ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ

June 14, 2026
3:27 PM

ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ ಇದ್ದು, ಕರಾವಳಿ ಹಾಗೂ ಮಲೆನಾಡಿನಲ್ಲಿ ಸಾಧಾರಣ ಮಳೆ, ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ವಾತಾವರಣ ಕಂಡುಬರಲಿದೆ. ಇದೇ ವೇಳೆ ಜೂನ್ ಅಂತ್ಯದ ವೇಳೆಗೆ ಎಲ್‌ನಿನೋ ಆರಂಭವಾಗಿ ನವೆಂಬರ್ ವೇಳೆಗೆ ಮಧ್ಯಮ ತೀವ್ರತೆ ಪಡೆಯುವ ಸೂಚನೆಗಳು ವ್ಯಕ್ತವಾಗಿವೆ.

ಕರಾವಳಿ ಭಾಗದ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಜೂ.15ರ ಬೆಳಿಗ್ಗೆ 8 ಗಂಟೆಯವರೆಗೆ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಭಾಗದ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ನೀಡಲಾಗಿದೆ. ಇದೇ ಪರಿಸ್ಥಿತಿ ಜೂ.20ರವರೆಗೆ ಮುಂದುವರಿಯುವ ಸಾಧ್ಯತೆಗಳಿವೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಈ ಭಾಗದಲ್ಲೂ ಜೂನ್ 20ರವರೆಗೆ ಇದೇ ಮಾದರಿಯ ವಾತಾವರಣ ಮುಂದುವರಿಯುವ ನಿರೀಕ್ಷೆ ಇದೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಇರಲಿದ್ದು, ಜೂ. 18ರಿಂದ ಕೆಲವು ಪ್ರದೇಶಗಳಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ.

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಚಾಮರಾಜನಗರ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಜೂನ್ 20ರವರೆಗೆ ಈ ಮಳೆಯ ವಾತಾವರಣ ಮುಂದುವರಿದು ಬಳಿಕ ಪ್ರಮಾಣ ಕಡಿಮೆಯಾಗುವ ಸಾಧ್ಯತೆಗಳಿವೆ.

ಜೂನ್ ತಿಂಗಳ ಕೊನೆಯ ವೇಳೆಗೆ ಎಲ್‌ನಿನೋ ಪ್ರಭಾವ ಆರಂಭವಾಗುವ ಸಾಧ್ಯತೆ ಇದ್ದು, ನವೆಂಬರ್ ವೇಳೆಗೆ ಮಧ್ಯಮ ತೀವ್ರತೆ ಪಡೆಯಬಹುದು. ಈ ಹಿನ್ನೆಲೆಯಲ್ಲಿ ಈ ಬಾರಿಯ ಮುಂಗಾರು ದುರ್ಬಲವಾಗುವ ಸಾಧ್ಯತೆಗಳಿರುವುದರಿಂದ ರೈತರು ಮತ್ತು ಕೃಷಿಕರು ಈಗ ಬೀಳುತ್ತಿರುವ ಮಳೆಯ ನೀರನ್ನು ಸಂಗ್ರಹಿಸುವುದು ಹಾಗೂ ನೀರು ಸಂಗ್ರಹ ಸಾಮರ್ಥ್ಯ ಹೆಚ್ಚಿಸಿಕೊಳ್ಳುವ ಕ್ರಮಗಳನ್ನು ಕೈಗೊಳ್ಳುವುದು ಸೂಕ್ತ ಎಂದು ಸಲಹೆ ನೀಡಲಾಗಿದೆ.

Weather conditions across Karnataka are expected to remain largely unchanged until June 20. Coastal and Malnad regions are likely to receive light to moderate rainfall, while interior districts may experience scattered showers. With El Niño expected to develop by the end of June and strengthen by November, farmers are advised to prioritize rainwater harvesting and water conservation measures.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ
ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ
July 24, 2026
5:01 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror