Advertisement
ವೆದರ್ ಮಿರರ್

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

Share

13.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ, ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಸೆಖೆಯ ವಾತಾವರಣ ಮುಂದುವರಿದರೂ, ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಹಲವೆಡೆ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.

ಕರಾವಳಿ :  ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗಲು ಬಿಸಿಲು ಮತ್ತು ಸೆಖೆ ಹೆಚ್ಚಾಗಲಿದ್ದು, ಸಂಜೆ ಅಥವಾ ರಾತ್ರಿ ವೇಳೆ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಮೇ 14ರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗುವ ಲಕ್ಷಣಗಳು ಕಂಡುಬರುತ್ತಿವೆ. ಆದರೆ ಮೇ 20ರ ಸುಮಾರಿಗೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ತೀರ ಭಾಗಗಳಲ್ಲಿ ಮುಂಗಾರು ಮಾದರಿಯ ಮಳೆಯಾಗುವ ಸಾಧ್ಯತೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಮಲೆನಾಡು :ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಿರಬಹುದು. ಹಾಸನ ಜಿಲ್ಲೆಯ ಸಕ್ಲೇಶ್ಪುರ ಸುತ್ತಮುತ್ತ ಸಾಮಾನ್ಯ ಮಳೆಯ ನಿರೀಕ್ಷೆಯಿದೆ.
ಮೇ 14ರಿಂದ ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗುವ ಸೂಚನೆಗಳಿದ್ದರೂ, ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ.

ಉತ್ತರ ಒಳನಾಡು : ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯಾಗಬಹುದು. ಉಳಿದ ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು.
ಮುಂದಿನ 10 ದಿನಗಳವರೆಗೆ ಉತ್ತರ ಒಳನಾಡಿನಲ್ಲಿ ಜೋರಾದ ಮಳೆಯ ಲಕ್ಷಣಗಳು ಕಾಣಿಸುತ್ತಿಲ್ಲ.

ದಕ್ಷಿಣ ಒಳನಾಡು :  ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಸಂಜೆ ವೇಳೆ ಮೋಡದ ವಾತಾವರಣ ಕಂಡುಬರುವ ಸಾಧ್ಯತೆ ಇದೆ. ಮೇ 14ರಿಂದ ಕೆಲವು ಭಾಗಗಳಲ್ಲಿ ಮಳೆಯ ನಿರೀಕ್ಷೆಗಳಿವೆ.

ಬಂಗಾಳಕೊಲ್ಲಿಯ ತಮಿಳುನಾಡು ಕರಾವಳಿಯ ಬಳಿ ಉಂಟಾಗಿರುವ ತಿರುವಿಕೆ ಇನ್ನೆರಡು ದಿನಗಳಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿದ್ದು, ಅದರ ಬಳಿಕ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಚಟುವಟಿಕೆ ಹೆಚ್ಚಾಗುವ ನಿರೀಕ್ಷೆಯಿದೆ.

Karnataka is expected to witness hot and humid conditions across most regions till May 13 morning, with scattered thunder showers likely during evenings and nights. Coastal rainfall may reduce slightly after May 14, but monsoon-like rains are possible around May 20 in Dakshina Kannada, Udupi, and Kasaragod coastal areas. Interior districts may also receive isolated rains after the weakening of the Bay of Bengal circulation.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

6 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

6 hours ago

ರಾಜ್ಯಾದ್ಯಂತ ಆರ್ಭಟಿಸುತ್ತಿರುವ ವರುಣ – ಭದ್ರಾ-ನೇತ್ರಾವತಿ ಅಪಾಯದ ಮಟ್ಟ ಮೀರಿ ಪ್ರವಾಹ

ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…

6 hours ago

ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ರೈಲು ಸಂಚಾರಕ್ಕೆ ತಾತ್ಕಾಲಿಕ ಅಡ್ಡಿ

ಶಿರಾಡಿ ಘಾಟ್‌ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…

7 hours ago

ಮೊಬೈಲ್ ನೋಡುತ್ತಾ ಊಟ ಮಾಡಬೇಡಿ, ಶಿಸ್ತಿನ ಜೀವನವೇ ಆರೋಗ್ಯದ ರಹಸ್ಯ – ರಾಘವೇಶ್ವರ ಶ್ರೀ

ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…

18 hours ago

ಭಾರೀ ಮಳೆಯ ಎಚ್ಚರಿಕೆ | ಕರಾವಳಿ ಕರ್ನಾಟಕದಲ್ಲಿ ಅತಿ ಭಾರೀ ಮಳೆ – ಪ್ರವಾಹ- ಭೂಕುಸಿತದ ಎಚ್ಚರಿಕೆ

ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಕರ್ನಾಟಕ ಹಾಗೂ ಕೇರಳದಲ್ಲಿ ಇಂದು ಭಾರೀ ಮಳೆಯ…

22 hours ago