Advertisement
ವೆದರ್ ಮಿರರ್

ಹವಾಮಾನ ವರದಿ | 16-06-2026 | ರಾಜ್ಯದಲ್ಲಿ ಇನ್ನೂ ದುರ್ಬಲ ಮಳೆ ಚಟುವಟಿಕೆ – ಜೂ.22 ರಿಂದ ಕರಾವಳಿಯಲ್ಲಿ ಮುಂಗಾರು ಚೇತರಿಕೆ ಸಾಧ್ಯತೆ

Share

ಕರ್ನಾಟಕದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಮುಂದಿನ ಕೆಲ ದಿನಗಳವರೆಗೆ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಕರಾವಳಿ ಮತ್ತು ಮಲೆನಾಡಿನ ಕೆಲವು ಸೀಮಿತ ಪ್ರದೇಶಗಳಲ್ಲಿ ಮಾತ್ರ ಸಂಜೆ ವೇಳೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಜೂನ್ 17 ರ ಬೆಳಿಗ್ಗೆ 8 ಗಂಟೆಯವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ, ಕರಾವಳಿಯ ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ವೇಳೆಗೆ ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಕೆಲ ಭಾಗಗಳಲ್ಲಿ ತುಂತುರು ಮಳೆ ಹಾಗೂ ಒಂದೆರಡು ಕಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಪ್ರಸ್ತುತ ಕರಾವಳಿ ಜಿಲ್ಲೆಗಳಲ್ಲಿ ಅತಿ ದುರ್ಬಲ ಮುಂಗಾರು ಮುಂದುವರಿಯಲಿದ್ದು, ಜೂನ್ 22ರಿಂದ ಮುಂಗಾರು ಅಲ್ಪ ಪ್ರಮಾಣದಲ್ಲಿ ಚೇತರಿಕೆ ಕಾಣುವ ನಿರೀಕ್ಷೆ ಇದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಬಿಸಿಲು ಹಾಗೂ ಮೋಡದ ವಾತಾವರಣ ಇರಲಿದ್ದು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಂಜೆ ವೇಳೆ ಅಲ್ಲಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 10 ದಿನಗಳವರೆಗೆ ಜೋರು ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಾತ್ರ ಸ್ಥಳೀಯ ಗುಡುಗು ಮಳೆಯಾಗುವ ಲಕ್ಷಣಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಮುಂದುವರಿಯಲಿದ್ದು, ಸದ್ಯಕ್ಕೆ ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ. ಜೂನ್ 23ರಿಂದ ಅಲ್ಲಲ್ಲಿ ಮಳೆ ಆರಂಭವಾಗುವ ಲಕ್ಷಣಗಳು ಕಂಡುಬರುತ್ತಿವೆ.

ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ರಾಮನಗರ ಜಿಲ್ಲೆಗಳ ಒಂದೆರಡು ಕಡೆ ಸಂಜೆ ವೇಳೆ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಮುಂದುವರಿಯಲಿದೆ. ಮುಂದಿನ ದಿನಗಳಲ್ಲಿಯೂ ದಕ್ಷಿಣ ಒಳನಾಡಿನಲ್ಲಿ ಅಲ್ಲಲ್ಲಿ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆಗಳಿವೆ.

ಮುಂಗಾರು ಅತಿ ದುರ್ಬಲವಾಗಿರುವುದರಿಂದ ಹೆಚ್ಚಿದ ಬಿಸಿಲಿನ ತಾಪಮಾನದಿಂದ ಸ್ಥಳೀಯವಾಗಿ ಮೋಡಗಳು ರೂಪುಗೊಂಡು ರಾಜ್ಯದ ಕೆಲವು ಸೀಮಿತ ಪ್ರದೇಶಗಳಲ್ಲಿ ಅನಿರೀಕ್ಷಿತ ಮಳೆಯಾಗುತ್ತಿದೆ. ಇದೇ ವೇಳೆ ಎಲ್ ನಿನೋ ಆರಂಭವಾಗಿರುವ ವರದಿಗಳಿದ್ದು, ಇದು ನವೆಂಬರ್ ವೇಳೆಗೆ ತೀವ್ರ ಸ್ವರೂಪ ಪಡೆಯುವ ಸಾಧ್ಯತೆ ಇದೆ. ಈ ಬೆಳವಣಿಗೆಗಳು ಮುಂಗಾರು ಮಳೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದ್ದು, ರೈತರು ಲಭ್ಯವಾಗುವ ಮಳೆ ನೀರನ್ನು ಸಂಗ್ರಹಿಸಿ ಸಮರ್ಪಕವಾಗಿ ಬಳಕೆ ಮಾಡುವತ್ತ ಗಮನ ಹರಿಸುವುದು ಅಗತ್ಯವಾಗಿದೆ.

