Advertisement
ವೆದರ್ ಮಿರರ್

ಹವಾಮಾನ ವರದಿ | 07-11-2026 | ನ.14ರಿಂದ ಮತ್ತೆ ಮಳೆ ? ಅರಬ್ಬಿ ಸಮುದ್ರದಲ್ಲಿ ಹೊಸ ಬೆಳವಣಿಗೆ

Share

ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ನವೆಂಬರ್ 8ರಂದು ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಆದರೆ ನವೆಂಬರ್ 9 ರಿಂದ ಈ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಜೊತೆಗೆ ರಾತ್ರಿ ವೇಳೆ ಚಳಿ ಆರಂಭವಾಗುವ ಲಕ್ಷಣಗಳಿವೆ. ಇದೇ ವೇಳೆ ಅರಬ್ಬಿ ಸಮುದ್ರದಲ್ಲಿ ರೂಪುಗೊಳ್ಳಬಹುದಾದ ವಾಯುಭಾರ ಕುಸಿತದ ಪರಿಣಾಮವಾಗಿ ನವೆಂಬರ್ 14 ರಿಂದ ರಾಜ್ಯದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಗೋಚರಿಸುತ್ತಿದೆ.

ನವೆಂಬರ್ 11ರ ಸುಮಾರಿಗೆ ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯ ದಕ್ಷಿಣ ಭಾಗದಲ್ಲಿ ವಾಯುಭಾರ ಕುಸಿತದಂತಹ ಹವಾಮಾನ ತಿರುವಿಕೆ ಉಂಟಾಗುವ ಲಕ್ಷಣಗಳಿವೆ. ಅರಬ್ಬಿ ಸಮುದ್ರದ ಭಾಗದಲ್ಲಿ ರೂಪುಗೊಳ್ಳುವ ವ್ಯವಸ್ಥೆ ಮುಂದೆ ವಾಯುಭಾರ ಕುಸಿತವಾಗಿ ಬಲಗೊಳ್ಳುವ ಸಾಧ್ಯತೆಯಿದ್ದು, ಅದರ ಚಲಿಸುವ ಪಥದ ಮೇಲೆ ಮುಂದಿನ ಮಳೆಯ ಪ್ರಮಾಣ ಮತ್ತು ವ್ಯಾಪ್ತಿ ಅವಲಂಬಿತವಾಗಿರಲಿದೆ.

ಕರಾವಳಿ: ಇಂದು ಗುಡುಗು ಸಹಿತ ಮಳೆ; ನಾಳೆಯಿಂದ ಬಿಸಿಲು–ಚಳಿ :  ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಅಲ್ಲಲ್ಲಿ ಸ್ವಲ್ಪ ಮೋಡದ ವಾತಾವರಣ ಇರಬಹುದು.

ಪ್ರಸ್ತುತ ಮುನ್ಸೂಚನೆಯಂತೆ ನವೆಂಬರ್ 9ರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ ಬಿಸಿಲಿನ ವಾತಾವರಣ ಆರಂಭವಾಗುವ ಲಕ್ಷಣಗಳಿವೆ. ರಾತ್ರಿ ವೇಳೆ ಚಳಿಯ ವಾತಾವರಣವೂ ಕಾಣಿಸಿಕೊಳ್ಳಬಹುದು. ಆದರೆ ನವೆಂಬರ್ 14ರಿಂದ ಅರಬ್ಬಿ ಸಮುದ್ರದಲ್ಲಿ ರೂಪುಗೊಳ್ಳಬಹುದಾದ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ ಜಿಲ್ಲೆಗಳಲ್ಲಿ ಮತ್ತೆ ಮಳೆಯ ಸಾಧ್ಯತೆ ಇದೆ.

ಮಲೆನಾಡು: ನ.9ರಿಂದ ಒಣಹವೆ, ರಾತ್ರಿ ಚಳಿ : ಕೊಡಗು ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಹಾಗೂ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಕರಾವಳಿಗೆ ಹೊಂದಿಕೊಂಡಿರುವ ಭಾಗಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಉಳಿದ ಪ್ರದೇಶಗಳಲ್ಲಿ ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರಬಹುದು. ನವೆಂಬರ್ 9ರಿಂದ ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಿ ಒಣಹವೆ ಹಾಗೂ ರಾತ್ರಿ ಚಳಿಯ ವಾತಾವರಣ ಆರಂಭವಾಗುವ ಲಕ್ಷಣಗಳಿವೆ.

ಉತ್ತರ ಒಳನಾಡು: ಶುಷ್ಕ ಗಾಳಿಯಿಂದ ಒಣಹವೆ ಮುಂದುವರಿಕೆ : ಉತ್ತರ ಭಾರತದ ಕಡೆಯಿಂದ ಬೀಸುತ್ತಿರುವ ಶುಷ್ಕ ಗಾಳಿಯ ಪರಿಣಾಮವಾಗಿ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಸದ್ಯಕ್ಕೆ ಈ ಭಾಗಗಳಲ್ಲಿ ಮಳೆಯ ಪ್ರಮುಖ ಸೂಚನೆಗಳಿಲ್ಲ.

ದಕ್ಷಿಣ ಒಳನಾಡು: ಕೆಲವು ಜಿಲ್ಲೆಗಳಲ್ಲಿ ಸಂಜೆ ಮಳೆ: ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಹಾಗೂ ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಉಳಿದ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯ ಸೂಚನೆಗಳಿಲ್ಲ.

ನ.11ರ ಬಳಿಕ ಹವಾಮಾನದಲ್ಲಿ ಮಹತ್ವದ ಬದಲಾವಣೆ? : ನವೆಂಬರ್ 11ರ ಸುಮಾರಿಗೆ ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯ ದಕ್ಷಿಣ ಭಾಗದಲ್ಲಿ ವಾಯುಭಾರ ಕುಸಿತದಂತಹ ಹವಾಮಾನ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.

ಇವುಗಳಲ್ಲಿ ಅರಬ್ಬಿ ಸಮುದ್ರದ ಭಾಗದಲ್ಲಿ ರೂಪುಗೊಳ್ಳುವ ವ್ಯವಸ್ಥೆ ಮುಂದೆ ವಾಯುಭಾರ ಕುಸಿತವಾಗಿ ಬಲಗೊಳ್ಳುವ ಸಾಧ್ಯತೆ ಇದೆ. ಈ ವ್ಯವಸ್ಥೆಯ ಚಲಿಸುವ ಪಥ ಯಾವ ದಿಕ್ಕಿನಲ್ಲಿರುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

ಅನುಕೂಲಕರವಾಗಿ ಚಲಿಸಿದರೆ ಕರ್ನಾಟಕದ ಕೆಲವು ಭಾಗಗಳಲ್ಲಿ ಮತ್ತೆ ಮಳೆಯಾಗುವ ನಿರೀಕ್ಷೆಯಿದೆ. ಪ್ರಸ್ತುತ ಮುನ್ಸೂಚನೆಯ ಪ್ರಕಾರ ನವೆಂಬರ್ 14ರಿಂದ ಮಳೆ ಆರಂಭವಾಗುವ ಸಾಧ್ಯತೆ ಕಂಡುಬರುತ್ತಿದೆ. ಆದರೆ ಮಳೆಯ ವ್ಯಾಪ್ತಿ, ಪ್ರಮಾಣ ಮತ್ತು ಆರಂಭದ ಸಮಯವನ್ನು ಮುಂದಿನ ಹವಾಮಾನ ಬೆಳವಣಿಗೆಗಳೇ ನಿರ್ಧರಿಸಲಿವೆ.

ರೈತರು ಏನು ಗಮನಿಸಬೇಕು? :  ಕರಾವಳಿ ಹಾಗೂ ಮಲೆನಾಡಿನ ರೈತರು ನವೆಂಬರ್ 9ರಿಂದ ಬಿಸಿಲು ಮತ್ತು ರಾತ್ರಿ ಚಳಿಯ ವಾತಾವರಣವನ್ನು ಗಮನದಲ್ಲಿಟ್ಟುಕೊಂಡು ಕೃಷಿ ಕೆಲಸ ಯೋಜಿಸಬಹುದು.

Coastal and Malnad regions of Karnataka may receive scattered evening and nighttime thunderstorms on November 8. From November 9, these regions are likely to experience drier weather, sunshine during the day and cooler nights. North Interior Karnataka is expected to remain dry due to northerly dry winds, while parts of South Interior Karnataka may receive isolated evening showers. A possible weather disturbance over the Arabian Sea and the southern Bay of Bengal around November 11 could develop further, particularly over the Arabian Sea. Depending on its movement, rainfall may return to parts of Karnataka from around November 14.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ದೀಪಾವಳಿ ಪಟಾಕಿ ಅವಘಡ: ಮಕ್ಕಳ ಕಣ್ಣು, ಮುಖದ ರಕ್ಷಣೆಗೆ ಪೋಷಕರು ಎಚ್ಚರ ವಹಿಸಿ

ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿಸುವುದರಿಂದ ಮಕ್ಕಳ ಕಣ್ಣು ಮತ್ತು ಮುಖಕ್ಕೆ ಗಂಭೀರ ಗಾಯಗಳಾಗುವ…

5 hours ago

ಸಾಗುವಳಿ ಪತ್ರಕ್ಕಾಗಿ ರೈತರಿಗೆ ಎನ್‌ಒಸಿ – ಜಂಟಿ ಸರ್ವೆ ಬಳಿಕ ಕ್ರಮ, 4 ತಿಂಗಳಲ್ಲಿ ಸರ್ವೆ ಪೂರ್ಣಗೊಳಿಸುವ ಭರವಸೆ

ಸಾಗುವಳಿ ಚೀಟಿ ಪಡೆಯಲು ರೈತರಿಗೆ ಅರಣ್ಯ ಇಲಾಖೆಯಿಂದ ಎನ್‌ಒಸಿ ನೀಡುವ ಕುರಿತು ಜಂಟಿ…

5 hours ago

ಪೆಟ್ರೋಲ್‌ನಲ್ಲಿ ಶೇ.20ಕ್ಕಿಂತ ಹೆಚ್ಚು ಎಥೆನಾಲ್ ಮಿಶ್ರಣ ಪತ್ತೆ

ರಾಜ್ಯದ ವಿವಿಧ ಭಾಗಗಳಿಂದ ಸಂಗ್ರಹಿಸಿದ 63 ಪೆಟ್ರೋಲ್ ಮಾದರಿಗಳ ಪರೀಕ್ಷೆಯಲ್ಲಿ ನಿಗದಿತ ಶೇ.20ಕ್ಕಿಂತ…

6 hours ago

ನ್ಯಾನೊ ರಸಗೊಬ್ಬರ ಬಳಕೆಯಿಂದ ಮಣ್ಣು, ಅಂತರ್ಜಲ ರಕ್ಷಣೆ

ಸಾಂಪ್ರದಾಯಿಕ ರಸಗೊಬ್ಬರಗಳ ಅಸಮರ್ಪಕ ಬಳಕೆಯಿಂದ ಮಣ್ಣಿನ ಫಲವತ್ತತೆ ಮತ್ತು ಅಂತರ್ಜಲದ ಗುಣಮಟ್ಟದ ಮೇಲೆ…

1 day ago

ಬರಪೀಡಿತ ರೈತರಿಗೆ ತಲಾ ₹5 ಸಾವಿರ ಪರಿಹಾರ – ಯಾದಗಿರಿಯ 1.06 ಲಕ್ಷ ರೈತರಿಗೆ ಮೊದಲ ಕಂತು ಬಿಡುಗಡೆ

ಬರಪೀಡಿತ ರೈತರಿಗೆ ತಲಾ ₹5,000 ಪರಿಹಾರ ನೀಡಲು ನಿರ್ಧರಿಸಿರುವ ರಾಜ್ಯ ಸರ್ಕಾರ, ಯಾದಗಿರಿ…

1 day ago

ಅಡಿಕೆಯ ಸಂಶೋಧನೆ –  ಕನಸಿಗೂ ಕಾರ್ಯಸಾಧ್ಯತೆಗೂ ನಡುವೆ ಉಳಿದ ಅಂತರ

2008–09ರಲ್ಲಿ ಅಡಿಕೆಯ ಪರ್ಯಾಯ ಬಳಕೆಗಳ ಸಂಶೋಧನೆಗಾಗಿ ಮಂಗಳೂರಿನ ARDF ಸಂಸ್ಥೆಗೆ ₹1 ಕೋಟಿ…

2 days ago