Advertisement
ವೆದರ್ ಮಿರರ್

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

Share

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮುಂದುವರಿದಿರುವ ಗುಡುಗು ಮಳೆಯ ವಾತಾವರಣದ ನಡುವೆ ಇದೀಗ ನೈರುತ್ಯ ಮುಂಗಾರು ಚಟುವಟಿಕೆಗಳ ಮೊದಲ ಲಕ್ಷಣಗಳು ಕಾಣಿಸಿಕೊಳ್ಳಲಾರಂಭಿಸಿವೆ. ಅರಬ್ಬಿ ಸಮುದ್ರದ ಕಡೆಯಿಂದ ಗಾಳಿಯ ಚಲನೆ ಬದಲಾಗುತ್ತಿರುವ ಹಿನ್ನೆಲೆಯಲ್ಲಿ ಮೇ 19 ಅಥವಾ 20ರಿಂದ ಮುಂಗಾರು ಮಾದರಿಯ ಗಾಳಿಯ ಪ್ರವಾಹ ಆರಂಭವಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ವಿಶ್ಲೇಷಣೆ ಸೂಚಿಸಿದೆ. ಆದರೆ ಆರಂಭಿಕ ಹಂತದಲ್ಲಿ ಮಳೆಯ ತೀವ್ರತೆ ದುರ್ಬಲವಾಗಿರುವ ಸಾಧ್ಯತೆಗಳೂ ಇವೆ.

ಕರಾವಳಿಯಲ್ಲಿ ಮೋಡ-ಬಿಸಿಲಿನ ಆಟ, ಸಂಜೆ ಮಳೆ ಸಾಧ್ಯತೆ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇವತ್ತು ಮೋಡ ಹಾಗೂ ಬಿಸಿಲಿನ ಮಿಶ್ರ ವಾತಾವರಣ ಮುಂದುವರಿಯಲಿದೆ. ಮಧ್ಯಾಹ್ನ ನಂತರ, ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಈಗಿನ ಹವಾಮಾನದ ಪ್ರಕಾರ, ಮೇ 19 ಅಥವಾ 20ರಿಂದ ಅರಬ್ಬಿ ಸಮುದ್ರದ ಕಡೆಯಿಂದ ಗಾಳಿಯು ಮುಂಗಾರು ಮಾದರಿಯಲ್ಲಿ ಚಲನೆ ಆರಂಭಿಸುವ ಸೂಚನೆಗಳು ಕಂಡು ಬರುತ್ತಿವೆ. ಇದು ಮುಂಗಾರು ಪ್ರಗತಿಗೆ ಪೂರಕವಾದರೂ ಆರಂಭಿಕ ಮಳೆಯ ಪ್ರಮಾಣ ಹೆಚ್ಚಿನದಾಗದಿರಬಹುದು.

ಮಲೆನಾಡಿನಲ್ಲಿ ನಿರೀಕ್ಷಿತ ಮಳೆ ಇನ್ನೂ ಕಾಣಿಸಿಲ್ಲ : ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದ್ದರೂ ನಿರೀಕ್ಷಿತ ಮಟ್ಟದಲ್ಲಿ ಮಳೆಯಾಗುತ್ತಿಲ್ಲ. ಇವತ್ತು ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹಲವು ಭಾಗಗಳಲ್ಲಿ ಮಧ್ಯಾಹ್ನ ನಂತರ ಮತ್ತು ರಾತ್ರಿ ವೇಳೆಗೆ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.

ಆದರೆ ಈಗಿನ ಹವಾಮಾನ ಸ್ಥಿತಿಗತಿಗಳನ್ನು ಗಮನಿಸಿದರೆ ಮೇ 19ರ ನಂತರ ಮಳೆಯ ಪ್ರಮಾಣ ಸ್ವಲ್ಪ ಇಳಿಕೆಯಾಗುವ ಸಾಧ್ಯತೆಗಳಿವೆ.

ಉತ್ತರ ಒಳನಾಡಿನಲ್ಲಿ ಕೆಲ ಜಿಲ್ಲೆಗಳಿಗೆ ಗುಡುಗು ಮಳೆ :  ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಹಾಗೂ ಬಳ್ಳಾರಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಂಜೆ ವೇಳೆಗೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಉಳಿದ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಮುಂದುವರಿಯಲಿದ್ದು, ಹೆಚ್ಚಿನ ಮಳೆಯ ಸಾಧ್ಯತೆ ಕಡಿಮೆ ಎಂದು ಅಂದಾಜಿಸಲಾಗಿದೆ. ಮೇ 19ರಿಂದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ.

ದಕ್ಷಿಣ ಒಳನಾಡಿನಲ್ಲೂ ಮಳೆ ಇಳಿಮುಖ ಸಾಧ್ಯತೆ : ದಾವಣಗೆರೆ, ವಿಜಯನಗರ, ಚಿತ್ರದುರ್ಗ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಂಜೆ ವೇಳೆಗೆ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಉಳಿದ ಜಿಲ್ಲೆಗಳಲ್ಲಿ ಗಾಳಿಯ ಒತ್ತಡ ಹೆಚ್ಚಾದರೆ ಸಾಮಾನ್ಯ ಮಳೆಯಾಗುವ ಸಾಧ್ಯತೆಗಳಿವೆ. ಆದರೆ ಮೇ 19ರಿಂದ ದಕ್ಷಿಣ ಒಳನಾಡಿನಲ್ಲಿಯೂ ಮಳೆಯ ಪ್ರಮಾಣ ಕಡಿಮೆಯಾಗುವ ಸೂಚನೆಗಳು ಕಂಡು ಬರುತ್ತಿವೆ.

ಮುಂಗಾರು ಮುಂದುವರಿಕೆಗೆ ಅರಬ್ಬೀ ಸಮುದ್ರದಲ್ಲಿ ಸ್ವಲ್ಪ ತೊಡಕು? :  ಹವಾಮಾನ ಮಾದರಿಗಳ ಪ್ರಕಾರ ಮೇ 19ರಂದು ಅರಬ್ಬಿ ಸಮುದ್ರದಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ (Cyclonic circulation) ಉಂಟಾಗುವ ಸಾಧ್ಯತೆ ಇದೆ. ಇದರಿಂದ ಮುಂಗಾರು ಮುಂದುವರಿಕೆಗೆ ಸ್ವಲ್ಪ ಮಟ್ಟಿನ ತಾತ್ಕಾಲಿಕ ತೊಡಕು ಉಂಟಾಗಬಹುದು.

ಆದರೆ ಮತ್ತೊಂದೆಡೆ ಬಂಗಾಳಕೊಲ್ಲಿಯಿಂದ ತಮಿಳುನಾಡು ಕರಾವಳಿಯ ಮೂಲಕ ಒಳನುಗ್ಗುವ ಗಾಳಿಯು ದಿಕ್ಕು ಬದಲಿಸಿ ಈಶಾನ್ಯ ದಿಕ್ಕಿಗೆ ಚಲಿಸುವ ಸಾಧ್ಯತೆ ಇದೆ. ಇದು ನೈರುತ್ಯ ಮುಂಗಾರು ಮುಂದುವರಿಯಲು ಅನುಕೂಲಕರ ವಾತಾವರಣ ಸೃಷ್ಟಿಸಬಹುದು ಎಂದು ವಿಶ್ಲೇಷಿಸಲಾಗಿದೆ.

ರೈತರು ಎಚ್ಚರಿಕೆಯಿಂದ ಕೃಷಿ ಕಾರ್ಯ ನಡೆಸುವುದು ಉತ್ತಮ :  ರಾಜ್ಯದ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇರುವುದರಿಂದ ರೈತರು ಬೆಳೆ ಒಣಗಿಸುವುದು, ಗೊಬ್ಬರ ಸಿಂಪಡಣೆ ಹಾಗೂ ಕೊಯ್ಲು ಕಾರ್ಯಗಳಲ್ಲಿ ಎಚ್ಚರಿಕೆ ವಹಿಸುವುದು ಒಳಿತು. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಂಜೆ ವೇಳೆಯ ಗುಡುಗು ಮಳೆಯ ಸಂದರ್ಭಗಳಲ್ಲಿ ಮುನ್ನೆಚ್ಚರಿಕೆ ಅಗತ್ಯವಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Karnataka is likely to witness early monsoon-like wind patterns from May 19 or 20 as Arabian Sea winds begin shifting. Coastal, Malnad, and parts of interior Karnataka may continue to receive scattered thunder showers until then. However, rainfall activity is expected to reduce slightly after May 19 across many regions. Weather experts say changing wind patterns over the Bay of Bengal may still support the southwest monsoon’s further progress.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

7 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

13 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

17 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

1 day ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

1 day ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

1 day ago