Advertisement
ವೆದರ್ ಮಿರರ್

ಹವಾಮಾನ ವರದಿ | 06-07-2026 | ಕರ್ನಾಟಕದಲ್ಲಿ ಮಳೆ ಮತ್ತಷ್ಟು ಕಡಿಮೆಯಾಗುವ ಸೂಚನೆ | ಜುಲೈ 10ರಿಂದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಸಾಧ್ಯತೆ

Share

ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಜುಲೈ 7ರ ಬೆಳಿಗ್ಗೆ 8 ಗಂಟೆಯವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ, ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಾತ್ರ ಸಾಧಾರಣ ಮಳೆಯ ಸಾಧ್ಯತೆ ಇದ್ದು, ಜುಲೈ 10ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲಿನ ವಾತಾವರಣ ಮೇಲುಗೈ ಸಾಧಿಸುವ ನಿರೀಕ್ಷೆಯಿದೆ.

ಕರಾವಳಿ ಜಿಲ್ಲೆಗಳು : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು-ಮೋಡದ ವಾತಾವರಣದ ನಡುವೆ ಬಿಟ್ಟು ಬಿಟ್ಟು ಗಾಳಿಯೊಂದಿಗೆ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾತ್ರ ಗಾಳಿಯೊಂದಿಗೆ ಉತ್ತಮ ಮಳೆಯ ಮುನ್ಸೂಚನೆ ನೀಡಲಾಗಿದೆ.

ಜು. 8ರವರೆಗೆ ಇದೇ ಮಾದರಿಯ ವಾತಾವರಣ ಮುಂದುವರಿಯಲಿದ್ದು, ಬಳಿಕ ಮಳೆಯ ಪ್ರಮಾಣ ಇನ್ನಷ್ಟು ಕುಸಿಯಲಿದೆ. ಜು.11ರಿಂದ ದಿನದ ಹೆಚ್ಚಿನ ಅವಧಿಯಲ್ಲಿ ಬಿಸಿಲಿನ ವಾತಾವರಣ ಕಂಡುಬರುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ಮಲೆನಾಡು ಜಿಲ್ಲೆಗಳು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಬಿಟ್ಟು ಬಿಟ್ಟು ಸಾಧಾರಣ ಮಳೆಯಾಗಲಿದೆ.

ಜು.8ರವರೆಗೆ ಇದೇ ಸ್ಥಿತಿ ಮುಂದುವರಿಯಲಿದ್ದು, ನಂತರ ಮಳೆಯ ಪ್ರಮಾಣ ತೀವ್ರವಾಗಿ ಕಡಿಮೆಯಾಗುವ ಸಾಧ್ಯತೆ ಇದೆ. ಜು.10ರಿಂದ ದಿನದ ಹೆಚ್ಚಿನ ಸಮಯ ಬಿಸಿಲಿನ ವಾತಾವರಣ ಇರಬಹುದೆಂದು ಅಂದಾಜಿಸಲಾಗಿದೆ.

ಉತ್ತರ ಒಳನಾಡು : ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ. ಕಲಬುರ್ಗಿ ಜಿಲ್ಲೆಯ ಮಹಾರಾಷ್ಟ್ರ ಗಡಿ ಭಾಗಗಳಲ್ಲಿ ಸಾಧಾರಣ ಮಳೆಯಾಗಬಹುದು.

ಉಳಿದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಜು.9ರವರೆಗೆ ಇದೇ ಸ್ಥಿತಿ ಮುಂದುವರಿಯಲಿದ್ದು, ಜು.10ರಿಂದ ಮಳೆಯ ಪ್ರಮಾಣ ಗಮನಾರ್ಹವಾಗಿ ಕುಸಿಯಲಿದೆ.

ದಕ್ಷಿಣ ಒಳನಾಡು : ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಕಂಡುಬರಲಿದ್ದು, ಒಂದೆರಡು ಕಡೆ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಜು.9ರವರೆಗೆ ಇದೇ ವಾತಾವರಣ ಮುಂದುವರಿಯಲಿದ್ದು, ಜು.10ರಿಂದ ದಿನದ ಹೆಚ್ಚಿನ ಅವಧಿಯಲ್ಲಿ ಬಿಸಿಲು ಆವರಿಸುವ ಸಾಧ್ಯತೆಗಳಿವೆ.

ಮಹಾರಾಷ್ಟ್ರದ ಮುಂಬೈ ಕರಾವಳಿಯ ಕೆಳಮಟ್ಟದ ಅಧಿಕ ಒತ್ತಡದ ಪ್ರಭಾವದಿಂದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಬಿರುಸಿನ ಗಾಳಿ ಹಾಗೂ ಮಧ್ಯಂತರ ಮಳೆಯಾಗುತ್ತಿದೆ. ಮುಂಬೈ ಹಾಗೂ ಉತ್ತರ ಮಹಾರಾಷ್ಟ್ರ ಕರಾವಳಿಯಲ್ಲಿ ಇಂದೂ, ನಾಳೆಯೂ ಭಾರೀ ಮಳೆಯ ಮುನ್ಸೂಚನೆ ಇದ್ದು, ಜು.8ರಿಂದ ಅದರ ತೀವ್ರತೆ ಕಡಿಮೆಯಾಗುವ ಸಾಧ್ಯತೆ ಇದೆ.

ಈ ವ್ಯವಸ್ಥೆ ದುರ್ಬಲಗೊಂಡ ನಂತರ ರಾಜ್ಯದಲ್ಲೂ ಮಳೆ ಕುಸಿಯುವ ಸಾಧ್ಯತೆ ಹೆಚ್ಚಿದ್ದು, ಎಲ್‌ನಿನೋ ಪ್ರಭಾವವೂ ಮಳೆಯ ಪ್ರಮಾಣ ಕಡಿಮೆಯಾಗಲು ಕಾರಣವಾಗಬಹುದು. ಇದೇ ವೇಳೆ ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದ ವಾಯುಭಾರ ಕುಸಿತವು ಒಡಿಶಾ ಹಾಗೂ ಛತ್ತೀಸ್‌ಗಢ ಭಾಗ ತಲುಪಿದ್ದು, ಇನ್ನೆರಡು ದಿನಗಳಲ್ಲಿ ಅದು ಶಿಥಿಲಗೊಳ್ಳುವ ನಿರೀಕ್ಷೆಯಿದೆ.

ಮಳೆ ಕಡಿಮೆಯಾಗುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ಅಡಿಕೆ, ಕಾಫಿ, ಮೆಣಸು ಹಾಗೂ ಇತರ ತೋಟಗಾರಿಕಾ ಬೆಳೆಗಳಲ್ಲಿ ರೋಗನಿಯಂತ್ರಣ ಸಿಂಪಡಣೆ, ಗೊಬ್ಬರ ನಿರ್ವಹಣೆ ಮತ್ತು ತೋಟದ ನಿರ್ವಹಣಾ ಕಾರ್ಯಗಳನ್ನು ಯೋಜಿಸಲು ಇದು ಅನುಕೂಲಕರ ಅವಧಿಯಾಗಬಹುದು. ಆದರೆ ಸ್ಥಳೀಯ ಮಳೆಯ ಸ್ಥಿತಿಗತಿಯನ್ನು ಗಮನಿಸಿ ಮಾತ್ರ ಕೃಷಿ ಕಾರ್ಯಗಳನ್ನು ಕೈಗೊಳ್ಳುವುದು ಒಳಿತು.

Rainfall across Karnataka is expected to weaken gradually after July 8. Coastal, Malnad and parts of North Interior Karnataka may continue to receive light to moderate showers until July 8–9, after which rainfall is likely to reduce significantly. Sunny conditions are expected to dominate from July 10–11 in most regions, creating a favorable window for agricultural field operations.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್

ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…

1 day ago

ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ

ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…

1 day ago

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

2 days ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

2 days ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

2 days ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

2 days ago