Advertisement
ವೆದರ್ ಮಿರರ್

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

Share

ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡು ಭಾಗಗಳಲ್ಲಿ ಮುಂಗಾರು ಚಟುವಟಿಕೆ ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. 2026ರ ಜೂನ್ 18ರ ಬೆಳಿಗ್ಗೆ 8 ಗಂಟೆಯವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ ಜಿಲ್ಲೆಗಳಲ್ಲಿ ಅಲ್ಪ ಪ್ರಮಾಣದ ಮಳೆ ದಾಖಲಾಗಿದ್ದು, ಮುಂದಿನ ಕೆಲ ದಿನಗಳವರೆಗೆ ಇದೇ ರೀತಿಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.

ಕರಾವಳಿಯಲ್ಲಿ ಇನ್ನೂ ಮುಂಗಾರು ದುರ್ಬಲ :  ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮುಂಜಾನೆ ಕೆಲವೆಡೆ ತುಂತುರು ಮಳೆಯಾಗಿದ್ದು, ದಿನದ ವೇಳೆ ಬಿಸಿಲು-ಮೋಡದ ವಾತಾವರಣದೊಂದಿಗೆ ಒಂದೆರಡು ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸಹ ಇದೇ ಮಾದರಿಯ ವಾತಾವರಣ ಮುಂದುವರಿಯುವ ನಿರೀಕ್ಷೆ ಇದೆ.

ಪ್ರಸ್ತುತ ಪರಿಸ್ಥಿತಿಯಂತೆ ಕಾಸರಗೋಡು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜೂನ್ 21ರವರೆಗೆ ಮಳೆಯ ಪ್ರಮಾಣದಲ್ಲಿ ಹೆಚ್ಚಿನ ಬದಲಾವಣೆ ಕಾಣುವ ಸಾಧ್ಯತೆ ಕಡಿಮೆ. ಜೂನ್ 22ರಿಂದ ಉತ್ತರ ಕನ್ನಡ ಸೇರಿದಂತೆ ಕರಾವಳಿ ಭಾಗಗಳಲ್ಲಿ ಮುಂಗಾರು ಸ್ವಲ್ಪ ಚೇತರಿಕೆ ಕಾಣುವ ಸಾಧ್ಯತೆ ಇದೆ.

ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ : ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಕರಾವಳಿ ಗಡಿ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದೊಂದಿಗೆ ತುಂತುರು ಮಳೆಯ ಮುನ್ಸೂಚನೆ ನೀಡಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಜೂನ್ 18ರಿಂದ ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಚಟುವಟಿಕೆ ಸ್ವಲ್ಪ ಹೆಚ್ಚಾಗುವ ಲಕ್ಷಣಗಳು ಕಂಡುಬರುತ್ತಿವೆ.

ಉತ್ತರ ಒಳನಾಡಿನಲ್ಲಿ ಮಳೆ ಕೊರತೆ : ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಮುಂದುವರಿಯಲಿದ್ದು, ಜೂನ್ 21ರ ನಂತರ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನಲ್ಲಿ ಚದುರಿದ ಮಳೆ : ಚಾಮರಾಜನಗರ, ರಾಮನಗರ ಹಾಗೂ ಬೆಂಗಳೂರು ನಗರ ಜಿಲ್ಲೆಯ ತಮಿಳುನಾಡು ಗಡಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಮೈಸೂರು, ಮಂಡ್ಯ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಂಜೆ ವೇಳೆ ಮೋಡ ಕವಿದು ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ.

ತುಮಕೂರು, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಬಿಸಿಲು-ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.

ರೈತರಿಗೆ ಎಚ್ಚರಿಕೆ : ಹವಾಮಾನ ವರದಿಗಳ ಪ್ರಕಾರ ಎಲ್ ನಿನೋ ಪ್ರಭಾವದಿಂದ ಜೂನ್‌ನಿಂದ ಸೆಪ್ಟೆಂಬರ್ ಅವಧಿಯಲ್ಲಿ ರಾಜ್ಯದಲ್ಲಿ ಮಳೆಯ ಕೊರತೆ ಎದುರಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ರೈತರು ಈಗ ಬೀಳುತ್ತಿರುವ ಅಲ್ಪ ಪ್ರಮಾಣದ ಮಳೆಯ ನೀರನ್ನು ಕೆರೆ, ಹೊಂಡ, ಕೃಷಿ ಹೊಂಡ, ಮಳೆ ನೀರು ಸಂಗ್ರಹಣಾ ವ್ಯವಸ್ಥೆಗಳ ಮೂಲಕ ಉಳಿಸಿಕೊಳ್ಳುವ ಯೋಜನೆ ರೂಪಿಸುವುದು ಅತ್ಯಂತ ಅಗತ್ಯವಾಗಿದೆ.

ವಿಶೇಷವಾಗಿ ಅಡಿಕೆ, ತೆಂಗು, ರಬ್ಬರ್, ಕಾಫಿ ಹಾಗೂ ತೋಟಗಾರಿಕಾ ಬೆಳೆಗಳನ್ನು ಬೆಳೆಯುವ ರೈತರು ತೇವಾಂಶ ಸಂರಕ್ಷಣೆ, ಮಲ್ಚಿಂಗ್ ಹಾಗೂ ನೀರು ಸಂಗ್ರಹಣೆಗೆ ಹೆಚ್ಚಿನ ಆದ್ಯತೆ ನೀಡುವುದು ಒಳಿತು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Weather forecasts indicate weak monsoon activity across much of Karnataka, with only scattered rainfall expected in coastal, Malnad, and interior regions. With possible El Niño conditions leading to below-normal rainfall through September, farmers are advised to prioritize rainwater harvesting and moisture conservation measures.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

3 hours ago

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

23 hours ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

23 hours ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

1 day ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

1 day ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

1 day ago