Advertisement
ವೆದರ್ ಮಿರರ್

ಹವಾಮಾನ ವರದಿ | 27-11-2026 | ನ.29ರಿಂದ ಉತ್ತರ ಒಳನಾಡಿನಲ್ಲಿ ಒಣ ಹವೆ ಸಾಧ್ಯತೆ ? ಮುಂದಿನ ಹವಾಮಾನ ಬೆಳವಣಿಗೆ ಏನು?

Share

ಕರ್ನಾಟಕದ ವಿವಿಧ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಕಂಡುಬರುತ್ತಿರುವ ಮಳೆಯ ವಾತಾವರಣ ನಿಧಾನವಾಗಿ ಕಡಿಮೆಯಾಗುವ ಸೂಚನೆಗಳಿವೆ. ನವೆಂಬರ್ 28ರಂದು ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಮಳೆಯಾಗುವ ಸಾಧ್ಯತೆಯಿದೆ. ಆದರೆ ಉತ್ತರ ಒಳನಾಡಿನಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುತ್ತಿದ್ದು, ನವೆಂಬರ್ 29ರಿಂದ ಒಣ ಹವೆ ಆವರಿಸುವ ಲಕ್ಷಣಗಳಿವೆ.

Advertisement

ಕರಾವಳಿ: ದಕ್ಷಿಣ ಕನ್ನಡ, ಉಡುಪಿಯಲ್ಲಿ ಗುಡುಗು ಸಹಿತ ಮಳೆ :  ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಕಡೆ ಸಾಮಾನ್ಯ ಮಳೆಯಾಗುವ ಸಾಧ್ಯತೆಯಿದೆ.  ಪ್ರಸ್ತುತ ಮುನ್ಸೂಚನೆಯಂತೆ ಕರಾವಳಿ ಜಿಲ್ಲೆಗಳಲ್ಲಿ ನವೆಂಬರ್ 28ರವರೆಗೆ ಮಳೆ ಮುಂದುವರಿಯುವ ಲಕ್ಷಣಗಳಿವೆ. ನಂತರ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದೆ.

ಮಲೆನಾಡು: ಕೊಡಗು, ಚಿಕ್ಕಮಗಳೂರಿನಲ್ಲಿ ಮಳೆ :  ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಮಲೆನಾಡಿನ ಜಿಲ್ಲೆಗಳಲ್ಲಿ ನವೆಂಬರ್ 28ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡು: ನ.29ರಿಂದ ಒಣ ಹವೆ : ಉತ್ತರ ಒಳನಾಡಿನ ಬೀದರ್ ಮತ್ತು ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಅಲ್ಲಲ್ಲಿ ಮೋಡದ ವಾತಾವರಣ ಕಂಡುಬರಬಹುದು. ನವೆಂಬರ್ 28ರಿಂದ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು. ನವೆಂಬರ್ 29ರಿಂದ ಒಣ ಹವೆ ಆವರಿಸುವ ಲಕ್ಷಣಗಳಿವೆ.

ದಕ್ಷಿಣ ಒಳನಾಡು: ಹಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆ :  ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ತುಮಕೂರು, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಪ್ರಸ್ತುತ ಮುನ್ಸೂಚನೆಯಂತೆ ನವೆಂಬರ್ 28ರಿಂದ ದಕ್ಷಿಣ ಒಳನಾಡಿನಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದ್ದು, ಮುಂದಿನ ಒಂದೆರಡು ದಿನಗಳ ಕಾಲ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣ ಮುಂದುವರಿಯಬಹುದು.

ದಕ್ಷಿಣ ಅಂಡಮಾನಿನಲ್ಲಿ ಮತ್ತೊಂದು ಹವಾಮಾನ ವ್ಯವಸ್ಥೆ? : ನವೆಂಬರ್ 29 ಅಥವಾ 30ರಂದು ದಕ್ಷಿಣ ಅಂಡಮಾನ್ ಕರಾವಳಿ ಸಮೀಪ ವಾಯುಭಾರ ಕುಸಿತಕ್ಕೆ ಅನುಕೂಲಕರವಾದ ಹವಾಮಾನ ತಿರುವಿಕೆ ರೂಪುಗೊಳ್ಳುವ ಲಕ್ಷಣಗಳಿವೆ. ಆದರೆ ಈ ವ್ಯವಸ್ಥೆ ಮುಂದಿನ ಹಂತದಲ್ಲಿ ವಾಯುಭಾರ ಕುಸಿತವಾಗಿ ಬಲಗೊಳ್ಳುತ್ತದೆಯೇ, ಯಾವ ದಿಕ್ಕಿನಲ್ಲಿ ಚಲಿಸುತ್ತದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಹೀಗಾಗಿ ಇದರ ಮುಂದಿನ ಬೆಳವಣಿಗೆ ಮತ್ತು ಪಥವನ್ನು ಕಾದು ನೋಡಬೇಕಾಗಿದೆ. ಈ ವ್ಯವಸ್ಥೆಯಿಂದ ಕರ್ನಾಟಕದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆಯ ಬಗ್ಗೆ ಈಗಲೇ ಖಚಿತವಾಗಿ ಹೇಳಲು ಸಾಧ್ಯವಿಲ್ಲ.

