Advertisement
ವೆದರ್ ಮಿರರ್

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

Share

ರಾಜ್ಯದಲ್ಲಿ ಹವಾಮಾನದಲ್ಲಿ ತೀವ್ರ ಬದಲಾವಣೆ ಕಂಡುಬರುತ್ತಿದ್ದು, ಕರಾವಳಿ ಸೇರಿದಂತೆ ಹಲವೆಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಕರಾವಳಿ ಭಾಗ : ಕಾಸರಗೋಡು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲಿನ ಜೊತೆಗೆ ಮೋಡದ ವಾತಾವರಣ ಇರಲಿದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಹಾಗೂ ಉಡುಪಿ ಜಿಲ್ಲೆಯ ಕಾರ್ಕಳ ಸುತ್ತಮುತ್ತ ಸಂಜೆ ವೇಳೆ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಮಾರ್ಚ್ 28ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ.

ಮಲೆನಾಡು ಭಾಗ : ಕೊಡಗು ಜಿಲ್ಲೆಯಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಮುಂದುವರಿಯಲಿದೆ.
ಹಾಸನದ ಸಕ್ಲೇಶ್ಪುರ, ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಶೃಂಗೇರಿ, ಕೊಪ್ಪ, ಆಗುಂಬೆ ಪ್ರದೇಶಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಮೋಡದ ವಾತಾವರಣ ಕಾಣಿಸಿಕೊಳ್ಳಲಿದೆ.

ಉತ್ತರ ಒಳನಾಡು :  ಬೆಳಗಾವಿ, ಧಾರವಾಡ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಹಾವೇರಿ, ವಿಜಯನಗರ, ದಾವಣಗೆರೆ, ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ ಜಿಲ್ಲೆಗಳಲ್ಲಿ ತುಂತುರು ಮಳೆಯ ಸಾಧ್ಯತೆ.
ಮಾರ್ಚ್ 28ರಿಂದ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಳ ಸಾಧ್ಯತೆ.

ದಕ್ಷಿಣ ಒಳನಾಡು: ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಸಂಜೆ ಅಥವಾ ರಾತ್ರಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಭಾಗಗಳಲ್ಲಿ ಮೋಡದ ವಾತಾವರಣ ಮುಂದುವರಿಯಲಿದೆ. ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ.

ಕಾರಣವೇನು? :  ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಪ್ರತ್ಯಾವರ್ತ ಮಾರುತಗಳು (Anti-cyclonic circulation) ಮುಂದುವರಿದಿದ್ದು, ಸಮುದ್ರದ ಕಡೆಗಳಿಂದ ಸಾಗುವ ಮೋಡಗಳಲ್ಲಿ ಹೆಚ್ಚಿನ ತೇವಾಂಶ ಇದೆ. ಮೇಲ್ಸ್ತರದ ಗಾಳಿಯ ಚಲನೆ ನಿಧಾನವಾಗಿರುವುದರಿಂದ ಕೆಲವೆಡೆ ಆಲಿಕಲ್ಲು ಸಹಿತ ಮಳೆಯೂ ಸಂಭವಿಸಬಹುದು.

Karnataka is expected to witness an increase in rainfall from March 28, with thunderstorms likely in coastal and Malnad regions. Moisture-laden clouds due to anti-cyclonic circulation over nearby seas may also bring hailstorms in some areas.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಅಡಿಕೆ ಅಕ್ರಮ ಆಮದು ಜಾಲದ ಮೇಲೆ ಇಡಿ ದಾಳಿ – 16 ಕಡೆ ಶೋಧ, ನೂರಾರು ಕೋಟಿ ಹಣದ ವಹಿವಾಟಿನ ತನಿಖೆ

ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…

6 hours ago

ಹವಾಮಾನ ವರದಿ | 01-10-2026 | ಕರ್ನಾಟಕದಲ್ಲಿ ಮತ್ತೆ ಮಳೆ ಇಳಿಕೆ – ಕಾರಣವೇನು?

ಉತ್ತರ ಭಾರತದ ಶುಷ್ಕ ಗಾಳಿ ಹಾಗೂ ಪೆಸಿಫಿಕ್ ಸಾಗರದ ಪ್ರಬಲ ಚಂಡಮಾರುತಗಳ ಪರಿಣಾಮ…

13 hours ago

ಹೊಸ ಅಡಿಕೆ ಧಾರಣೆ 350 ಫಿಕ್ಸ್ – ಆರಂಭಿಕ ಧಾರಣೆಯೇ ಆಮದು ದರಕ್ಕಿಂತ ಕಡಿಮೆ..!

ಹೊಸ ಅಡಿಕೆಯ ಆರಂಭಿಕ ಧಾರಣೆ ₹330–350ಕ್ಕೆ ನಿಗದಿಯಾಗಿದ್ದು, ಆಮದು ಅಡಿಕೆಗೆ ಇರುವ ₹351ರ…

13 hours ago

ರಿಲಯನ್ಸ್ ಫೌಂಡೇಶನ್ ಪದವಿ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಪದವಿ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿವೇತನಕ್ಕೆ…

18 hours ago

ರೈತನ ಹೊಲದಿಂದ ನಿಮ್ಮ ತಟ್ಟೆಯವರೆಗೆ… AI ಬರಲಿದೆ..!

ಕರ್ನಾಟಕದಲ್ಲಿ ಬೀಜದಿಂದ ಗ್ರಾಹಕರ ತಟ್ಟೆಯವರೆಗೆ ಕೃಷಿ ಉತ್ಪನ್ನದ ಪಯಣವನ್ನು ಪತ್ತೆಹಚ್ಚಲು AI ಆಧಾರಿತ…

18 hours ago

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಚಿನ್ನದ ಬೇಟೆ – ಒಂದೇ ದಿನ 4 ಚಿನ್ನ; ಪದಕಗಳ ಸಂಖ್ಯೆ 60ಕ್ಕೆ ಏರಿಕೆ

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಒಂದೇ ದಿನ 4 ಚಿನ್ನ ಸೇರಿದಂತೆ 7 ಪದಕ…

1 day ago