Advertisement
ವೆದರ್ ಮಿರರ್

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

Share

08.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಬಿಸಿಲು, ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.

ಕಾಸರಗೋಡು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಹಗಲಿನಲ್ಲಿ ಬಿಸಿಲಿನ ನಡುವೆ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆ ಇದೆ. ಸಂಜೆ ಹಾಗೂ ರಾತ್ರಿ ವೇಳೆ ಘಟ್ಟದ ಕೆಳಗಿನ ಪ್ರದೇಶಗಳ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. ಆದರೆ ಜೋರು ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯಲಿದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ರಾತ್ರಿ ವೇಳೆಯಲ್ಲಿ ಒಂದೆರಡು ಕಡೆ ತುಂತುರು ಮಳೆಯಾಗುವ ಸಾಧ್ಯತೆ ಇದೆ.

ರಾಜ್ಯದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಮಾನ್ಯವಾಗಿ ಬಿಸಿಲು ಹಾಗೂ ಕೆಲವೆಡೆ ಹಗುರ ಮೋಡದ ವಾತಾವರಣ ಇರಲಿದ್ದು, ಮಳೆಯ ಸಾಧ್ಯತೆ ಕಂಡುಬರುವುದಿಲ್ಲ.

ಮಧ್ಯಮ ಸ್ತರದ ವಾತಾವರಣದಲ್ಲಿ ಉಷ್ಣ ಮಾರುತ ಪರಿಚಲನೆ ಮುಂದುವರಿದಿರುವುದರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Weather conditions across coastal Karnataka will remain warm with partial cloud cover until 8 AM on March 8, 2026. Light drizzle may occur in a few foothill areas during evening or night, while most parts of the state are expected to remain dry due to prevailing warm air circulation.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

19 hours ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

19 hours ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

2 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

4 days ago