ರೈತರು ಗಮನಿಸಬೇಕಾದ ಅಂಶ :  ಮಳೆಯ ಪ್ರಮಾಣ ಕಡಿಮೆಯಾಗುವ ಸೂಚನೆ ಇರುವುದರಿಂದ ರೈತರು  ಸ್ಥಳೀಯ ಹವಾಮಾನಕ್ಕೆ ಅನುಗುಣವಾಗಿ ಕೃಷಿ ಕೆಲಸ ಯೋಜಿಸಬಹುದು. ದಕ್ಷಿಣ ಅಂಡಮಾನ್ ಸಮುದ್ರದ ಹೊಸ ಹವಾಮಾನ ವ್ಯವಸ್ಥೆಯ ಬೆಳವಣಿಗೆ ಗಮನದಲ್ಲಿಟ್ಟುಕೊಂಡು ಮುಂದಿನ ದಿನಗಳ ಮುನ್ಸೂಚನೆಯನ್ನು ಪರಿಶೀಲಿಸುವುದು ಸೂಕ್ತ.

ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಅಡಿಕೆ ಕಳ್ಳಸಾಗಣೆ – ಈಶಾನ್ಯ ಭಾರತದ ರಾಷ್ಟ್ರೀಯ ಭದ್ರತೆಗೂ ಸವಾಲು – ದೇಶದ ಅಡಿಕೆ ಬೆಳೆಗಾರರ ಹಿತಾಸಕ್ತಿಗೂ ಆತಂಕ

ಈಶಾನ್ಯ ಭಾರತದಲ್ಲಿ ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶ ಮಾರ್ಗವಾಗಿ ಅಡಿಕೆ ಕಳ್ಳಸಾಗಣೆ ನಡೆಯುತ್ತಿರುವ ಬಗ್ಗೆ…

3 hours ago

ಹವಾಮಾನ ವರದಿ | 26-11-2026 | ಡಿಸೆಂಬರ್ ಮೊದಲ ವಾರದಲ್ಲಿ ಮತ್ತೆ ಮಳೆಯ ಸಾಧ್ಯತೆ?

ಕರ್ನಾಟಕದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ನವೆಂಬರ್ 27ರಂದು…

17 hours ago

ನಂದಿನಿ ಮೊಸರಿನ ದರ ಇಳಿಕೆ – ನ.29ರಿಂದ ಹೊಸ ಬೆಲೆ ಜಾರಿ; ಲೀಟರ್‌ಗೆ ₹2 ಕಡಿತ!

ನವೆಂಬರ್ 29ರಿಂದ ನಂದಿನಿ ಮೊಸರಿನ ದರ ಇಳಿಕೆಯಾಗಲಿದೆ. ಅರ್ಧ ಲೀಟರ್ ಮೊಸರಿಗೆ ₹1…

17 hours ago

ಅಡಿಕೆಯಿಂದ ಕಾಕ್‌ಟೇಲ್ ತಯಾರಿಸಿದ ವಿಯೆಟ್ನಾಂ ಯುವಕ – ಅಡಿಕೆಗೆ ಜಾಗತಿಕ ವೇದಿಕೆಯಲ್ಲಿ ಹೊಸ ರೂಪ

ವಿಯೆಟ್ನಾಂನ 27 ವರ್ಷದ ಬಾರ್ಟೆಂಡರ್ ನ್ಗುಯೆನ್ ತುಂಗ್ ಲಾಮ್ ಅವರು ಅಡಿಕೆ ಮತ್ತು…

17 hours ago

ಮಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ – 10 ಸಾವಿರಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ; ಆನ್‌ಲೈನ್ ನೋಂದಣಿ ಆರಂಭ

ನವೆಂಬರ್ 30ರಂದು ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದಲ್ಲಿ ಕರಾವಳಿ ವಿಭಾಗ ಮಟ್ಟದ…

18 hours ago

ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಉಚಿತ ಕಿಮೋಥೆರಪಿ: ಮೂರು ತಿಂಗಳಲ್ಲಿ ಡೇ-ಕೇರ್ ಕೇಂದ್ರ ಸ್ಥಾಪನೆಗೆ ಗುರಿ

ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಮುಂದಿನ ಮೂರು ತಿಂಗಳೊಳಗೆ ಕಿಮೋಥೆರಪಿ ಡೇ-ಕೇರ್ ಕೇಂದ್ರಗಳನ್ನು ಸ್ಥಾಪಿಸಲು…

2 days ago