Advertisement
ವೆದರ್ ಮಿರರ್

ಹವಾಮಾನ ವರದಿ | 02-03-2026 | ರಾಜ್ಯದಲ್ಲಿ ಮೋಡ ಕವಿದ ವಾತಾವರಣ… ಆದರೆ, ಮಳೆ ಇದೆಯೋ..? ಇಲ್ವೋ..?!

Share

03.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ನಂತರದಿಂದ ಸಂಜೆ ಹಾಗೂ ರಾತ್ರಿ ವೇಳೆ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆ ಇದೆ. ಘಟ್ಟದ ಕೆಳಭಾಗಗಳಲ್ಲಿ ರಾತ್ರಿ ಹಾಗೂ ತಡರಾತ್ರಿ ವೇಳೆ ತುಂತುರು ಹನಿ ಅಥವಾ ದಟ್ಟ ಮಂಜು ಆವರಿಸುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಮಾನ್ಯವಾಗಿ ಬಿಸಿಲಿನ ಜೊತೆಗೆ ಸಣ್ಣ ಪ್ರಮಾಣದ ಮೋಡ ಕವಿದ ವಾತಾವರಣ ಇರಲಿದೆ.

 ಮಲೆನಾಡು ಪ್ರದೇಶ : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಕವಿದ ವಾತಾವರಣ ನಿರೀಕ್ಷಿಸಲಾಗಿದೆ.
ಕರಾವಳಿ ಭಾಗಗಳಿಗೆ ಹೊಂದಿಕೊಂಡ ಪ್ರದೇಶಗಳಲ್ಲಿ ಸಂಜೆ ಹಾಗೂ ರಾತ್ರಿ ತುಂತುರು ಮಳೆಯಂತಿರುವ ಹನಿ ಬೀಳುವ ಸಾಧ್ಯತೆ ಇದೆ.

ಉತ್ತರ ಒಳನಾಡು: ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಗದಗ, ವಿಜಯಪುರ, ದಾವಣಗೆರೆ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣ ಕಾಣಿಸಿಕೊಳ್ಳಲಿದೆ.
ಆದರೆ ಮಳೆಯ ಲಕ್ಷಣಗಳು ಕಂಡುಬರುವುದಿಲ್ಲ.

ದಕ್ಷಿಣ ಒಳನಾಡು :  ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಮೈಸೂರು, ಚಾಮರಾಜನಗರ ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ತಡರಾತ್ರಿ ಮೋಡ ಪ್ರಮಾಣ ಸ್ವಲ್ಪ ಹೆಚ್ಚಾಗಬಹುದು. ಆದರೆ ಮಳೆಯ ಸಾಧ್ಯತೆ ಇಲ್ಲ.

ಹವಾಮಾನದ ಹಿನ್ನೆಲೆ ಏನು? :  ಬಂಗಾಳಕೊಲ್ಲಿಯ ಶ್ರೀಲಂಕಾ ಪೂರ್ವ ಕರಾವಳಿಯ ಬಳಿ ಮಧ್ಯಮ ಮಟ್ಟದ ಗಾಳಿಯ ತಿರುಗುವಿಕೆ ಕಂಡುಬಂದಿದ್ದರೂ, ಗಾಳಿಯ ಚಲನೆ ಭೂಭಾಗದತ್ತ ಹೆಚ್ಚು ಪ್ರಭಾವ ಬೀರುತ್ತಿಲ್ಲ.  ಇನ್ನೊಂದೆಡೆ ಮಹಾರಾಷ್ಟ್ರ ಕರಾವಳಿಯಲ್ಲಿ ಉಷ್ಣ ಮಾರುತದ ಪರಿಚಲನೆಯಂತಹ ಸ್ಥಿತಿ ನಿರ್ಮಾಣವಾಗಿದ್ದು, ಉತ್ತರ ಭಾರತದ ಭಾಗಗಳಿಂದ ಶುಷ್ಕ ಗಾಳಿ ದಕ್ಷಿಣ ರಾಜ್ಯಗಳತ್ತ ಬೀಸುತ್ತಿದೆ. ಇದರ ಪರಿಣಾಮ ರಾಜ್ಯದಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

 ರೈತರಿಗೆ ಸಲಹೆ

  • ಮಳೆಯ ನಿರೀಕ್ಷೆ ಇಲ್ಲದ ಕಾರಣ ನೀರಾವರಿ ಯೋಜನೆ ಮುಂದುವರಿಸಬಹುದು

  • ಮಂಜು ಬೀಳುವ ಪ್ರದೇಶಗಳಲ್ಲಿ ತೋಟ- ಬೆಳೆಗಳಿಗೆ ಮುಂಜಾಗ್ರತಾ ಕ್ರಮ ಅಗತ್ಯ

  • ಸಂಜೆ ನಂತರ ತೇವಾಂಶ ಹೆಚ್ಚಾಗುವ ಸಾಧ್ಯತೆ ಇದೆ

Karnataka is expected to experience mostly cloudy weather across coastal, Malnad, and interior regions until 8 AM on March 3, 2026. While drizzle or mist may occur in parts of coastal and ghat regions during late night hours, no significant rainfall is forecast due to prevailing dry winds and weak atmospheric circulation.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

7 hours ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

8 hours ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

8 hours ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

22 hours ago

ಮಾರ್ಚ್‌ನಲ್ಲಿ‌ ಮಳೆ ಶಾಕ್….! ರೈತರಿಗೆ ನಷ್ಟದ ಭೀತಿ

ದೇಶದ ವಿವಿದೆಡೆ ಮಾರ್ಚ್‌ ತಿಂಗಳಲ್ಲಿ ಉತ್ತಮ ಮಳೆಯಾಗಿದೆ. ವಿಶೇಷವಾಗಿ ರಾಜ್ಕೋಟ್‌ನಲ್ಲಿ ಅಸಾಮಾನ್ಯ ಹವಾಮಾನದಿಂದ…

22 hours ago

ಕೃಷಿಕರಿಗೂ ಇದೆ ಹೋರ್ಮುಜ್‌ ಸಂಕಷ್ಟ…! ರಸಗೊಬ್ಬರ ಪೂರೈಕೆ ಆತಂಕ…? | ಪ್ರಧಾನಿ ನೇತೃತ್ವದಲ್ಲಿ ಸಭೆ

ಹೋರ್ಮುಜ್‌ ಜಲಸಂಧಿ ಸಂಕಷ್ಟದಿಂದ ಭಾರತಕ್ಕೆ ಗೊಬ್ಬರ ಮತ್ತು ಇಂಧನ ಪೂರೈಕೆ ಮೇಲೆ ಒತ್ತಡ…

1 day ago