The southwest monsoon remains very weak across Karnataka. Coastal and Malnad regions may receive isolated thunder showers, while most interior districts are expected to experience sunny and partly cloudy conditions. Weather models indicate a slight improvement in monsoon activity along the coast from June 22. Meanwhile, El Niño conditions are reportedly developing and may intensify by November.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 01-10-2026 | ಕರ್ನಾಟಕದಲ್ಲಿ ಮತ್ತೆ ಮಳೆ ಇಳಿಕೆ – ಕಾರಣವೇನು?

ಉತ್ತರ ಭಾರತದ ಶುಷ್ಕ ಗಾಳಿ ಹಾಗೂ ಪೆಸಿಫಿಕ್ ಸಾಗರದ ಪ್ರಬಲ ಚಂಡಮಾರುತಗಳ ಪರಿಣಾಮ…

7 hours ago

ಹೊಸ ಅಡಿಕೆ ಧಾರಣೆ 350 ಫಿಕ್ಸ್ – ಆರಂಭಿಕ ಧಾರಣೆಯೇ ಆಮದು ದರಕ್ಕಿಂತ ಕಡಿಮೆ..!

ಹೊಸ ಅಡಿಕೆಯ ಆರಂಭಿಕ ಧಾರಣೆ ₹330–350ಕ್ಕೆ ನಿಗದಿಯಾಗಿದ್ದು, ಆಮದು ಅಡಿಕೆಗೆ ಇರುವ ₹351ರ…

8 hours ago

ರಿಲಯನ್ಸ್ ಫೌಂಡೇಶನ್ ಪದವಿ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಪದವಿ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿವೇತನಕ್ಕೆ…

12 hours ago

ರೈತನ ಹೊಲದಿಂದ ನಿಮ್ಮ ತಟ್ಟೆಯವರೆಗೆ… AI ಬರಲಿದೆ..!

ಕರ್ನಾಟಕದಲ್ಲಿ ಬೀಜದಿಂದ ಗ್ರಾಹಕರ ತಟ್ಟೆಯವರೆಗೆ ಕೃಷಿ ಉತ್ಪನ್ನದ ಪಯಣವನ್ನು ಪತ್ತೆಹಚ್ಚಲು AI ಆಧಾರಿತ…

13 hours ago

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಚಿನ್ನದ ಬೇಟೆ – ಒಂದೇ ದಿನ 4 ಚಿನ್ನ; ಪದಕಗಳ ಸಂಖ್ಯೆ 60ಕ್ಕೆ ಏರಿಕೆ

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಒಂದೇ ದಿನ 4 ಚಿನ್ನ ಸೇರಿದಂತೆ 7 ಪದಕ…

21 hours ago

ಅಡಿಕೆ ವಹಿವಾಟಿನ ಮೇಲೆ ಹೆಚ್ಚಿದ ಕಣ್ಗಾವಲು..!, ಗಮನ ಸೆಳೆದ ಪ್ರತ್ಯೇಕ ಮೂರು ಘಟನೆಗಳು

ಅಸ್ಸಾಂನಲ್ಲಿ 5.74 ಟನ್ ಅಡಿಕೆ ವಶ, ಕೇರಳದಲ್ಲಿ 380 ಚೀಲ ಅಡಿಕೆ ಬಿಡುಗಡೆಗೆ…

23 hours ago