ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

July 5, 2026
2:32 PM
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ ಮತ್ತು ಮಲೆನಾಡಿನಲ್ಲೂ ಮಳೆ ಕಡಿಮೆಯಾಗಲಿದ್ದು, ತಾಪಮಾನ ಏರಿಕೆಯಾಗುವ ಮುನ್ಸೂಚನೆ ನೀಡಲಾಗಿದೆ.

ಜುಲೈ 6 ರ ಬೆಳಿಗ್ಗೆ 8 ಗಂಟೆಯವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ, ರಾಜ್ಯದ ಬಹುತೇಕ ಭಾಗಗಳಲ್ಲಿ ಸಾಧಾರಣ ಮಳೆ ಹಾಗೂ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಜುಲೈ 8 ರಿಂದ 10ರ ನಡುವೆ ಮುಂಗಾರು ಚಟುವಟಿಕೆ ಗಣನೀಯವಾಗಿ ದುರ್ಬಲಗೊಳ್ಳುವ ಸಾಧ್ಯತೆ ವ್ಯಕ್ತವಾಗಿದೆ. ಕರಾವಳಿ ಹಾಗೂ ಮಲೆನಾಡಿನಲ್ಲಿ ಸದ್ಯ ಸಾಮಾನ್ಯ ಮಳೆಯ ವಾತಾವರಣವಿದ್ದರೂ, ನಂತರ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಲಕ್ಷಣಗಳು ಗೋಚರಿಸುತ್ತಿವೆ.

ಕರಾವಳಿ ಜಿಲ್ಲೆಗಳು : ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಹಾಗೂ ಗಾಳಿ ಸಹಿತ ಸಾಧಾರಣ ಮಳೆಯ ಸಾಧ್ಯತೆ ಇದೆ. ಆದರೆ, ಈಗಿನ ಅಂದಾಜಿನಂತೆ ಜುಲೈ 9ರಿಂದ ಕರಾವಳಿ ಭಾಗದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಇಳಿಮುಖವಾಗುವ ಸಾಧ್ಯತೆ ಇದೆ.

ಮಲೆನಾಡು ಜಿಲ್ಲೆಗಳು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು-ಮೋಡದ ವಾತಾವರಣದೊಂದಿಗೆ ಬಿಟ್ಟುಬಿಟ್ಟು ತುಂತುರು ಮಳೆಯ ಮುನ್ಸೂಚನೆ ನೀಡಲಾಗಿದೆ. ಜುಲೈ 8ರವರೆಗೆ ಸಾಧಾರಣ ಮಳೆಯ ವಾತಾವರಣ ಮುಂದುವರಿದ ಬಳಿಕ ಮಳೆ ಕಡಿಮೆಯಾಗುವ ಲಕ್ಷಣಗಳು ಕಂಡು ಬರುತ್ತಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ಉತ್ತರ ಒಳನಾಡು : ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಗಳಲ್ಲಿ ಮೋಡ ಹಾಗೂ ತುಂತುರು ಮಳೆಯ ಸಾಧ್ಯತೆ ಇದೆ. ಬಾಗಲಕೋಟೆ, ವಿಜಯಪುರ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಬಹುದು. ಮುಂದಿನ 10 ದಿನಗಳವರೆಗೆ ಗಮನಾರ್ಹ ಮಳೆಯ ಸಾಧ್ಯತೆ ಕಾಣುತ್ತಿಲ್ಲ.

ದಕ್ಷಿಣ ಒಳನಾಡು : ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಮತ್ತು ಒಂದೆರಡು ತುಂತುರು ಮಳೆಯ ಸಾಧ್ಯತೆ ಇದೆ. ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಮುಂದಿನ 10 ದಿನಗಳಲ್ಲಿ ವ್ಯಾಪಕ ಮಳೆಯ ಲಕ್ಷಣಗಳು ಕಂಡುಬರುತ್ತಿಲ್ಲ.

ಮಹಾರಾಷ್ಟ್ರ–ಗುಜರಾತ್‌ನಲ್ಲಿ ಭಾರಿ ಮಳೆ, ಕರ್ನಾಟಕದಲ್ಲಿ ಇಳಿಮುಖ :  ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಾಗಿದ್ದ ವಾಯುಭಾರ ಕುಸಿತದ ಪರಿಣಾಮವಾಗಿ ಮಹಾರಾಷ್ಟ್ರ ಹಾಗೂ ಗುಜರಾತ್ ಕರಾವಳಿಯಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಸಾಧ್ಯತೆ ಇದೆ. ಈ ಮಳೆ ಜುಲೈ 8ರಿಂದ ಕಡಿಮೆಯಾಗುತ್ತಿದ್ದಂತೆ ಕರ್ನಾಟಕದಲ್ಲಿಯೂ ಮಳೆಯ ಪ್ರಮಾಣ ಗಣನೀಯವಾಗಿ ಕುಸಿಯುವ ಸಾಧ್ಯತೆ ಇದೆ. ಇದೇ ವೇಳೆ ರಾಜ್ಯದಲ್ಲಿ ತಾಪಮಾನವೂ ಏರಿಕೆಯಾಗುವ ನಿರೀಕ್ಷೆ ವ್ಯಕ್ತವಾಗಿದೆ.

ಎಲ್ ನಿನೋ ಪ್ರಭಾವದ ಮುನ್ಸೂಚನೆ :  ಪ್ರಸ್ತುತ ಹವಾಮಾನ ವಿಶ್ಲೇಷಣೆಯ ಪ್ರಕಾರ, ಜುಲೈ 10ರಿಂದ ಎಲ್ ನಿನೋ ಪ್ರಭಾವದ ಆರಂಭಿಕ ಲಕ್ಷಣಗಳು ಗೋಚರಿಸಬಹುದೆಂಬ ಅಂದಾಜಿದ್ದು, ಇದರ ಪರಿಣಾಮ ದೇಶದಾದ್ಯಂತ ಮುಂಗಾರು ದುರ್ಬಲಗೊಳ್ಳುವ ಸಾಧ್ಯತೆ ಇದೆ. ಆದರೆ, ಇದು ದೀರ್ಘಾವಧಿಯ ಮುನ್ಸೂಚನೆಯಾಗಿರುವುದರಿಂದ ಮುಂದಿನ ದಿನಗಳ ಅಧಿಕೃತ ಹವಾಮಾನ ಮಾಹಿತಿಯನ್ನು ರೈತರು ಗಮನಿಸುತ್ತಿರಬೇಕು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

Karnataka is expected to witness mostly light rain and cloudy conditions until July 8. From July 8–10, rainfall is likely to decline sharply across Coastal and Malnad regions, while Interior Karnataka may remain largely dry. Rising temperatures are expected, and early signs of El Niño from July 10 could further weaken the southwest monsoon.

ನಿಮ್ಮ ಅಭಿಪ್ರಾಯ, ಪ್ರತಿಕ್ರಿಯೆಗಳನ್ನು ಕಮೆಂಟ್‌ ಮೂಲಕ ತಿಳಿಸಿ…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror