ್ರನಾಶಕ ಹಾಗೂ ಇತರ ಬೆಳೆ ಸಂರಕ್ಷಣಾ ಔಷಧಿಗಳ ಸಿಂಪಡಣೆಗೆ ಅನುಕೂಲಕರ ವಾತಾವರಣ ದೊರೆಯುವ ಸಾಧ್ಯತೆ ಇದೆ.

ಮಲೆನಾಡಿಗೂ ಇದೇ ಪರಿಸ್ಥಿತಿ

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯಾಗುವ ಮುನ್ಸೂಚನೆ ಇದೆ. ಕರಾವಳಿಗೆ ಹೊಂದಿಕೊಂಡಿರುವ ಮಲೆನಾಡು ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆ ಇದೆ.

ಜು.10ರವರೆಗೆ ಈ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ಜು.11ರಿಂದ ಕಾಫಿ ತೋಟಗಳಲ್ಲಿ ಔಷಧಿ ಸಿಂಪಡಿಸಲು ಅವಕಾಶ ಸಿಗುವ ನಿರೀಕ್ಷೆ ಇದೆ.

ಉತ್ತರ ಒಳನಾಡಿನಲ್ಲಿ ಜು. 6ರವರೆಗೆ ಮಳೆ

ಬೆಳಗಾವಿ, ಧಾರವಾಡ, ಹಾವೇರಿ, ಗದಗ ಹಾಗೂ ಬಾಗಲಕೋಟೆ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಬಳ್ಳಾರಿ, ಕೊಪ್ಪಳ, ರಾಯಚೂರು, ವಿಜಯಪುರ, ಕಲಬುರ್ಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಈ ಭಾಗಗಳಲ್ಲಿ ಜು.6ರವರೆಗೆ ಮಳೆಯ ವಾತಾವರಣ ಮುಂದುವರಿದು, ಬಳಿಕ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನಲ್ಲಿ ಮಳೆ ಕ್ಷೀಣ

ತುಮಕೂರು, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಸಾಧ್ಯತೆ ಇದೆ. ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ.

ಕರಾವಳಿಯಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಮಧ್ಯಮ ಸ್ತರದಲ್ಲಿ ಉಂಟಾಗಿರುವ ವಾಯು ತಿರುವಿಕೆಯ ಪರಿಣಾಮ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕೆಲವೆಡೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಮುನ್ಸೂಚನೆ ತಿಳಿಸಿದೆ.

Karnataka is expected to receive intermittent rainfall across coastal, Malnad and parts of North Interior Karnataka until July 10. Coastal and Malnad farmers may get a suitable window for spraying fungicides and crop protection chemicals from July 11 as rainfall is likely to decrease. South Interior Karnataka is expected to witness reduced rainfall with cloudy and sunny conditions.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ
July 23, 2026
7:29 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ
July 22, 2026
3:55 PM
by: ಸಾಯಿಶೇಖರ್ ಕರಿಕಳ
ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ
July 21, 2026
11:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror