Advertisement
ವೆದರ್ ಮಿರರ್

ಹವಾಮಾನ ವರದಿ | 21-06-2026 | ಕರ್ನಾಟಕದಲ್ಲಿ ದುರ್ಬಲ ಮುಂಗಾರು ಮುಂದುವರಿಕೆ – ಜೂನ್ 26ರಿಂದ ಮಳೆ ಚೇತರಿಕೆಯ ನಿರೀಕ್ಷೆ

Share

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಸದ್ಯ ದುರ್ಬಲವಾಗಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ನೀಡಲಾಗಿದೆ. ಕರಾವಳಿ, ಮಲೆನಾಡು ಮತ್ತು ಒಳನಾಡು ಭಾಗಗಳಲ್ಲಿ ಮುಂದಿನ ಕೆಲ ದಿನಗಳು ಸಾಧಾರಣ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.

ಕರಾವಳಿಯಲ್ಲಿ ಜೂನ್ 24ರಿಂದ ಮಳೆ ಆರಂಭ ಸಾಧ್ಯತೆ :  ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲಿನ ತೀವ್ರತೆ ಕಡಿಮೆಯಾಗಿದ್ದು, ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲು ಮತ್ತು ಮೋಡ ಮಿಶ್ರಿತ ವಾತಾವರಣ ಇರಲಿದೆ.

ಪ್ರಸ್ತುತ ಮುಂಗಾರು ದುರ್ಬಲವಾಗಿದ್ದರೂ ಜೂನ್ 22ರಿಂದ ಕರಾವಳಿ ಭಾಗದಲ್ಲಿ ಸ್ವಲ್ಪ ಚೇತರಿಕೆ ಕಾಣಬಹುದು. ಜೂನ್ 24ರಿಂದ ಸಾಮಾನ್ಯ ಮಳೆ ಆರಂಭವಾಗಿ, ಜೂನ್ 26ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿವೆ.

ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ :  ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಹೊಂದಿಕೊಂಡ ಪ್ರದೇಶಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದ್ದು, ಉಳಿದ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಅಥವಾ ತುಂತುರು ಮಳೆಯ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಮಲೆನಾಡು ಭಾಗದಲ್ಲಿ ಜೂನ್ 27ರಿಂದ ಮುಂಗಾರು ಸ್ವಲ್ಪ ಚುರುಕುಗೊಳ್ಳುವ ಲಕ್ಷಣಗಳಿದ್ದು, ಅಲ್ಲಿಯವರೆಗೆ ಸಾಮಾನ್ಯ ಮಳೆ ಮುಂದುವರಿಯಲಿದೆ.

ಉತ್ತರ ಒಳನಾಡಿನಲ್ಲಿ ಅಲ್ಲಲ್ಲಿ ಉತ್ತಮ ಮಳೆ : ವಿಜಯಪುರ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಕಂಡುಬರಬಹುದು.

ಜೂನ್ 22ರಿಂದ ಉತ್ತರ ಒಳನಾಡಿನ ಕೆಲ ಭಾಗಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಗಳಿವೆ.

ದಕ್ಷಿಣ ಒಳನಾಡಿನಲ್ಲಿ ತುಂತುರು ಮಳೆ : ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ನೀಡಲಾಗಿದೆ.

ಜೂನ್ 22ರಿಂದ ಈ ಭಾಗಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಜೂನ್ 26ರಿಂದ ಮುಂಗಾರಿಗೆ ಬಲ : ಅರಬ್ಬಿ ಸಮುದ್ರದಲ್ಲಿ ಮುಂಗಾರು ಮಾರುತಗಳ ಚಲನೆಗೆ ಪೂರಕವಾದ ವಾತಾವರಣ ನಿರ್ಮಾಣವಾಗುತ್ತಿದ್ದು, ಜೂನ್ 26ರಿಂದ ರಾಜ್ಯದಲ್ಲಿ ಮುಂಗಾರು ಚಟುವಟಿಕೆಗಳಿಗೆ ಬಲ ದೊರೆಯುವ ನಿರೀಕ್ಷೆ ಇದೆ. ಇದರಿಂದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ರೈತರಿಗೆ ಸಲಹೆ : ಮುಂದಿನ ನಾಲ್ಕೈದು ದಿನಗಳಲ್ಲಿ ಭಾರೀ ಮಳೆಯ ಸಾಧ್ಯತೆ ಕಡಿಮೆ ಇರುವುದರಿಂದ ಅಡಿಕೆ, ತೆಂಗು, ಕಾಳುಮೆಣಸು ಹಾಗೂ ತೋಟಗಾರಿಕಾ ಬೆಳೆಗಳಲ್ಲಿ ರೋಗ ನಿಯಂತ್ರಣ ಸಿಂಪಡಣೆ, ಗೊಬ್ಬರ ನಿರ್ವಹಣೆ ಹಾಗೂ ತೋಟದ ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳಲು ಇದು ಸೂಕ್ತ ಸಮಯವಾಗಿದೆ. ಉಳಿದ ಕೃಷಿಗಳಲ್ಲಿ ಬಿತ್ತನೆ, ರಸಗೊಬ್ಬರ ನೀಡುವುದು, ಕಳೆ ನಿರ್ವಹಣೆ ಇತ್ಯಾದಿಗಳ ಕಡೆಗೆ ಗಮನ ನೀಡುವುದು ಸೂಕ್ತ.

Monsoon activity remains weak across Karnataka, with mostly cloudy weather and light rainfall expected in many districts until June 26. Weather models indicate a gradual revival of the southwest monsoon from June 26, bringing increased rainfall to coastal and Malnad regions.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯ ಭಯದಲ್ಲಿ ಕೇರಳದ ರಬ್ಬರ್ ರೈತರು – ತೋಟಗಾರಿಕೆಗೆ ಮುಂದೆ ಏನು?

ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…

8 hours ago

ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?

ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…

16 hours ago

ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?

ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್‌…

17 hours ago

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳೆಯರ ಓಟಕ್ಕೆ ಚಿನ್ನದ ಹೊಳಪು – 4×400 ಮೀ. ರಿಲೇಯಲ್ಲಿ ಭರ್ಜರಿ ಗೆಲುವು

ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…

17 hours ago

ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?

ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…

1 day ago

ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ

ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…

1 day ago