Advertisement
ವೆದರ್ ಮಿರರ್

ಹವಾಮಾನ ವರದಿ | 07-07-2026 | ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ – ಜುಲೈ 11 ರಿಂದ ಮಳೆ ತೀವ್ರ ಇಳಿಕೆ ಸಾಧ್ಯತೆ

Share

ರಾಜ್ಯದ ಬಹುತೇಕ ಭಾಗಗಳಲ್ಲಿ ಇನ್ನೂ ಕೆಲ ದಿನಗಳ ಕಾಲ ಬಿಟ್ಟುಬಿಟ್ಟು ಮಳೆಯ ವಾತಾವರಣ ಮುಂದುವರಿಯಲಿದ್ದು, ಜುಲೈ 11ರಿಂದ ಕರ್ನಾಟಕದಾದ್ಯಂತ ಮಳೆಯ ಪ್ರಮಾಣ ಗಮನಾರ್ಹವಾಗಿ ಕಡಿಮೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿದರೂ, ಹಂತ ಹಂತವಾಗಿ ಬಿಸಿಲಿನ ವಾತಾವರಣ ಹೆಚ್ಚಾಗುವ ಲಕ್ಷಣಗಳು ಗೋಚರಿಸುತ್ತಿವೆ.

ಕರಾವಳಿ ಜಿಲ್ಲೆಗಳು : ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಉತ್ತಮ ಮಳೆಯ ಮುನ್ಸೂಚನೆ ಇದೆ. ಕರಾವಳಿಯಲ್ಲಿ ಗಾಳಿಯ ವೇಗವೂ ಮುಂದುವರಿಯುವ ಸಾಧ್ಯತೆ ಇದೆ. ಪ್ರಸ್ತುತ ಅಂದಾಜಿನಂತೆ ಜುಲೈ 9ರಿಂದ ಮಳೆಯ ತೀವ್ರತೆ ಕಡಿಮೆಯಾಗಲಿದ್ದು, ಜುಲೈ 11ರಿಂದ ಬಿಸಿಲು-ಮೋಡದ ವಾತಾವರಣ ಹೆಚ್ಚಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆಯಾಗಲಿದೆ. ಕರಾವಳಿಗೆ ಹೊಂದಿಕೊಂಡಿರುವ ಮಲೆನಾಡಿನ ಭಾಗಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಿರಬಹುದು. ಜುಲೈ 9ರಿಂದ ಮಳೆ ಇಳಿಕೆಯಾಗಲಿದ್ದು, ಜುಲೈ 10ರಿಂದ ಬಿಸಿಲು ಮತ್ತು ಮೋಡದ ವಾತಾವರಣ ಕಂಡುಬರುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ಉತ್ತರ ಒಳನಾಡು : ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಉತ್ತಮ ಮಳೆ ಮುಂದುವರಿಯಲಿದೆ. ಗದಗ, ಬಾಗಲಕೋಟೆ ಹಾಗೂ ಕಲಬುರ್ಗಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಹೆಚ್ಚಿರಲಿದೆ. ಜುಲೈ 10ರಿಂದ ಹೆಚ್ಚಿನ ಅವಧಿಯಲ್ಲಿ ಬಿಸಿಲಿನ ವಾತಾವರಣ ಕಂಡುಬರುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡು :  ಮೈಸೂರು, ದಾವಣಗೆರೆ, ವಿಜಯನಗರ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಜುಲೈ 11ರಿಂದ ಬಿಸಿಲು ಹಾಗೂ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ.

ಅರಬ್ಬಿ ಸಮುದ್ರದಲ್ಲಿ ತಿರುವಿಕೆಯ ಪ್ರಭಾವ :  ಅರಬ್ಬಿ ಸಮುದ್ರದ ಮಹಾರಾಷ್ಟ್ರ ಕರಾವಳಿಯಲ್ಲಿ ಮಧ್ಯಮ ಹಾಗೂ ಕೆಳಸ್ತರದ ತಿರುವಿಕೆ ಮುಂದುವರಿದಿರುವ ಕಾರಣ ಮುಂಬೈ ಭಾಗದಲ್ಲಿ ಇಂದೂ ಭಾರೀ ಮಳೆಯ ಮುನ್ಸೂಚನೆ ಇದೆ. ಇದರ ಪ್ರಭಾವದಿಂದ ಕರ್ನಾಟಕ ಕರಾವಳಿಯಲ್ಲೂ ಇನ್ನೂ ಕೆಲವು ದಿನ ಮಳೆಯ ವಾತಾವರಣ ಮುಂದುವರಿಯಲಿದೆ.

ರೈತರಿಗೆ ಏನು ಸೂಚನೆ? :  ಜುಲೈ 11ರಿಂದ ಮಳೆ ಗಮನಾರ್ಹವಾಗಿ ಕಡಿಮೆಯಾದರೆ ಅಡಿಕೆ, ಕಾಫಿ, ಮೆಣಸು ಸೇರಿದಂತೆ ತೋಟಗಾರಿಕಾ ಬೆಳೆಗಳಲ್ಲಿ ಔಷಧ ಸಿಂಪಡಣೆ, ಗೊಬ್ಬರ ನಿರ್ವಹಣೆ ಹಾಗೂ ಇತರೆ ಕೃಷಿ ಕಾರ್ಯಗಳಿಗೆ ಅನುಕೂಲಕರ ವಾತಾವರಣ ಸಿಗುವ ಸಾಧ್ಯತೆ ಇದೆ. ಆದರೆ ಸ್ಥಳೀಯ ಮಳೆಯ ಪರಿಸ್ಥಿತಿಯನ್ನು ಗಮನಿಸಿ ಮಾತ್ರ ಕೃಷಿ ಕಾರ್ಯಗಳನ್ನು ಕೈಗೊಳ್ಳುವುದು ಸೂಕ್ತ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

Rain is expected to continue intermittently across Karnataka until around July 10, especially in the coastal and Malnad regions. Forecasts indicate a significant reduction in rainfall from July 11, bringing more sunshine and cloudy conditions, which may provide farmers with a suitable window for crop protection and field operations.

ನಿಮ್ಮ ಅಭಿಪ್ರಾಯ, ಪ್ರತಿಕ್ರಿಯೆಗಳನ್ನು ಕಮೆಂಟ್‌ ಮೂಲಕ ತಿಳಿಸಿ…
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

8 hours ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

10 hours ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

10 hours ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

11 hours ago

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

2 days ago