Advertisement
ವೆದರ್ ಮಿರರ್

ಹವಾಮಾನ ವರದಿ | 09-03-2026 | ಕರಾವಳಿ–ಮಲೆನಾಡಿನಲ್ಲಿ ಇಂದು ಸಂಜೆ ಗುಡುಗು ಮಳೆಯ ಸಾಧ್ಯತೆ | ಮಾರ್ಚ್ ಮಧ್ಯಭಾಗದಲ್ಲಿ ಮಳೆ ಚಟುವಟಿಕೆ ಹೆಚ್ಚಳ..?

Share

ಮಾರ್ಚ್ 10, 2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ, ಕರ್ನಾಟಕದ ಬಹುತೇಕ ಭಾಗಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.

ಕರಾವಳಿ ಪ್ರದೇಶ :  ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸೆಖೆಯೊಂದಿಗೆ ಬಿಸಿಲು ಮತ್ತು ಮೋಡದ ವಾತಾವರಣ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರಬಹುದು.

ಕೊಡಗಿನ ಕೇರಳ ಗಡಿ ಭಾಗಗಳು, ವಯನಾಡು, ಊಟಿ ಹಾಗೂ ಬಂಡೀಪುರ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಭಾಗದಿಂದ ಕರ್ನಾಟಕ–ಕೇರಳ ಗಡಿ ಪ್ರದೇಶಗಳಾದ ಕಾಸರಗೋಡು ತನಕ ಸಂಜೆ ಅಥವಾ ರಾತ್ರಿ ಮಳೆಯ ಸಾಧ್ಯತೆಗಳಿವೆ.

ಧರ್ಮಸ್ಥಳ, ಬೆಳ್ತಂಗಡಿ ಹಾಗೂ ಉಡುಪಿಯ ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿಯೂ ಮಧ್ಯಾಹ್ನದ ನಂತರ ಅಥವಾ ಸಂಜೆ ಮಳೆಯ ಸಾಧ್ಯತೆ ಇದೆ.

ಮಲೆನಾಡು ಪ್ರದೇಶ : ಕೊಡಗು ಜಿಲ್ಲೆಯ ಕೇರಳ ಗಡಿ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕೊಡಗಿನ ಉಳಿದ ಭಾಗಗಳಲ್ಲಿ ಕೆಲವೆಡೆ ತುಂತುರು ಮಳೆಯ ಸಾಧ್ಯತೆಗಳಿವೆ.

ಹಾಸನ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ಕುದುರೆಮುಖ ಹಾಗೂ ಚಾರ್ಮಾಡಿ ಸುತ್ತಮುತ್ತ ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಸಹ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ನಿರೀಕ್ಷೆಯಿದೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ತಾಪಮಾನ ಹೆಚ್ಚಾಗಲಿದ್ದು, ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣ ಕಂಡುಬರುವ ಸಾಧ್ಯತೆ ಇದೆ.

ಮಾರ್ಚ್ 15 ಅಥವಾ 16ರಿಂದ ಈ ಭಾಗಗಳಲ್ಲಿಯೂ ಕೆಲವೆಡೆ ಮಳೆಯ ಚಟುವಟಿಕೆ ಆರಂಭವಾಗುವ ಲಕ್ಷಣಗಳಿವೆ.

ದಕ್ಷಿಣ ಒಳನಾಡು : ಮೈಸೂರು ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಸಂಜೆ ಅಥವಾ ರಾತ್ರಿ ತುಂತುರು ಮಳೆಯ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಮುಂದಿನ ವಾರ ಮಳೆಯ ಲಕ್ಷಣ : ಬಂಗಾಳಕೊಲ್ಲಿಯ ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಭಾವ ಹೆಚ್ಚಾಗುತ್ತಿದ್ದು, ಮುಂದಿನ ಒಂದು ವಾರದಲ್ಲಿ ದಕ್ಷಿಣ ಒಳನಾಡು, ಉತ್ತರ ಒಳನಾಡು, ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಚಟುವಟಿಕೆ ಆರಂಭವಾಗುವ ಲಕ್ಷಣಗಳಿವೆ.

Weather across Karnataka is expected to remain mostly sunny with cloudy conditions in many districts till March 10 morning. Thunderstorms are likely in parts of coastal and Malnad regions by evening, while rainfall activity may expand across the state around March 15–16 due to strengthening winds from the Bay of Bengal.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

2 hours ago

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

12 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

18 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

1 day ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

1 day ago