Advertisement
ವೆದರ್ ಮಿರರ್

ಹವಾಮಾನ ವರದಿ | 04-07-2026 | ಜುಲೈ 10ರ ಬಳಿಕ ಕರ್ನಾಟಕದಲ್ಲಿ ಮುಂಗಾರು ದುರ್ಬಲ..? ಕರಾವಳಿ-ಮಲೆನಾಡಿನಲ್ಲಿ ಮಳೆ ಇಳಿಕೆಗೆ ಮುನ್ಸೂಚನೆ

Share

ಜುಲೈ 5, 2026ರ ಬೆಳಿಗ್ಗೆ 8 ಗಂಟೆಯವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಪ್ರಕಾರ, ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯ ಪ್ರಮಾಣದಲ್ಲಿ ವ್ಯತ್ಯಾಸ ಕಂಡುಬರುವ ಸಾಧ್ಯತೆ ಇದ್ದು, ಜುಲೈ 10ರ ಬಳಿಕ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳು ಗೋಚರಿಸುತ್ತಿವೆ.

ಕರಾವಳಿ ಭಾಗ:  ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಆದರೆ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೋಡ, ಬಿಸಿಲು ಹಾಗೂ ಬಿಟ್ಟು ಬಿಟ್ಟು ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಘಟ್ಟದ ಕೆಳಭಾಗದ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ತುಸು ಹೆಚ್ಚಿರಬಹುದು. ಈಗಿನ ಮುನ್ಸೂಚನೆಯಂತೆ ಜುಲೈ 10ರ ನಂತರ ಕರಾವಳಿಯಲ್ಲಿ ಮಳೆಯ ತೀವ್ರತೆ ಕಡಿಮೆಯಾಗುವ ಸಾಧ್ಯತೆ ಇದೆ.

ಮಲೆನಾಡು: ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಮಧ್ಯಾಹ್ನದ ಬಳಿಕ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಜುಲೈ 9ರವರೆಗೆ ಇದೇ ಮಾದರಿಯ ಹವಾಮಾನ ಮುಂದುವರಿಯುವ ಲಕ್ಷಣಗಳಿವೆ. ಬಳಿಕ ಮಳೆಯ ಪ್ರಮಾಣ ಇಳಿಕೆಯಾಗಬಹುದು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ಉತ್ತರ ಒಳನಾಡು: ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಾತ್ರ ಸಾಧಾರಣ ಮಳೆಯ ಸಾಧ್ಯತೆ ಇದೆ. ನಿರೀಕ್ಷಿತ ಪ್ರಮಾಣದ ಮಳೆಯಾಗುತ್ತಿಲ್ಲ. ಜುಲೈ 5ರಿಂದ ಬಿಸಿಲು ಮತ್ತು ಮೋಡ ಕವಿದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡು:  ದಾವಣಗೆರೆ, ವಿಜಯನಗರ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಮುಖ್ಯವಾಗಿ ಮೋಡ ಕವಿದ ವಾತಾವರಣ ಕಂಡುಬರಬಹುದು. ಜುಲೈ 5 ಅಥವಾ 6ರಿಂದ ಬಿಸಿಲಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ.

ಹವಾಮಾನ ತಜ್ಞರ ಪ್ರಕಾರ, ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ತಿರುವಿಕೆ (Cyclonic Circulation) ಮುಂದಿನ ಎರಡು ದಿನಗಳಲ್ಲಿ ಶಿಥಿಲಗೊಳ್ಳುವ ಸಾಧ್ಯತೆ ಇದ್ದು, ಇದರ ಪರಿಣಾಮವಾಗಿ ರಾಜ್ಯದಲ್ಲಿ ಮುಂಗಾರು ಚಟುವಟಿಕೆ ದುರ್ಬಲಗೊಳ್ಳುವ ಲಕ್ಷಣಗಳು ಗೋಚರಿಸುತ್ತಿವೆ.

ರೈತರಿಗೆ ಸಲಹೆ:  ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಅಡಿಕೆ, ಕಾಫಿ, ಮೆಣಸು ಹಾಗೂ ಇತರೆ ತೋಟಗಾರಿಕಾ ಬೆಳೆಗಳಲ್ಲಿ ರೋಗ ನಿಯಂತ್ರಣ, ಗೊಬ್ಬರ ನಿರ್ವಹಣೆ ಹಾಗೂ ಅಗತ್ಯ ಸಿಂಪಡಣೆ ಕಾರ್ಯಗಳನ್ನು ಸ್ಥಳೀಯ ಹವಾಮಾನವನ್ನು ಗಮನಿಸಿ ಯೋಜಿಸಿಕೊಳ್ಳುವುದು ಸೂಕ್ತ. ಇತರ ಕೃಷಿಗಳಲ್ಲೂ ಮಳೆಯ ಸಾಧ್ಯತೆ ಗಮನಿಸಿಕೊಳ್ಳುವುದು ಉತ್ತಮ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

The latest Karnataka weather forecast indicates moderate rainfall over Coastal and Malnad regions until July 9–10, after which the southwest monsoon is likely to weaken. North and South Interior Karnataka are expected to experience more sunshine with only scattered rainfall.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

5 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

13 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

17 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

22 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

2 days ago